Homeಮುಖಪುಟಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

- Advertisement -
- Advertisement -

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ಯುವತಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಯುವತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ ಕುಟುಂಬದವರಿಗೆ ಕೂಡಾ ಅನುಮತಿ ನೀಡದ ಉತ್ತರ ಪ್ರದೇಶದ ಪೊಲೀಸರು ತಾವೇ ಮಧ್ಯರಾತ್ರಿ ಶವವನ್ನು ಸುಟ್ಟಿದ್ದಾರೆ. ಇದರ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕೊನೆಯ ಬಾರಿ ಮುಖವನ್ನು ನೋಡಲೂ ಅವಕಾಶ ಕೊಡದೇ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ಬೆಳಿಗ್ಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ದೆಹಲಿ ಆಸ್ಪತ್ರೆಯ ಹೊರಗೆ ಪ್ರತಿಭಟನಾಕಾರರು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿರುವಾಗ, ಸಂತ್ರಸ್ತೆಯ ಮೃತ ದೇಹವನ್ನು ಯುಪಿ ಪೊಲೀಸರು ತಮಗೆ ಅರಿವಿಲ್ಲದೆ ತೆಗೆದುಕೊಂಡುಹೋಗಿದ್ದಾರೆ ಎಂದು ಯುವತಿಯ ಸಹೋದರರು ಆರೋಪಿಸಿದ್ದಾರೆ.

ಆಕೆಯ ತಂದೆ ಮತ್ತು ಸಹೋದರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರನ್ನು ಯುಪಿ ನಂಬರ್ ಪ್ಲೇಟ್ ಇರುವ ಕಪ್ಪು ಸ್ಕಾರ್ಪಿಯೋದಲ್ಲಿ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು.

“ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿದೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಶವವನ್ನು ಸುಡುತ್ತಿರುವ ಪೊಲೀಸರು. ಚಿತ್ರಕೃಪೆ: ಎನ್‌ಡಿಟಿವಿ

ಇದನ್ನೂ ಓದಿ:ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎನ್ನುವ ಯುವತಿಯ ಕುಟುಂಬದ ಆರೋಪವನ್ನು ಯುಪಿ ಪೊಲೀಸರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...