Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್‌ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್‌ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್‌ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್‌ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.

”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...