Homeಮುಖಪುಟಸರ್ಕಾರಕ್ಕೆ ನಾಗರಿಕರ ಖಾಸಗಿತನ & ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ : ಅಲಹಾಬಾದ್‌ ಹೈಕೋರ್ಟ್‌

ಸರ್ಕಾರಕ್ಕೆ ನಾಗರಿಕರ ಖಾಸಗಿತನ & ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ : ಅಲಹಾಬಾದ್‌ ಹೈಕೋರ್ಟ್‌

- Advertisement -
- Advertisement -

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನೆಯ ವೇಳೆ ಹಿಂಸಾಚಾರದ ಆರೋಪ ಹೊತ್ತವರನ್ನು ಹೆಸರಿಸಿ ಉತ್ತರ ಪ್ರದೇಶ ಸರ್ಕಾರ ಅಳವಡಿಸಿದ ಹೋರ್ಡಿಂಗ್‌ಗಳ ವಿಷಯವನ್ನು ಉತ್ತರ ಪ್ರದೇಶದ ಹೈಕೋರ್ಟ್ ವಿಚಾರಣೆ ನಡೆಸಿತು. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾದ ವಿಚಾರಣೆಯಲ್ಲಿ, ನ್ಯಾಯಾಲಯವು ಸರಕಾರಕ್ಕೆ ಹಲವಾರು ಪ್ರಶ್ನೆಗಳನ್ನು ಕೇಳಿತು. ಪ್ರಶ್ನೆಗಳಿಗೆ ಸರ್ಕಾರಿ ಪ್ರತಿನಿಧಿಗಳು ಉತ್ತರಿಸಿದರು. ಈ ಕುರಿತು ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿದ್ದು, ನಾಳೆ ಮಧ್ಯಾಹ್ನ ತೀರ್ಪು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶದ ಉಚ್ಛನ್ಯಾಯಾಲಯವಾದ ಅಲಹಾಬಾದ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದರು. ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಬೇಕಿದ್ದ ವಿಚಾರಣೆಯು ಸರ್ಕಾರದ ಕೋರಿಕೆಯ ಮೇಲೆ ಸಂಜೆ 3 ಕ್ಕೆ ಮುಂದೂಡಿತ್ತು. ಆ ಸಮಯದಲ್ಲಿ ಮುಖ್ಯ ನ್ಯಾಯಾಧೀಶರು ಸರಕಾರಕ್ಕೆ ನಾಗರಿಕರ ಖಾಸಗಿತನ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಹಕ್ಕಿಲ್ಲ, ವಿಚಾರಣೆ ಪ್ರಾರಂಭವಾಗುವ ಮೊದಲೇ ಸರಕಾರ ಅದನ್ನು ಸರಿಪಡಿಸುವ ಬಗ್ಗೆ ಭರವಸೆಯಿದೆ” ಎಂದು ಹೇಳಿದ್ದರು.

“ಅಡ್ವೊಕೇಟ್ ಜನರಲ್ ಆಡಳಿತದ ಪರವಾಗಿ ಹಾಜರಾಗಿ ಸರ್ಕಾರದ ಅಭಿಪ್ರಾಯಗಳನ್ನು ಮಂಡಿಸಿದರು. ವಿಚಾರಣೆಯ ನಂತರ ನ್ಯಾಯಾಲಯವು ತನ್ನ ಆದೇಶಗಳನ್ನು ಕಾಯ್ದಿರಿಸಿದೆ, ನಾಳೆ ಮಧ್ಯಾಹ್ನ 3 ಗಂಟೆಗೆ ತೀರ್ಪು ನೀಡಬಹುದು” ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀರಜ್ ತ್ರಿಪಾಠಿ ಸುದ್ದಿಗಾರರಿಗೆ ತಿಳಿಸಿದರು.

ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ಆರೋಪದ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ವಿಳಾಸ ಮತ್ತು ಫೋಟೋಗಳನ್ನು ಹೊತ್ತ ಹೋರ್ಡಿಂಗ್‌ಗಳನ್ನು ಲಕ್ನೋದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿತ್ತು. ಆದಿತ್ಯವಾರ ರಜಾದಿನವಾದರು ಇದರ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಅವರ ನ್ಯಾಯಾಲಯವು ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿತ್ತು.

ಅನೇಕ ಆರೋಪಿಗಳಿಗೆ ವೈಯಕ್ತಿಕ ಆಸ್ತಿ ಲಗತ್ತು ನೋಟಿಸ್‌ಗಳನ್ನು ಈಗಾಗಲೇ ಸರ್ಕಾರ ಕಳುಹಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...