Homeಮುಖಪುಟಉತ್ತರಪ್ರದೇಶ: ಪೊಲೀಸ್ ಅಧಿಕಾರಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿತ

ಉತ್ತರಪ್ರದೇಶ: ಪೊಲೀಸ್ ಅಧಿಕಾರಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿತ

- Advertisement -
- Advertisement -

ಉತ್ತರಪ್ರದೇಶದ ಆಗ್ರಾದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವನಿಗೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಪೊಲೀಸ್ ಅಧಿಕಾರಿಯನ್ನು ಬೆತ್ತಲೆಯಾಗಿ ಕಂಬಕ್ಕೆ ಕಟ್ಟಿಹಾಕಿ ಥಳಿಸುತ್ತಿರುವುದು ಕಂಡು ಬಂದಿದೆ.

ಮಹಿಳೆಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿದ್ದ ಕಾರಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಗ್ರಾಮಸ್ಥರು ಥಳಿಸಿದ್ದಾರೆ. ಪೊಲೀಸ್ ಅಧಿಕಾರಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬ ಹೇಳಿದೆ.

ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಸಂದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಸಂದೀಪ್ ಕುಮಾರ್ ಕುಡಿದ ಅಮಲಿನಲ್ಲಿ ಮಹಿಳೆಯ ಮನೆಯ ಛಾವಣಿಯ ಮೂಲಕ ಹಾರಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ವೇಳೆ ಅವರು ಜೋರಾಗಿ ಕೂಗಾಡಿದ್ದಾರೆ.

ಮನೆಯವರು ಮಹಿಳೆಯ ಕೂಗು ಕೇಳಿ ಬಂದು ನೋಡಿದಾಗ ಮನೆಯೊಳಗೆ ಇನ್ಸ್‌ಪೆಕ್ಟರ್‌ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ. ನಂತರ ಗ್ರಾಮಸ್ಥರು ಬಂದು ಸಂದೀಪ್ ಕುಮಾರ್‌ನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ವೇಳೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಅಧಿಕಾರಿಯನ್ನು ರಕ್ಷಿಸಿ ಕರೆದೊಯ್ದಿದ್ದಾರೆ.

ಘಟನೆ ಬಳಿಕ ಸಂದೀಪ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆಗೆ ಸೂಚಿಸಲಾಗಿದೆ. ಪೊಲೀಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎತ್ಮಾದಪುರ ಎಸಿಪಿ, ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಬಾಲಕಿಯೊಂದಿಗೆ ಸಿಕ್ಕಿಬಿದ್ದ ಪ್ರಕರಣದಲ್ಲಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕುರಿತು ದೂರು ಸ್ವೀಕರಿಸಿದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಯೋಧನನ್ನು ಅಪಹರಿಸಿ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...