Homeಮುಖಪುಟಯುಪಿ: ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ; ಗರ್ಭಪಾತ

ಯುಪಿ: ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ; ಗರ್ಭಪಾತ

ಘಟನೆ ನಡೆದ ದಿನವೇ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯಲ್ಲಿ ಗರ್ಭಿಣಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರದಿಂದಾಗಿ ಮಹಿಳೆಗೆ ಗರ್ಭಪಾತ ಉಂಟಾಗಿದೆ ರಾಜ್ಯ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಮುಂಜಾನೆ ಗದ್ದೆಯಲ್ಲಿ ಕೆಲಸ ಮಾಡಲು ಹೋಗಿದ್ದರು. ಸಂಜೆಯಾದರೂ ಮನೆಗೆ ವಾಪಸ್ಸಾಗದೇ ಇದ್ದಾಗ, ಅವರ ಪತಿ ಹೊಲಕ್ಕೆ ಹೋಗಿ ನೋಡಿದಾಗ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಸ್ಪತ್ರೆಯಲ್ಲಿ ವೈದ್ಯರು ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೃಢಪಡಿಸಿದ್ದು, ಅದರಿಂದ ಮಹಿಳೆಗೆ ಗರ್ಭಪಾತವಾಗಿದ್ದು ಮಹಿಳೆಯ ಆರೋಗ್ಯ ಹದಗೆಟ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ

“ಸಂತ್ರಸ್ತೆಯ ಪತಿ ನೀಡಿದ ದೂರಿನ ಪ್ರಕಾರ, ಮಹಿಳೆಯು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದಾಗಿ ಮೂರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಗೆ ಗರ್ಭಪಾತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅತ್ಯಾಚಾರ ಘಟನೆ ಸೆಪ್ಟೆಂಬರ್ 13ರಂದು ನಡೆದಿತ್ತು. ಘಟನೆಯಿಂದಾಗಿ ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿರುವ ಪೊಲೀಸರು ಒಬ್ಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ಸಂತ್ರಸ್ತೆಯ ಹೇಳಿಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸತ್ಯಾಂಶ ಹೊರಬಿದ್ದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅಗರವಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಮಹಿಳೆಯ ಪತಿ ಸೆಪ್ಟೆಂಬರ್ 16 ರಂದು ಬರೇಲಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.

“ಘಟನೆ ನಡೆದ ದಿನವೇ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ” ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ. ಪತ್ನಿಯ ಆರೋಗ್ಯ ಹದಗೆಟ್ಟಿದ್ದರಿಂದ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಅಂಚೆ ಮೂಲಕ ದೂರು ನೀಡಿದ್ದು, ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...