Homeದಲಿತ್ ಫೈಲ್ಸ್ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ...

ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಉಪಚುನಾವಣೆ ಮತದಾನದ ದಿನದಂದೆ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ 23 ವರ್ಷದ ದಲಿತ ಯುವತಿಯ ನಗ್ನ ಶವ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕೊಲೆಯಾದ ಯುವತಿಯನ್ನು ದುರ್ಗಾ ಎಂದು ಗುರುತಿಸಲಾಗಿದ್ದು, ಅವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯುಪಿ

ಮೃತ ಯುವತಿಯ ಶವ ಬುಧವಾರ ಕರ್ಹಾಲ್ ಪ್ರದೇಶದಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಜಕೀಯ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ಮೈನ್‌ಪುರಿ ಪೊಲೀಸ್ ಅಧೀಕ್ಷಕ (ಎಸ್‌ಪಿ), ವಿನೋದ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂದು ಬೆಳಗ್ಗೆ ಕರ್ಹಾಲ್‌ನ 23 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ತಂದೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ ಒಬ್ಬರು ಪ್ರಶಾಂತ್ ಯಾದವ್ ಮತ್ತು ಇನ್ನೊಬ್ಬರು ಮೋಹನ್ ಕಥೇರಿಯಾ, ಇಬ್ಬರನ್ನೂ ಬಂಧಿಸಲಾಗಿದೆ. ಬಿಜೆಪಿಗೆ ಮತ ಹಾಕುವುದನ್ನು ತಡೆಯುವ ಸಲುವಾಗಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಹೇಳಿಕೆ ನೀಡಿದ್ದಾರೆ” ಎಂದು ಮೈನ್‌ಪುರಿ ಎಸ್‌ಪಿ ತಿಳಿಸಿದ್ದಾರೆ.

ಈ ನಡುವೆ, ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯುತ್ತಿದೆ. ಯುಪಿ

ಈ ಎಲ್ಲಾ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮಾತ್ರ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಪಕ್ಷವಾದ ಕಾಂಗ್ರೆಸ್ ಅವರನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಚುನಾವಣೆ ಬಗ್ಗೆ ಸೋಮವಾರ ಮಾತನಾಡಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ದರು.

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...