Homeದಲಿತ್ ಫೈಲ್ಸ್ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ಹುಟ್ಟುಹಬ್ಬದ ಆಚರಣೆಗೆ ಸೇರಿದ್ದ ಮಹಿಳೆಯ ಮೇಲೆ ಮತಾಂತರದ ಆರೋಪದ ಮಾಡಿರುವ ವಿಎಚ್‌ಪಿ, ದಲಿತ ಮಹಿಳೆಯರು ಜೈಲು ಸೇರಲು ಕಾರಣವಾಗಿದೆ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ ದೂರಿನ ಮೇರೆಗೆ, ಬಲವಂತದ ಮತಾಂತರ ಆರೋಪದ ಮೇಲೆ ಜುಲೈ 30ರಂದು ಉತ್ತರ ಪ್ರದೇಶದ ಅಜಂಗಢ್‌ನ ಮಹಾರಾಜ್‌ಗಂಜ್ ಪ್ರದೇಶದಲ್ಲಿ ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬಲವಂತದ ಮತಾಂತರವನ್ನು ಆರೋಪಿಸಿ ಹಿಂದುತ್ವವಾದಿಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆಯರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದ್ರಕಲಾ, ಸುಭಾಗಿ ದೇವಿ, ಸಾಧನಾ, ಸವಿತಾ, ಅನಿತಾ ಮತ್ತು ಸುನೀತಾ ಎಂಬ ಮಹಿಳೆಯರನ್ನು ಕಲಾ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಬಂಧಿಸಲಾಗಿದೆ.

ವಿಎಚ್‌ಪಿಯ ಬ್ಲಾಕ್ ಅಧ್ಯಕ್ಷ ಅಶುತೋಷ್ ಸಿಂಗ್ ಅವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿದ ಅಶುತೋಷ್‌ ಸಿಂಗ್, “ಹುಟ್ಟುಹಬ್ಬದ ಸಮಾರಂಭದ ನೆಪದಲ್ಲಿ ಬಲವಂತದ ಮತಾಂತರಗಳು ನಡೆಯುತ್ತಿವೆ ಎಂದು ನಮಗೆ ತಿಳಿದುಬಂತು. ನಾವು ವಿಷಯವನ್ನು ಪೊಲೀಸರಿಗೆ ತಿಳಿಸಿದೆವು. ಅವರು ಮಹಿಳೆಯರನ್ನು ಬಂಧಿಸಿದ್ದಾರೆ” ಎಂದಿದ್ದಾರೆ.

“ಅಲ್ಲಿ ಮಹಿಳೆಯರು ಮಾತ್ರ ಇದ್ದರು. ಅವರು ಇತರರಿಗೆ ಹಣದ ಆಮಿಷವೊಡ್ಡುತ್ತಿದ್ದರು. ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವರು ಯೇಸುವಿನಂತೆ ಕೈಯನ್ನು ಮೇಲೆ ಎತ್ತಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹರಿಜನ ಮಹಿಳೆಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದರು” ಎಂದು ದೂರಿದ್ದಾರೆ.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರನ್ನು ಬಲವಂತವಾಗಿ ಮತಾಂತರಿಸಲು ಮಹಿಳೆಯರು ಪ್ರಯತ್ನಿಸುತ್ತಿದ್ದಾರೆ. ಸಮಾರಂಭವನ್ನು ತಡೆಯಲು ಮುಂದಾದಾಗ ಬೆದರಿಕೆ ಹಾಕಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 506 ಮತ್ತು ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಬಂಧನದ ನಂತರ, ಮಹಿಳೆಯರನ್ನು ವಿಶೇಷ ಕೆಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 16ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಮಹಿಳೆಯರ ಜೊತೆಗಿದ್ದ ಕಾರ್ಯಕರ್ತ ದೀನಾನಾಥ್ ಜೈಸ್ವರ್, “ಆರು ದಲಿತ-ಕ್ರಿಶ್ಚಿಯನ್ ಮಹಿಳೆಯರು ಜೈಲಿನಲ್ಲಿ ಕೊಳೆಯುತ್ತಲೇ ಇದ್ದಾರೆ. ಇದು ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಪರಿಚಿತರೆಲ್ಲ ಒಟ್ಟಿಗೆ ಸೇರಿದ್ದರು. ಅವರು ಯೇಸುವನ್ನು ನಂಬುತ್ತಾರೆ. ಹೀಗಾಗಿ ಕೇಕ್ ಕತ್ತರಿಸುವ ಮೊದಲು ಪ್ರಾರ್ಥನೆ ಮಾಡಲು ನಿರ್ಧರಿಸಿದರು. ಆದರೆ ಬಲವಂತದ ಮತಾಂತರ ಎಂದು ಆರೋಪಿಸಲಾಗಿದೆ. ಅಂದು ಭಾನುವಾರವಾದ್ದರಿಂದ ಮಹಿಳೆಯರನ್ನು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆದಾಗ್ಯೂ, ಮಹಿಳೆಯರಿಗೆ ಜಾಮೀನು ನಿರಾಕರಿಸಲಾಯಿತು. ಈಗ ಮಹಿಳೆಯನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರನ್ನು ಪ್ರತಿನಿಧಿಸುವ ವಕೀಲರು, ಆರೋಪಗಳನ್ನು ಆಧಾರರಹಿತವೆಂದು ಪ್ರತಿಪಾದಿಸಿದ್ದಾರೆ.

‘ದಿ ವೈರ್‌’ ಜೊತೆ ಮಾತನಾಡಿದ ವಕೀಲ ಮುನೀಶ್ ಚಂದ್ರ, “ವಾಸ್ತವ ಬೇರೆಯೇ ಇದೆ. ಬಲವಂತದ ಮತಾಂತರ ಆರೋಪದ ಅಡಿಯಲ್ಲಿ ಜನಪ್ರಿಯತೆಯನ್ನು ಗಳಿಸಲು, ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಈ ಕೃತ್ಯ ಎಸಗಲಾಗಿದೆ. ಸರ್ಕಾರದ ಬೆಂಬಲವಿರುವ ಬಲಪಂಥೀಯ ಮತಾಂಧ ಸಂಘಟನೆಗಳು ಜನರನ್ನು ಟಾರ್ಗೆಟ್ ಮಾಡುತ್ತಿವೆ” ಎಂದು ದೂರಿದ್ದಾರೆ.

“ಮಹಿಳೆಯರು ತಮ್ಮ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅವರು ಪ್ರಾರ್ಥನೆ ಮಾಡುವಾಗ, ವಿಎಚ್‌ಪಿ ಸದಸ್ಯರು ಮಹಿಳೆಯರ ವಿರುದ್ಧ ದೂರು ದಾಖಲಿಸಿದರು. ಅವರನ್ನು ಮಧ್ಯಾಹ್ನ 2 ಗಂಟೆಗೆ ಠಾಣೆಗೆ ಕರೆದೊಯ್ಯಲಾಯಿತು. ಆದರೆ ಪೊಲೀಸ್ ಡೈರಿಯಲ್ಲಿ, ಮಹಿಳೆಯರನ್ನು ಸಂಜೆ 6 ಗಂಟೆಗೆ ಕರೆದೊಯ್ಯಲಾಯಿತು ಎಂದು ಬರೆಯಲಾಗಿದೆ. ನಾವು ಅವರ ಜಾಮೀನಿಗಾಗಿ ಪ್ರಯತ್ನಿಸಿದ್ದೇವೆ. ಆದರೆ ಕೆಳ ನ್ಯಾಯಾಲಯವು ಮಹಿಳೆಯರಿಗೆ ಜಾಮೀನು ನೀಡುವ ಅಧಿಕಾರವನ್ನು ಹೊಂದಿಲ್ಲ. ರಾಜಕೀಯ ಒತ್ತಡದಿಂದ ಮಹಿಳೆಯರಿಗೆ ಜಾಮೀನು ನೀಡಲಾಗಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದೂವೋ ಮುಸ್ಲಿಮನೋ ಎಂದು ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ!

ಇಂತಹ ಹಲವಾರು ಬಂಧನಗಳನ್ನು ‘ಮತಾಂತರ ವಿರೋಧಿ’ ಕಾನೂನಿನ ಅಡಿಯಲ್ಲಿ ಮಾಡಲಾಗಿದೆ.

2021 ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.ಇಂತಹ ಹೆಚ್ಚಿನ ದಾಳಿಗಳು ದಲಿತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಕ್ರಿಶ್ಚಿಯನ್ನರ ಮೇಲೆ ನಡೆದಿವೆ ಎಂದು ಸತ್ಯಶೋಧನಾ ವರದಿಯು ಎತ್ತಿ ತೋರಿಸಿದೆ.

ಮಹಾರಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಅಧಿಕಾರಿ ಹಿರಿಯ ಸಬ್ ಇನ್ಸ್‌ಪೆಕ್ಟರ್ ಕಮಲ್ಕಾಂತ್ ವರ್ಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ‘ದಿ ವೈರ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...