Homeಮುಖಪುಟಯುಪಿ: ಸಹೋದರನ ಮುಂದೆಯೆ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ

ಯುಪಿ: ಸಹೋದರನ ಮುಂದೆಯೆ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ತನ್ನ ಕಿರಿಯ ಸಹೋರದರನ ಮುಂದೆಯೆ 15 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯು ಶನಿವಾರ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ.

ಮಕ್ಕಳ ಪೋಷಕರು ಮತ್ತೊಂದು ಹಳ್ಳಿಯಲ್ಲಿನ ತಮ್ಮ ಕುಟುಂಬದ ಕಾರ್ಯಕ್ರಮಕ್ಕಾಗಿ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ನೆರೆ ಮನೆಯ ವ್ಯಕ್ತಿಯೊಬ್ಬ ಮನೆಯೊಳಗೆ ಮಲಗಿದ್ದ ಮಕ್ಕಳನ್ನು ಬಂದೂಕು ತೋರಿಸಿ ಹೆದರಿಸಿದ್ದು, ನಂತರ ತನ್ನ ಮೂವರು ಸ್ನೇಹಿತರನ್ನು ಮನೆಯೊಳಗೆ ಕರೆದಿದ್ದಾನೆ ಎಂದು ಹೇಳಲಾಗಿದೆ.

ಬಾಲಕಿಯ 12 ವರ್ಷದ ಸಹೋದರನಿಗೆ ಬಂದೂಕು ತೋರಿಸಿ, ಬೊಬ್ಬಿಟ್ಟರೆ ಕೊಲ್ಲುವುದಾಗಿ ಬೆದರಿಸಿದ ನಂತರ ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೆ ಘಟನೆಯ ವೀಡಿಯೊವನ್ನು ಸಹ ಚಿತ್ರೀಕರಿಸಿದ್ದು, ದೂರು ನೀಡಿದರೆ ಅದನ್ನು ವೈರಲ್ ಮಾಡುತ್ತೇವೆ ಎಂದು ಸಂತ್ರಸ್ಥ ಬಾಲಕಿಗೆ ಬೆದರಿಕೆ ಕೂಡಾ ಹಾಕಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಘಟನೆಯ ನಂತರ ಬಾಲಕಿಯ ಸಹೋದರನು ತಮ್ಮ ಹೆತ್ತವರಿಗೆ ವಿಷಯ ತಲುಪಿಸಿದ್ದು, ಅವರು ಹಿಂತಿರುಗುವ ಹೊತ್ತಿಗೆ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಬಾಲಕಿಯ ತಂದೆಯು ಘಟನೆಯ ಬಗ್ಗೆ ಆರೋಪಿಯ ಪೋಷಕರಿಗೆ ಹೇಳಿದ್ದಾರೆ. ಈ ವೇಳೆ ಅವರು, ವಿಷಯವನ್ನು ದೊಡ್ಡದು ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಬಾಲಕಿಯ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಡಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದರು, ಆದರೆ ಅವರಲ್ಲಿ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ, ಮನೆ ಅತಿಕ್ರಮಣ, ಕ್ರಿಮಿನಲ್ ಬೆದರಿಕೆ ಮತ್ತು ಪೊಕ್ಸೊ ಕಾಯ್ದೆಯ ಅಡಿಯಲ್ಲಿ ಬಂಧಿತ ಮೂವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...