Homeಮುಖಪುಟನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ಬಿಜೆಪಿ ಕಾರ್ಯಕರ್ತರು: ಆರೋಪ

ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ಬಿಜೆಪಿ ಕಾರ್ಯಕರ್ತರು: ಆರೋಪ

ದುಷ್ಕರ್ಮಿಗಳನ್ನು ‘ಯೋಗಿಯ ಗೂಂಡಾಗಳು’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ

- Advertisement -
- Advertisement -

ಸ್ಥಳೀಯ ಚುಣಾವಣೆಗೆ ನಾಮಪತ್ರ ಸಲ್ಲಿಸಲು ಹೋಗುತ್ತಿದ್ದ ಮಹಿಳೆಯು ಆಕ್ರಮಣಕ್ಕೆ ಒಳಗಾಗಿದ್ದು, ಪ್ರತಿಪಕ್ಷದ ಇಬ್ಬರು ಗಂಡಸರು ಮಹಿಳೆಯ ಸೀರೆಯನ್ನು ಎಳೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಆಕ್ರಮಣ ಮಾಡುತ್ತಿರುವುದು ಕ್ಯಾಮಾರದಲ್ಲಿ ಸೆರೆಯಾಗಿದೆ. ಆಕ್ರಮಣ ಮಾಡಿವರನ್ನು ಬಿಜೆಪಿಯ ಕಾರ್ಯಕರ್ತರು ಎಂದು ಸಮಾಜವಾದಿ ಪಕ್ಷ ಆರೋಪಿಸಿದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಹಲ್ಲೆಗೊಳಗಾದ ಮಹಿಳೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಬೆಂಬಲಿಗರಾಗಿದ್ದು, ಅವರು ಬ್ಲಾಕ್ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಭ್ಯರ್ಥಿಯೊಬ್ಬರ ಜೊತೆಗೆ ತೆರಳಿದ್ದರು.

“ಇದು ಉತ್ತರ ಪ್ರದೇಶದ ಬಿಜೆಪಿ ನಾಯಕರ ಗೂಂಡಾಗಿರಿಯಾಗಿದ್ದು, ಜಂಗಲ್ ರಾಜ್ಯದ ವಿಶಿಷ್ಟ ಲಕ್ಷಣವಾಗಿದೆ. ಮಹಿಳಾ ಪಂಚಾಯತ್ ಸದಸ್ಯೆಯ ಸೀರೆಯನ್ನು ಕಿತ್ತುಹಾಕಲು ಸಾರ್ವಜನಿಕ ಪ್ರಯತ್ನ ಮಾಡಲಾಗುತ್ತಿದೆ ಆದರೆ ಆಡಳಿತವು ಮೂಕ ಪ್ರೇಕ್ಷಕವಾಗಿದೆ. ಇದು ಪ್ರಜಾಪ್ರಭುತ್ವವೇ? ಅಥವಾ ಇದು ಬಿಜೆಪಿಯ ನಿಜವಾದ ಗೂಂಡಾಗಿರಿಯೇ?” ಎಂದು ಸಮಾಜವಾಗಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಅವರು ವಿಡಿಯೊವನ್ನು ಟ್ವಿಟರ್‌ನಲ್ಲಿ ಶೇರ್‌ ಮಾಡಿದ್ದು ಅದರಲ್ಲಿ, “ಅಧಿಕಾರದ ದಾಹ. ಚುನಾವಣೆ ಗೆಲ್ಲಲು ಮಹಿಳಯನ್ನು ಅವಮಾನಿಸಲಾಯಿತು. ಯೋಗಿಯ ಗೂಂಡಾಗಳು” ಎಂದು ಬರೆದಿದ್ದಾರೆ.

 

ಗುರುವಾರ ರಾಜ್ಯದ ಒಂದು 14 ಸ್ಥಳಗಳಲ್ಲಿ ಘರ್ಷಣೆಗಳು ನಡೆದಿದೆ ಎಂದು ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಅವರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಜೆಪಿ ಶಿವಸೇನೆ ಮತ್ತು ಎನ್‌ಸಿಪಿಗೆ ಧನ್ಯವಾದ ಹೇಳಬೇಕು- ಸಂಜಯ್ ರಾವತ್

“825 ಬ್ಲಾಕ್‌ ಪಂಚಾಯತ್ ಮುಖಂಡರನ್ನು ಆಯ್ಕೆ ಮಾಡುವ ಚುನಾವಣೆಯು ಶನಿವಾರ ನಡೆಯಲಿದೆ. ನಾಮಪತ್ರ ಸಲ್ಲಿಸಲು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದಾಗ್ಯೂ 14 ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದೆ. ಗುಂಪುಗಳ ನಡುವೆ ನಡೆದಿರುವ ಘರ್ಷಣೆಯ ವರದಿಗಳು ನಮ್ಮಲ್ಲಿವೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರಶಾಂತ್‌ ಕುಮಾರ್ ಹೇಳಿದ್ದಾರೆ.

ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಈ ಚುನಾವಣೆಯು ಸಾಕಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ ಎನ್ನಲಾಗಿದೆ.

ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಲ್ಲಿ ಗೆದ್ದಿತ್ತು. ಬ್ಲಾಕ್‌ ಪ್ರಮುಖ್‌ ಚುನಾವಣೆಗಳು ವಿಧಾನಸಭಾ ಚುನಾವಣೆಗೂ ಮುಂಚೆ ನಡೆಲಿರುವ ಕೊನೆಯ ಗ್ರಾಮೀಣ ಚುನಾವಣೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...

ಇಡಿ ಕಚೇರಿ ಮೇಲೆ ರಾಜ್ಯ ಪೊಲೀಸರಿಂದ ಪೂರ್ವಯೋಜಿತ ದಾಳಿ: ಜಾರ್ಖಂಡ್ ಹೈಕೋರ್ಟ್

ಜನವರಿ 16 ರಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಮೇಲೆ ಇತ್ತೀಚೆಗೆ ನಡೆದ ಪೊಲೀಸ್ ದಾಳಿಯು ಪ್ರಾಥಮಿಕವಾಗಿ ಪೂರ್ವಯೋಜಿತ ಎಂದು ಕಾಣುತ್ತಿದೆ ಎಂದು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಹೇಳಿದೆ. ಇಡಿ ಸಲ್ಲಿಸಿದ ರಿಟ್ ಅರ್ಜಿಯನ್ನು...

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಗೆಲುವು

ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಪಂಗಾರ್ಕರ್ ವಾರ್ಡ್ 13 ರಿಂದ ಕಣದಲ್ಲಿದ್ದರು. ಅವರ...