Homeಮುಖಪುಟಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

ಯುಪಿ: ಬಂದೂಕು ತೋರಿಸಿ 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಸೇರಿದಂತೆ ಇಬ್ಬರು ವ್ಯಕ್ತಿಗಳು 22 ವರ್ಷದ ದಲಿತ ಯುವತಿಯೊಬ್ಬರಿಗೆ ಬಂದೂಕು ತೋರಿಸಿ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರ ವಾರದ ಹಿಂದೆ ನಡೆದಿದ್ದು, ಅಕ್ಟೋಬರ್ 18 ರ ಭಾನುವಾರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

“ಸಂತ್ರಸ್ತೆಯ ಪೋಷಕರು ಸಲ್ಲಿಸಿದ ದೂರಿನ ಪ್ರಕಾರ, 22 ವರ್ಷದ ಯುವತಿಯು ಒಬ್ಬಂಟಿಯಾಗಿರುವಾಗ ಮನೆಗೆ ನುಗ್ಗಿದ ಆರೋಪಿಗಳು ಬಂದೂಕು ಗುರಿಯಿಟ್ಟು ಅತ್ಯಾಚಾರ ಎಸಗಿದ್ದಾರೆ. ಈ ಘಟನೆಯ ಬಗ್ಗೆ ಯಾರೊಂದಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ” ಎಂದು ಕಾನ್ಪುರ್ ದೇಹತ್ ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ಐಪಿಸಿ ಸೆಕ್ಷನ್ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿಯಾದ ಆರೋಪಿಗಳನ್ನು ಬಂಧಿಸಲು ದೇರಾಪುರ ಎಸ್‌ಎಚ್‌ಒ, ಸರ್ಕಲ್ ಅಧಿಕಾರಿ ಮತ್ತು ಹೆಚ್ಚುವರಿ ಎಸ್‌ಪಿ ನೇತೃತ್ವದ ಮೂರು ಪೊಲೀಸ್ ತಂಡಗಳ ಸ್ವಾಟ್(SWAT) ತಂಡವೊಂದನ್ನು ರಚಿಸಲಾಗಿದೆ ಎಂದು IANS ವರದಿ ಮಾಡಿದೆ.

ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾದ ಸೆಪ್ಟೆಂಬರ್ 14 ರಂದು ನಡೆದ ಹತ್ರಾಸ್ ದಲಿತ ಯುವತಿ ಅತ್ಯಾಚಾರ ನಡೆದು ಒಂದು ತಿಂಗಳಲ್ಲಿ ಈ ಘಟನೆ ನಡೆದಿದೆ. ಹತ್ರಾಸ್ ಸಂತ್ರಸ್ತೆ ಸೆಪ್ಟೆಂಬರ್ 29 ರಂದು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸ್ತುತ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಇಷ್ಟೇ ಅಲ್ಲದೆ ಹತ್ರಾಸ್ ಘಟನೆ ನಡೆದ ಕೆಲವೇ ದಿನಗಳಲ್ಲಿ ಬರಾಬಂಕಿ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...