Homeಮುಖಪುಟಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

- Advertisement -
- Advertisement -

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಾಧ್ಯಾಪಕನಿಗೆ ಜಾಮೀನು ನಿರಾಕರಿಸಿರುವ ಫಿರೋಜಾಬಾದ್ ನ್ಯಾಯಾಲಯ ಜೈಲಿಗೆ ಕಳಿಸಿದೆ.

ಫಿರೋಜಾಬಾದ್‌ನ ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಹರ್ಯಾರ್ ಅಲಿ ಫೇಸ್‌ಬುಕ್‌ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಲಾಗಿದೆ. ತದನಂತರ ಕಾಲೇಜಿನ ಆಡಳಿತ ಮಂಡಳಿ ಅವರನ್ನು ಅಮಾನತು ಮಾಡಿದೆ.


ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌


ಶಹರ್ಯಾರ್ ಅಲಿ ತಮ್ಮ ಫೇಸ್‌ಬುಕ್ ಖಾತೆ ಹ್ಯಾಕ್ ಹಾಕಿದೆ. ಹಾಗಾಗಿ ತನಗೆ ಬಂಧನದ ವಿರುದ್ಧ ರಕ್ಷಣೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಫೇಸ್‌ಬುಕ್ ಖಾತೆ ಹ್ಯಾಕ್ ಆಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.

ತದನಂತರ ಮೇ ತಿಂಗಳಿನಲ್ಲಿ ಶಹರ್ಯಾರ್ ಅಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು ಸಹ ತಮ್ಮ ಬಂಧನದಿಂದ ವಿನಾಯಿತಿ ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿರೋಜಾಬಾದ್ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಹಾಕಿದ್ದು ಅಲ್ಲಿಯೂ ಜಾಮೀನು ಸಿಗದ ಕಾರಣ ಜೈಲಿಗೆ ಹಾಕಲಾಗಿದೆ.


ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...