HomeUncategorizedಮುಜಾಫರ್‌ನಗರ ಪ್ರಕರಣ: ಶಾಲೆಯನ್ನು ಮುಚ್ಚುವಂತೆ ಆದೇಶ

ಮುಜಾಫರ್‌ನಗರ ಪ್ರಕರಣ: ಶಾಲೆಯನ್ನು ಮುಚ್ಚುವಂತೆ ಆದೇಶ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಥಳಿಸುವಂತೆ ಇತರ ವಿದ್ಯಾರ್ಥಿಗಳಿಗೆ ಶಿಕ್ಷಕಿ ಸೂಚಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ಘಟನೆ ನಡೆದ ಶಾಲೆಯನ್ನು ಮುಚ್ಚಲು ಆದೇಶಿಸಲಾಗಿದೆ.

ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿದೆ. ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಲಾಗುವುದು. ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಿಕ್ಷಕಿಯೋರ್ವರು ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿತ್ತು.

ವಿಡಿಯೋ ವೈರಲ್ ಬೆನ್ನಲ್ಲೇ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು. ಶಿಕ್ಷಕಿಯ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿತ್ತು. ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ಈಗಾಗಲೇ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಶಿಕ್ಷಕಿಯ ವಿರುದ್ಧ ತೆಗೆದುಕೊಂಡು ಕ್ರಮಗಳ ಬಗ್ಗೆ ಒಂದು ವಾರದಲ್ಲಿ ವರದಿಯನ್ನು ನೀಡುವಂತೆ ಸೂಚಿಸಿತ್ತು.

ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಹೊಡೆಯುವಂತೆ ಒತ್ತಾಯಿಸುವುದನ್ನು ನೋಡಬಹುದು.

ಈ ಬಗ್ಗೆ ಆ ಬಾಲಕನ ತಾಯಿ ರುಬೀನಾ ಮಾತನಾಡಿ, ನನ್ನ ಮಗ ನಿನ್ನೆ ಮನೆಗೆ ಬಂದಾಗ ಅಳುತ್ತಿದ್ದನು. ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೋಮ್ ವರ್ಕ್ ಮಾಡದಿದ್ದಕ್ಕೆ ಟೀಚರ್ ಶಿಕ್ಷೆ ಕೊಟ್ಟಿರಬೇಕು ಎಂದುಕೊಂಡೆವು. ಆದರೆ ವೀಡಿಯೊವನ್ನು ನೋಡಿದಾಗ ನಮಗೆ ಆಘಾತವಾಯಿತು ಎಂದು ಹೇಳಿದ್ದಾರೆ.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ.

ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದಾರೆ.

ಬಾಲಕನ ತಂದೆ ಇರ್ಷಾದ್ ಮಾತನಾಡಿ, ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ ಎಂದು ಹೇಳಿದ್ದರು.

ಇದನ್ನು ಓದಿ: ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...