Homeಮುಖಪುಟಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

ಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

- Advertisement -
- Advertisement -

ಪಂಚರಾಜ್ಯಗಳ ಮತದಾನ ಪ್ರಕ್ರಿಯೆ ಈಗಾಗಲೆ ಮುಗಿದಿದ್ದು, ಗುರುವಾರದಂದು ಎಣಿಕೆ ನಡೆಯಲಿದೆ. ಅದರಲ್ಲೂ ದೇಶದ ಜನತೆ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶವನ್ನು ಕಾತರದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಮತದಾನ ಪೆಟ್ಟಿಗೆಯನ್ನು (ಇವಿಎಂ) ಇಟ್ಟಿರುವ ಸ್ಟ್ರಾಂಗ್‌ ರೂಂ ಬಳಿ ಮೂರು ಪಾಳಿಯಲ್ಲಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

ಮೀರತ್‌ನ ಮೀರತ್‌ನ ಹಸ್ತಿನಾಪುರ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಅಭ್ಯರ್ಥಿ ಯೋಗೇಶ್ ವರ್ಮಾ ಅವರು ಮತ ಎಣಿಕೆ ಕೇಂದ್ರದ ಹೊರಗೆ ದುರ್ಬೀನ್‌ನೊಂದಿಗೆ ಮೊಕ್ಕಾಂ ಹೂಡಿದ್ದು, ಮತದಾನದ ನಂತರ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್ ಮತ್ತು ಪಕ್ಕದ ಪ್ರದೇಶಗಳ ಮೇಲೆ ನಿಗಾ ಇರಿಸಿದ್ದಾರೆ.

ಇದನ್ನೂ ಓದಿ:  Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ಭಾನುವಾರ ತೆರೆದ ಜೀಪಿನಲ್ಲಿ ವಿಶ್ವವಿದ್ಯಾನಿಲಯ ತಲುಪಿದ ವರ್ಮಾ, ತನ್ನ ವಾಹನವನ್ನು ಸುಮಾರು 400 ಮೀಟರ್ ದೂರದಲ್ಲಿ ನಿಲ್ಲಿಸಿ ಮತ್ತು ಬೈನಾಕ್ಯುಲರ್ ಮೂಲಕ ಸ್ಟ್ರಾಂಗ್ ರೂಂ ಅನ್ನು ಪರಿಶೀಲಿಸಿದ್ದಾರೆ. ಸ್ಟ್ರಾಂಗ್‌ ರೂಂಗಳು ಮತ್ತು ಅದರ ಸುತ್ತಮುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌‌ ನಮಗೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ನಾವು ಅವರ ಸಲಹೆಯನ್ನು ಅನುಸರಿಸುತ್ತಿದ್ದೇವೆ ಎಂದು ಯೋಗೇಶ್‌ ತಿಳಿಸಿದ್ದಾರೆ.

“ನಮ್ಮ ಹೋರಾಟವು ಆಡಳಿತ ಪಕ್ಷದ ವಿರುದ್ಧವಾಗಿದೆ. ಕಳೆದ ವರ್ಷ ಪಂಚಾಯತ್ ಚುನಾವಣೆಗಳಲ್ಲಿ ಆಡಳಿತ ಪಕ್ಷದ ನಾಯಕರು ಚುನಾವಣಾ ನಿಯಮಾವಳಿಗಳ ಸಂಪೂರ್ಣ ಉಲ್ಲಂಘನೆಯನ್ನು ಮಾಡಿದ್ದಾರೆ. ಹೀಗಾಗಿ ನಾವು ಜನರ ಮತಗಳನ್ನು ಕಳೆದುಕೊಳ್ಳುವಂತಹ ಅಪಾಯದ ಬಗ್ಗೆ ಜಾಗೃತರಾಗಿದ್ದೇವೆ” ಎಂದು ಯೋಗೇಶ್‌ ವರ್ಮಾ ಹಿಂದೂಸ್ಥಾನ್‌ ಟೈಮ್ಸ್‌‌ ಜೊತಗೆ ಮಾತನಾಡುತ್ತಾ ಹೇಳಿದ್ದಾರೆ.

“ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್‌ಪಿ ಮುಖ್ಯಸ್ಥರು ಆದೇಶಿಸಿದ್ದಾರೆ. ನಾವು 8 ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತೇವೆ. ನಮಗೆ ಎಕ್ಸಿಟ್ ಪೋಲ್‌ಗಳಲ್ಲಿ ನಂಬಿಕೆ ಇಲ್ಲ. ಅಖಿಲೇಶ್ ಯಾದವ್ ಅವರು ಖಂಡಿತಾ ಸಿಎಂ ಆಗುತ್ತಾರೆ. ನಾವು ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಯೋಗೇಶ್ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳ ಮತನಾದ ಪ್ರಕ್ರಿಯೆ ನಡೆದಿತ್ತು. ಒಟ್ಟು ಐದು ರಾಜ್ಯಗಳಲ್ಲಿ ನಡೆದ ಮತದಾನದ ಫಲಿತಾಂಶ ಗುರುವಾರ ಹೊರಬೀಳಲಿದೆ.

ಇದನ್ನೂ ಓದಿ: ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...