Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....