Homeಮುಖಪುಟಯುಪಿ: ಆದಿತ್ಯನಾಥ್‌‌ ವಿರುದ್ದ ಹೇಳಿಕೆ ನೀಡಿದ್ದಾರೆಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಎಸ್‌ಪಿ ಶಾಸಕರ ಪೆಟ್ರೋಲ್...

ಯುಪಿ: ಆದಿತ್ಯನಾಥ್‌‌ ವಿರುದ್ದ ಹೇಳಿಕೆ ನೀಡಿದ್ದಾರೆಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಎಸ್‌ಪಿ ಶಾಸಕರ ಪೆಟ್ರೋಲ್ ಪಂಪ್ ಕೆಡವಿದ ನಗರ ಪ್ರಾಧಿಕಾರ

- Advertisement -
- Advertisement -

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಶಾಜಿಲ್ ಇಸ್ಲಾಂ ಅನ್ಸಾರಿ ಒಡೆತನದ ಪೆಟ್ರೋಲ್ ಪಂಪ್ ಅನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೇ ನಿರ್ಮಿಸಲಾಗಿದೆ ಎಂದು ಆರೋಪಿಸಿ ಬರೇಲಿ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗುರುವಾರ ನೆಲಸಮಗೊಳಿಸಿದೆ. ಅವರು ಮುಖ್ಯಮಂತ್ರಿ ಆದಿತ್ಯನಾಥ್‌ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ.

ಭಾನುವಾರ ಬರೇಲಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಅನ್ಸಾರಿ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅದಾಗಿ ಮೂರು ದಿನಗಳ ನಂತರ, ಸುಮಾರು ಒಂದು ವರ್ಷದ ಹಿಂದೆ ಹೊರಡಿಸಿದ ಆದೇಶದ ಆಧಾರದ ಮೇಲೆ ಪೆಟ್ರೋಲ್ ಪಂಪ್‌ ಅನ್ನು ನೆಲಸಮ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೆಟ್ರೋಲ್ ಪಂಪ್‌ನ ನಿರ್ಮಾಣವು ಜುಲೈ 2019 ರಲ್ಲಿ ಪ್ರಾರಂಭವಾಯಿತು. ನಂತರ ನಿರ್ಮಾಣವನ್ನು ನಿಲ್ಲಿಸುವಂತೆ ಅವರಿಗೆ ನೋಟಿಸ್ ನೀಡಲಾಯಿತು. ಆದರೆ ಅವರು ನಿಲ್ಲಿಸಲಿಲ್ಲ. ಹಲವಾರು ವಿಚಾರಣೆಗಳ ನಂತರ, ಮಾರ್ಚ್ 2021 ರಲ್ಲಿ ಅದನ್ನು ನೆಲಸಮಗೊಳಿಸುವ ಬಗ್ಗೆ ಆದೇಶವನ್ನು ಅಂಗೀಕರಿಸಲಾಯಿತು. ಆ ಆದೇಶದ ಅನುಸಾರವಾಗಿ ಪೆಟ್ರೋಲ್ ಪಂಪ್‌ ಅನ್ನು ನೆಲಸಮಗೊಳಿಸಲಾಗಿದೆ” ಎಂದು ಬಿಡಿಎ ಕಾರ್ಯದರ್ಶಿ ಯೋಗೇಂದ್ರ ಕುಮಾರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇತ್ತೀಚೆಗೆ, ಆದಿತ್ಯನಾಥ್‌ಗೆ ಬೆದರಿಕೆ ಮತ್ತು ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಶಾಸಕ ಮತ್ತು ಇತರ ಕೆಲವು ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

ಭೋಜಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶಾಜಿಲ್ ಇಸ್ಲಾಂ, ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂಜೀವ್ ಕುಮಾರ್ ಸಕ್ಸೇನಾ ಮತ್ತು ಇತರರ ವಿರುದ್ಧ ಹಿಂದೂ ಯುವವಾಹಿನಿಯ ಅನೂಜ್ ವರ್ಮಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್‌ ಅವರು ಹೇಳಿದ್ದಾರೆ.

ಸೆಕ್ಷನ್ 504 (ಶಾಂತಿ ಕದಡುವುದು), 506 (ಬೆದರಿಕೆ) ಮತ್ತು 153 ಎ (ಗಲಭೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಬರೇಲಿಯ ಬರದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬರೇಲಿಯ ಆಕಾಶ್ ಪುರಂನಲ್ಲಿ ಶಾಸಕರನ್ನು ಸನ್ಮಾನಿಸಲು ಸಕ್ಸೇನಾ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿ ಶಾಜಿಲ್ ಇಸ್ಲಾಂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅನುಜ್ ವರ್ಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

“ಆದಿತ್ಯನಾಥ್‌ ಬಾಯಿಂದ ಧ್ವನಿ ಹೊರಬಂದರೆ, ಎಸ್‌ಪಿ ಬಂದೂಕುಗಳು ಕೇವಲ ಹೊಗೆಯನ್ನು ಮಾತ್ರ ಹೊರಸೂಸುದಿಲ್ಲ ಜೊತೆಗೆ ಗುಂಡುಗಳನ್ನು ಹೊರಸೂಸುತ್ತವೆ” ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಸಮಾರಂಭದಲ್ಲಿ ಶಾಜಿಲ್‌ ಹೇಳಿದ್ದಾರೆ ಎಂದು ಅನುಜ್‌ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದ ಶಾಜಿಲ್‌ ಹೇಳಿಕೆಯ ವಿಡಿಯೋ ತುಣುಕಿನ ಆಧಾರದ ಮೇಲೆ ಅನುಜ್‌‌ ಶಾಸಕ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಶಾಸಕ ಶಾಜಿಲ್ ಅವರು ಸುದ್ದಿ ವಾಹಿನಿಯು ತನ್ನ ಹೇಳಿಕೆಯನ್ನು ತಿರುಚಿದೆ ಎಂದು ಆರೋಪಿಸಿದ್ದು, ವೀಡಿಯೊ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:  ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...