Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...