ಉತ್ತರ ಪ್ರದೇಶದ ಬರೇಲಿಯಲ್ಲಿ ಗರ್ಭಿಣಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರದಿಂದಾಗಿ ಮಹಿಳೆಗೆ ಗರ್ಭಪಾತ ಉಂಟಾಗಿದೆ ರಾಜ್ಯ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆ ಮುಂಜಾನೆ ಗದ್ದೆಯಲ್ಲಿ ಕೆಲಸ ಮಾಡಲು ಹೋಗಿದ್ದರು. ಸಂಜೆಯಾದರೂ ಮನೆಗೆ ವಾಪಸ್ಸಾಗದೇ ಇದ್ದಾಗ, ಅವರ ಪತಿ ಹೊಲಕ್ಕೆ ಹೋಗಿ ನೋಡಿದಾಗ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಆಸ್ಪತ್ರೆಯಲ್ಲಿ ವೈದ್ಯರು ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೃಢಪಡಿಸಿದ್ದು, ಅದರಿಂದ ಮಹಿಳೆಗೆ ಗರ್ಭಪಾತವಾಗಿದ್ದು ಮಹಿಳೆಯ ಆರೋಗ್ಯ ಹದಗೆಟ್ಟಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ
“ಸಂತ್ರಸ್ತೆಯ ಪತಿ ನೀಡಿದ ದೂರಿನ ಪ್ರಕಾರ, ಮಹಿಳೆಯು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದಾಗಿ ಮೂರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಗೆ ಗರ್ಭಪಾತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.
ಅತ್ಯಾಚಾರ ಘಟನೆ ಸೆಪ್ಟೆಂಬರ್ 13ರಂದು ನಡೆದಿತ್ತು. ಘಟನೆಯಿಂದಾಗಿ ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
“ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಒಬ್ಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಸಂತ್ರಸ್ತೆಯ ಹೇಳಿಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸತ್ಯಾಂಶ ಹೊರಬಿದ್ದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅಗರವಾಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಮಹಿಳೆಯ ಪತಿ ಸೆಪ್ಟೆಂಬರ್ 16 ರಂದು ಬರೇಲಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
“ಘಟನೆ ನಡೆದ ದಿನವೇ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ” ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ. ಪತ್ನಿಯ ಆರೋಗ್ಯ ಹದಗೆಟ್ಟಿದ್ದರಿಂದ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಅಂಚೆ ಮೂಲಕ ದೂರು ನೀಡಿದ್ದು, ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.


