Homeಮುಖಪುಟಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

ಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರತೊಡಗಿದ್ದಾರೆ. ಬಿಎಸ್‌ಪಿಯ 9 ಶಾಸಕರು ನಿನ್ನೆ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಆದರೆ ಇವರು ತಮ್ಮ ಪಕ್ಷದ ಶಾಸಕರೇ ಅಲ್ಲ. ಬಿಎಸ್‌ಪಿಯಿಂದ ಈ 9 ಜನರನ್ನು ಬಹಳ ಹಿಂದೆಯೇ ಅಮಾನತು ಮಾಡಲಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ಬಿಎಸ್‌ಪಿಯ ನಾಯಕರು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಂತೆ ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನೇ ಆರಂಭಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಕಳೆದ ಲೋಕಸಭೆ ಚುನಾವಣೆಯನ್ನು ಎರಡು ಪಕ್ಷಗಳು ಒಟ್ಟಾಗಿ ಎದುರಿಸಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಅಂತರ ಹೆಚ್ಚಿದೆ. ಎರಡು ಪಕ್ಷಗಳ ನಾಯಕರು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಎಸ್‌ಪಿಯ ಶಾಸಕರು ಸಮಾಜವಾದಿ ಪಕ್ಷದ ದಾರಿ ಹಿಡಿದಿರುವುದು ಮಾಯವತಿಗೆ ನುಂಗಲಾರದ ತುತ್ತಾಗಿ ಮಾರ್ಪಟ್ಟಿದೆ. ವಿಧಾನ ಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಬಿಎಸ್‌ಪಿಯು ಸಮಾಜವಾದಿ ಪಕ್ಷವನ್ನು ತನ್ನ ಮುಖ್ಯ ಎದುರಾಳಿಯನ್ನಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಜೊತೆಗೆ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಸಮಾಜವಾದಿ ಪಕ್ಷವು ಬಿಎಸ್‌ಪಿಯ ಕೆಲವು ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಸಮಾಜವಾದಿ ಪಕ್ಷವನ್ನು ಸೇರಲಿದ್ದಾರೆ ಎಂದು ಮಾಧ್ಯಮಗಳ ಮೂಲಕ ಬಿಂಬಿಸುತ್ತಿದೆ. ಆದರೆ ಸಮಾಜವಾದಿ ಪಕ್ಷದ ಸಂಪರ್ಕದಲ್ಲಿರುವ ಶಾಸಕರು ಬಿಎಸ್‌ಪಿಯಿಂದ ಈಗಾಗಲೇ ಅಮಾನತುಗೊಂಡವರಾಗಿದ್ದಾರೆ. ಸಮಾಜವಾದಿ ಪಕ್ಷಕ್ಕೆ ಕನಿಷ್ಠ ಪ್ರಾಮಾಣಿಕತೆಯಿದ್ದರೆ ಸಂಪರ್ಕದಲ್ಲಿರುವ ಬಿಎಸ್‌ಪಿ ಶಾಸಕರ ಹೆಸರನ್ನು ಬಹಿರಂಗಗೊಳಿಸಲಿ. ಒಂದು ವೇಳೆ ಸಮಾಜವಾದಿ ಪಕ್ಷವು  ಬಿಎಸ್‌ಪಿಯಿಂದ ಅಮಾನತುಗೊಂಡ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಸಮಾಜವಾದಿ ಪಕ್ಷ ಎರಡು ಹೋಳಾಗುತ್ತದೆ. ಸಮಾಜವಾದಿ ಪಕ್ಷ ದಲಿತ ವಿರೋಧಿ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿಯೆ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಬಿಎಸ್‌ಪಿಯ ಕೆಲವು ಶಾಸಕರನ್ನು ಸೆಳೆದು ದಲಿತ ಅಭ್ಯರ್ಥಿಯನ್ನು ಸೋಲಿಸಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರಣಿ ಟ್ವೀಟ್ ಮೂಲಕ ಸಮಾಜವಾದಿ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.

ಲಾಲ್‌ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬಾರ್ ಹಿಂದೆ ಬಿಎಸ್‌ಪಿಯನ್ನು ತೊರೆದಿದ್ದರು. ಇವರಿಬ್ಬರು ಅತ್ಯಂತ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು. ಬಿಎಸ್‌ಪಿಯ ಸ್ಥಾಪಕ ಸದಸ್ಯರಾದ ಇವರಿಬ್ಬರು ಬಿಎಸ್‌ಪಿ ತೊರೆದಿರುವುದು ಮಾಯಾವತಿಯವರ ಬಿಎಸ್‌ಪಿಗೆ ಉತ್ತರ ಪ್ರದೇಶದಲ್ಲಿ ದೊಡ್ಡ ಹೊಡೆತವನ್ನು ನೀಡಿದೆ.

ಇವರ ಬೆನ್ನಲ್ಲೇ ಕಳೆದ ವರ್ಷ ಅಸ್ಲಾಮ್ ಚೌಧರಿ, ಅಸ್ಲಾಮ ರೈನಿ, ಮುಝ್ತಬಾ ಸಿದ್ಧಿಕಿ, ಹಕಮ್ ಲಾಲ್ ಬಿಂಡ್ ಮತ್ತು ಗೋವಿಂದ್ ಜಾಟವ್ ಎಂಬ 5 ಜನ ಶಾಸಕರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಸೇರಿದ್ದರು.

ಇದನ್ನೂ ಓದಿ : ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...