HomeUncategorized'ಗೋರಕ್‌ಪುರ ಆಸ್ಪತ್ರೆ ದುರಂತ' ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ದಿ ಗೋರಖ್‌ಪುರ ಆಸ್ಪಿಟಲ್‌ ಟ್ರಾಜಿಡಿ: ಎ ಡಾಕ್ಟರ್ಸ್ ಮೆಮೊಯಿರ್ ಆಫ್ ಎ ಡೆಡ್ಲಿ ಮೆಡಿಕಲ್ ಕ್ರೈಸಿಸ್’ (The Gorakhpur Hospital Tragedy: A Doctor’s Memoir of a Deadly Medical Crisis) ಪುಸ್ತಕವನ್ನು ಕಫೀಲ್ ಖಾನ್ ಬರೆದಿದ್ದರು. ಪುಸ್ತಕವನ್ನು 2021ರಲ್ಲಿ ಪ್ರಕಟಿಸಲಾಗಿದ್ದು, ಹಲವಾರು ಭಾರತೀಯ ಭಾಷೆಗಳಿಗೆ ಅದನ್ನು ಅನುವಾದಿಸಲಾಗಿತ್ತು.

ಲಕ್ನೋದ ಕೃಷ್ಣನಗರದ ಸ್ಟೇಷನ್ ಹೌಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೃಷ್ಣನಗರದ ಉದ್ಯಮಿ ಮನೀಶ್ ಶುಕ್ಲಾ ಅವರ ದೂರಿನ ಮೇರೆಗೆ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಕಾಯ್ದೆಯ ಉಲ್ಲಂಘನೆಯ ಆರೋಪದಡಿ ಕಫೀಲ್ ಖಾನ್ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ದೂರಿನಲ್ಲಿ ಡಾ.ಕಫೀಲ್ ಅವರ ಪುಸ್ತಕವನ್ನು ಹಣ ಸಂಗ್ರಹಿಸುವ, ರಾಜ್ಯ ಸರ್ಕಾರವನ್ನು ಉರುಳಿಸುವ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯುವ ಸಾಧನವಾಗಿ ಬಳಸಲಾಗಿದೆ. ಸಮುದಾಯಗಳ ನಡುವೆ ಸಂಘರ್ಷದ ಪಿತೂರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಫೀಲ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ 10 ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳು, 295A , 153B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಮುದ್ರಣದ ಹೆಸರು ಮತ್ತು ಮುದ್ರಣದ ಸ್ಥಳವನ್ನು ಸರಿಯಾಗಿ ಪ್ರಕಟಿಸದ ಆರೋಪದಲ್ಲಿ ಕಫೀಲ್ ಖಾನ್ ವಿರುದ್ಧ 1867ರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್‌ನ ಸೆಕ್ಷನ್ 3 ಮತ್ತು 1ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುವಾಗ ಆಮ್ಲಜನಕದ ಕೊರತೆಯಿಂದಾಗಿ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರು ಆಕ್ಸಿಜನ್‌ ದುರಂತದ ವೇಳೆ  ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಅವರನ್ನು ಜೀವ ಸಂರಕ್ಷಕ ಎಂದು ಪ್ರಶಂಸಿಸಲಾಗಿತ್ತು. ಆದರೆ ಕರ್ತವ್ಯ ಲೋಪದ ಹೆಸರಿನಲ್ಲಿ ಕ್ರಮವನ್ನು ಎದುರಿಸಬೇಕಾಯಿತು ಮತ್ತು 6 ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು. ಅಲಹಾಬಾದ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಅವರ ವಿರುದ್ಧದ ಆರೋಪಗಳನ್ನು ರದ್ದುಗೊಳಿಸಿತ್ತು.

ಏನಿದು ಗೋರಖ್‌ಪುರ ಆಸ್ಪತ್ರೆ ದುರಂತ?

ಗೋರಖ್‌ಪುರ ಆಸ್ಪತ್ರೆಯಲ್ಲಿ 60 ಮಕ್ಕಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದರು. ಈ ವೇಳೆ ಕಫೀಲ್ ಖಾನ್ ಅವರು ಶಿಶು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಸ್ಪತ್ರೆಯು ಬಾಕಿ ಮೊತ್ತ ಪಾವತಿಸದ ಕಾರಣ ಎಲ್ಲಾ ಆಮ್ಲಜನಕ ಪೂರೈಕೆದಾರ ಸಂಸ್ಥೆಗಳು ಸರಬರಾಜು ಸ್ಥಗಿತಗೊಳಿಸಿದ್ದವು. ಘಟನೆಯ ವೇಳೆ ಖಾನ್‌ ಅವರು ಮಕ್ಕಳ ಜೀವವನ್ನು ಉಳಿಸಲು ಪ್ರಯತ್ನಿಸಿದ್ದರು ಆದರೆ ದುರದೃಷ್ಟಾವಶಾತ್‌ ಘಟನೆಗೆ ಕಫೀಲ್ ಖಾನ್ ಅವರು ಕಾರಣ ಎಂದು 2017ರಲ್ಲಿ ಡಾ.ಕಪೀಲ್‌ ಖಾನ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಕಫೀಲ್ ಖಾನ್ ಅವರು ವಾಸ್ತವವಾಗಿ ಈ ಮುಗ್ಧ ಮಕ್ಕಳ ಪ್ರಾಣ ಉಳಿಸಲು ಪ್ರಯತ್ನಿಸಿದ್ದರು. ಆದರೆ ಆಡಳಿತ ಮಂಡಳಿ ಮತ್ತು ಸರ್ಕಾರ ಅವರಿಗೆ ಸ್ಪಂದಿಸಿರಲಿಲ್ಲ. ಕೊನೆಗೆ ಪ್ರಕರಣದಲ್ಲಿ ಅವರು ತಪ್ಪಿತಸ್ಥರು ಎಂದು ಆಪಾದನೆ ಹೊರಿಸಲಾಗಿತ್ತು. ಈ ಮೂಲಕ ಉತ್ತರ ಪ್ರದೇಶ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...