Homeಮುಖಪುಟನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ 'ದೇಶದ್ರೋಹ' ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

- Advertisement -
- Advertisement -

ನೇಪಾಳದಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತು ಪೋಸ್ಟ್ ಮಾಡಿದ ವಿಡಿಯೋಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಯ ಸೆಕ್ಷನ್ 152 ರ ಅಡಿಯಲ್ಲಿ ಕಂಟೆಂಟ್ ಕ್ರಿಯೇಟರ್ ಅರ್ಪಿತ್ ಶರ್ಮಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ‘ದೇಶದ್ರೋಹ’ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ವೈರ್ ಶನಿವಾರ ವರದಿ ಮಾಡಿದೆ.

ಬಿಎನ್‌ಎಸ್‌ ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ವಿಮರ್ಶಕರು ಇದನ್ನು ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನಿನ ಹೊಸರೂಪ ಎಂದು ಬಣ್ಣಿಸಿದ್ದಾರೆ.

ಗುರುವಾರ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶರ್ಮಾ ನೇಪಾಳದಲ್ಲಿ ನಡೆದ ಪ್ರತಿಭಟನೆಗಳನ್ನು ಮುಂದಿಟ್ಟುಕೊಂಡು ಭಾರತದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ದೇಶದ ಸಮಗ್ರತೆಯನ್ನು ಕದಡಲು ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾಗಿ ದಿ ವೈರ್ ಹೇಳಿದೆ.

ಈ ವಾರದ ಆರಂಭದಲ್ಲಿ ನೇಪಾಳ ಸರ್ಕಾರ 26 ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಹೇರಿದ್ದ ನಿಷೇಧದ ವಿರುದ್ಧ ನಡೆದ ಪ್ರತಿಭಟನೆಗಳು, ನಂತರ ಆ ದೇಶದ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಂತಿಮವಾಗಿ ಪ್ರತಿಭಟನೆ ಭ್ರಷ್ಟಾಚಾರದ ವಿರುದ್ಧದ ವ್ಯಾಪಕ ಚಳವಳಿಯಾಗಿ ತಿರುಪಡೆದುಕೊಂಡು ಹಿಂಸಾತ್ಮಕ ರೂಪ ತಾಳಿತ್ತು.

1990 ಮತ್ತು 2010ರ ನಡುವಿನ ‘ಜೆನ್‌ ಝೀ’ ಯುವಜನರ ಗುಂಪು ಪ್ರತಿಭಟನೆಯನ್ನು ಮುನ್ನಡೆಸಿತ್ತು. ಪರಿಣಾಮ ಸರ್ಕಾರ ಪತನಗೊಂಡು, ಪ್ರಸ್ತುತ ಮಧ್ಯಂತರ ಸರ್ಕಾರ ರಚನೆಯಾಗಿದೆ.

ನೇಪಾಳದಲ್ಲಿ ಪ್ರತಿಭಟನೆಗಳು ಪ್ರಾರಂಭವಾದ ಒಂದು ದಿನದ ನಂತರ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ, ಶರ್ಮಾ ನೇಪಾಳದ ಯುವಕರನ್ನು ಶ್ಲಾಘಿಸಿದ್ದರು. ಭ್ರಷ್ಟಾಚಾರ ಮತ್ತು ದ್ವೇಷ ಭಾಷಣದಂತಹ ವಿಷಯಗಳ ವಿರುದ್ಧ ಭಾರತೀಯರು ಏಕೆ ಪ್ರತಿಭಟಿಸುತ್ತಿಲ್ಲ ಎಂದು ಪ್ರಶ್ನಿಸಿದ್ದರು.

ದಿ ವೈರ್ ಜೊತೆ ಮಾತನಾಡಿದ ಶರ್ಮಾ, “ನಾನು ವಿಡಿಯೋ ಮಾಡುವಾಗ ನೇಪಾಳ ಶಾಂತವಾಗಿತ್ತು. ನಾನು ಯಾರನ್ನೂ ಪ್ರಚೋದಿಸಿಲ್ಲ” ಎಂದಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...