ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ 15,000 ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸಿದೆ.
ಈ ಕ್ರಮದ ಮೂಲಕ ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಇದರಿಂದ ಅವರು ಮಿಷನರಿ ಮತ್ತು ಕಾನ್ವೆಂಟ್ ಶಾಲಾ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಲು ಸಮರ್ಥರಾಗುತ್ತಾರೆ ಎಂದು ಸರ್ಕಾರ ಪ್ರತಿಪಾದಿಸಿದೆ.
ಇದನ್ನೂ ಓದಿ: ಇಫ್ತಾರ್ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ
ರಾಜ್ಯದ 1.5 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 1.83 ಕೋಟಿ ಮಕ್ಕಳು ಓದುತ್ತಿದ್ದಾರೆ.
ಲಕ್ನೋ ಒಂದರಲ್ಲೇ ಸುಮಾರು 60 ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳನ್ನು ಇಂಗ್ಲಿಷ್ ಮಧ್ಯಮ ಶಾಲೆಗಳಾಗಿ ಪರಿವರ್ತಿಸಲಾಗಿದೆ. ಪ್ರತಿ ಬ್ಲಾಕ್‌ನಲ್ಲಿ, ಖಾಸಗಿ ಶಾಲೆಗಳ ಮಾದರಿಯಲ್ಲಿ ಎರಡು ಅಥವಾ ಮೂರು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು IANS ವರದಿ ಮಾಡಿದೆ.
ಉತ್ತರ ಪ್ರದೇಶ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳು, ಸಮವಸ್ತ್ರ, ಚೀಲಗಳು, ಬೂಟುಗಳು ಮತ್ತು ಸಾಕ್ಸ್ ಜೊತೆಗೆ ಚಳಿಗಾಲದಲ್ಲಿ ಸ್ವೆಟರ್‌ಗಳನ್ನು ಒದಗಿಸುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ


