Homeಕರ್ನಾಟಕಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

- Advertisement -
- Advertisement -

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಮೀರತ್‌ನಲ್ಲಿ ಬಂಧಿಸಿದ್ದಾರೆ.

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ ನಂತರ ಬಂಧನವಾಗಿದೆ.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿದೆ. ನಿನ್ನೆ ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿದ್ದು, ತ್ಯಾಗಿ ಅವರ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಅವರ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ಕಳೆದ ವಾರ ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು. ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಕೆಯ ಪತಿಯನ್ನು ಅವಾಚ್ಯವಾಗಿ ತ್ಯಾಗಿ ನಿಂದಿಸಿದ್ದರು.

ಇದನ್ನೂ ಓದಿರಿ: ಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು.

ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ತ್ಯಾಗಿಗೆ ಸೇರಿದ ಹಲವು ವಾಹನಗಳೂ ಪೊಲೀಸರಿಗೆ ಸಿಕ್ಕಿವೆ. ಒಂದು ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಎಂದು ಬರೆಯಲಾಗಿದೆ. ತ್ಯಾಗಿ ಅವರ ಕುಟುಂಬವು ನೋಯ್ಡಾದಲ್ಲಿ ಸುಮಾರು 50 ಅಂಗಡಿಗಳನ್ನು ಹೊಂದಿದೆ ಮತ್ತು ಲಕ್ಷಾಂತರ ರೂಪಾಯಿಗಳನ್ನು ಬಾಡಿಗೆಯಿಂದ ಪಡೆಯುತ್ತಿದೆ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ಕಂಡುಹಿಡಿದಿದೆ. ಇದರಲ್ಲಿ ಅಕ್ರಮ ನಡೆದಿದೆಯೇ ಎಂಬುದನ್ನು ತಿಳಿಯಲು ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...