Homeಮುಖಪುಟಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಮುಸ್ಲಿಂ ಸಮುದಾಯದ ಯುವಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ, ಮತಾಂತರ ಮಾಡಲು ಯತ್ನಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

- Advertisement -
- Advertisement -

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಹದಿ ಹರೆಯದ ಯುವಕ ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿ, ಯುವಕನನ್ನು ಹೊಸ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ಯುವಕನೊರ್ವ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ ಬಾಲಕಿಯನ್ನು ಮತಾಂತರ ಮಾಡಲು ಯತ್ನಿಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

ಬಾಲಕಿಯ ತಂದೆ ನೀಡಿರುವ ಸುಳ್ಳು ದೂರಿನ ಆಧಾರದಲ್ಲಿ ಯುವಕನನ್ನು ಡಿಸೆಂಬರ್ 15 ರಂದು ಪೊಲೀಸರು ಬಂಧಿಸಿದ್ದಾರೆ. ಯುವಕನಿಗೆ ಕಿರುಕುಳ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿಗೆ ಬಂದಾಗಿನಿಂದ ಹಲವು ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ಬಾಲಕಿಯ ಹಳ್ಳಿಗೆ ಹೋದ ಪತ್ರಕರ್ತರಿಗೆ ಬಾಲಕಿ ಮತ್ತು ಬಾಲಕಿಯ ತಾಯಿ ಇದು ಲವ್‌ ಜಿಹಾದ್ ಪ್ರಕರಣ ಅಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ನಮ್ಮ ಮಗಳನ್ನು ಮನೆಗೆ ಬಿಡಲು ಆ ಯುವಕ ಜೊತೆಯಲ್ಲಿ ಬರುತ್ತಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ರಾತ್ರಿ 11.30 ರ ಸುಮಾರಿಗೆ ದಾರಿಯಲ್ಲಿ ಕೆಲವರು ನಮ್ಮನ್ನು ಹಿಡಿದು ಥಳಿಸಿದರು. ಅವರು ಹಿಡಿದುಕೊಂಡು ಹೋಗಿರುವ ಆ ಹುಡುಗ ಯಾರು ಎಂಬುದೂ ನನಗೆ ತಿಳಿದಿರಲಿಲ್ಲ. ಅವರು ನನ್ನನ್ನು ಮತಾಂತರಗೊಳಿಸಲು ಯತ್ನಿಸಿದ್ದು ಸುಳ್ಳು” ಎಂದು ಬಾಲಕಿ ಎನ್‌ಡಿಟಿವಿಗೆ ನೀಡಿದ ಸಂಕ್ಷಿಪ್ತ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಬಾಲಕಿಯ ತಾಯಿ ಕೂಡ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, “ಆಕೆ ಹುಟ್ಟುಹಬ್ಬದ ಕಾರ್ಯಕ್ರಮದಿಂದ ಹಿಂತಿರುಗುತಿದ್ದಳು. ಆ ಹುಡುಗ ಅವಳನ್ನು ಮನೆಗೆ ಬಿಡುವುದಾಗಿ ಹೇಳಿ, ಕರೆದುಕೊಂಡು ಬರುತ್ತಿದ್ದನು. ಆ ಸಂದರ್ಭದಲ್ಲಿ ಗ್ರಾಮದ ಯುವಕರ ಗುಂಪು ಅವರನ್ನು ಹಿಡಿದಿದ್ದಾರೆ. ಆಕೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದು ಹೇಳಿದರೂ ಯಾರು ಆಕೆಯ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಬಾಲಕಿಯ ಗ್ರಾಮಸ್ಥರು ಕೂಡ ಬಾಲಕಿ ಮತ್ತು ಆಕೆಯ ತಾಯಿಯ ಮಾತನ್ನೇ ಬೆಂಬಲಿಸಿದ್ದಾರೆ. “ಪೊಲೀಸರು ಪ್ರಕರಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿರಬೇಕು. ಇಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ನಡೆದಿಲ್ಲ. ಬಾಲಕಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಳು ಎಂದು ಗ್ರಾಮದ ಮುಖಂಡ ವಿನೋದ್ ಸೈನಿ ಹೇಳಿದ್ದಾರೆ.

ಯುವಕನ ತಾಯಿ ಕೂಡ ’ನನ್ನ ಮಗ ಹುಟ್ಟು ಹಬ್ಬಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ, ಮರುದಿನ ಬೆಳಗ್ಗೆ ಆತ ಪೊಲೀಸ್ ಠಾಣೆಯಲ್ಲಿದ್ದ. ಆತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಮಾತ್ರ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. “ಕೆಲವು ದಿನಗಳಿಂದ ಬಾಲಕಿ ಕಾಣೆಯಾಗಿದ್ದರು. ಆ ಹುಡುಗನು ಸೋನು ಎಂಬ ಹಿಂದೂ ಹೆಸರಿನಿಂದ ಆಕೆಯನ್ನು ಪರಿಚಯ ಮಾಡಿಕೊಂಡು, ಮತಾಂತರಗೊಳಿಸುವ ಉದ್ದೇಶದಿಂದ ಓಡಿಹೋಗುವಂತೆ ಆಕೆಯನ್ನು ಒತ್ತಾಯಿಸಿದ್ದನು. ಆದರೆ, ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬಿಜ್ನೋರ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...