Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...