Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

- Advertisement -
- Advertisement -

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನ ತಪ್ಪಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ಮುಗ್ಧ ರೈತರ ಕೊಲೆಗಾರರನ್ನು ರಕ್ಷಿಸಲು ಉತ್ತರ ಪ್ರದೇಶ ಸರ್ಕಾರವು ಸುಳ್ಳು ಮತ್ತು ವಂಚನೆಯ ಜಾಲ ಮುಂದುವರಿಸಿದೆ ಎಂದು ಇಂದಿನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

3 ಪೊಲೀಸ್ ತಂಡಗಳು ಕಾಣೆಯಾದ ಆರೋಪಿ ಆಶಿಶ್ ಮಿಶ್ರಾ ಅವರನ್ನು ಹುಡುಕುತ್ತಿವೆ. ಇಬ್ಬರನ್ನು ಬಂಧಿಸಲಾಗಿದೆ ಮತ್ತು ಮೂರು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆದರೆ ಯುಪಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೊಳಕು ಆಟಗಳನ್ನು ನಿಲ್ಲಿಸಬೇಕು ಎಂದು ಎಸ್‌ಕೆಎಂ ಹೇಳಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಲು ಈಗ ಇನ್ನೊಂದು ಕಾರಣ ದೊರೆತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ಯುಪಿ ಸರ್ಕಾರ, ಒಕ್ಕೂಟ ಸರ್ಕಾರ ಮತ್ತು ಭಾರತದ ರಾಷ್ಟ್ರಪತಿಗಳಿಂದ ಆಶಿಶ್ ಮಿಶ್ರಾ ಬಂಧನ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ವಜಾಗೊಳಿಸುವುದು ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪದಚ್ಯುತಿಗಾಗಿ ಕ್ರಮ ತೆಗೆದುಕೊಳ್ಳುವುದಕ್ಕಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕಾಯುತ್ತಿದೆ ಎಂದಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡದ ಕುರಿತು ಉತ್ತರ ಪ್ರದೇಶದಿಂದ ತನಿಖೆಯ ವರದಿಯನ್ನು ಸುಪ್ರೀಂಕೋರ್ಟ್ ಕೇಳಿರುವುದನ್ನು ಎಸ್‌ಕೆಎಂ ಉಲ್ಲೇಖಿಸಿದೆ.

ಹರಿಯಾಣದಲ್ಲಿಯೂ ಬಿಜೆಪಿ ಸಂಸದ ನಯೀಬ್ ಸೈನಿ ಎಂಬುವವರಿಗೆ ಸೇರಿದ ಕಾರು ಅಂಬಾಲ ಬಳಿಯ ನರೈನ್‌ಗರ್‌ ಬಳಿ ಪ್ರತಿಭಟನಾನಿರತರಿಗೆ ಗುದ್ದಿದ್ದು ಒಬ್ಬ ರೈತ ತೀವ್ರವಾಗಿ ಗಾಯಗೊಂಡಿದ್ದಾರೆ. . ಗಾಯಗೊಂಡ ರೈತನನ್ನು ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದೆ.

ಇನ್ನು, ಲಖಿಂಪುರ್ ಖೇರಿ ರೈತರ ಹತ್ಯಾಕಾಂಡ ಖಂಡಿಸಿ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಅಕ್ಟೋಬರ್ 11 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಮಾಹಿತಿ ನೀಡಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿಗೆ ಪಾದಯಾತ್ರೆ: ಆರೋಪಿಗಳನ್ನು ಬಂಧಿಸದಿದ್ದರೇ ಉಪವಾಸ ಸತ್ಯಾಗ್ರಹ-ನವಜೋತ್ ಸಿಂಗ್ ಸಿಧು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...