Homeಮುಖಪುಟಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಮತ್ತು ಸಚಿವರ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಮಂಡಿಸಿದ ಅಮಿತ್ ಶಾ

- Advertisement -
- Advertisement -

ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡನೆ ಆಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. 

ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಮಸೂದೆಗಳ ಪ್ರತಿಗಳನ್ನು ಹರಿದು ಬಿಸಾಕಿದರು.

ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಮೊದಲು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದರು. ಇದು ಸರ್ಕಾರಗಳನ್ನು ಅಸ್ಥಿರಗೊಳಿಸುವ ಅಸ್ತ್ರವೇ ಹೊರತು, ಇನ್ನೇನು ಅಲ್ಲ ಎಂದರು.

ಓವೈಸಿ ಮಾತಿಗೆ ಧ್ವನಿಗೂಡಿಸಿದ ಪ್ರತಿಪಕ್ಷ ಸಂಸದರು, ಘೋಷಣೆಗಳನ್ನು ಕೂಗಿದರು. ಇದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಮೂರು ಗಂಟೆಗೆ ಮತ್ತೆ ಸಭೆ ಸೇರಿದಾಗ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಹಾಗಾಗಿ, ಸ್ಪೀಕರ್ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಿಕೆ ಮಾಡಿದರು.

ಮಸೂದೆಗಳ ಮಂಡನೆಯ ಬಳಿಕ ಅಮಿತ್ ಶಾ ಅವರು ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ನಿರ್ಣಯವನ್ನು ಮಂಡಿಸಿದರು. ಅದಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆಯಿತು. 

ಮೂರು ಮಸೂದೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳಲ್ಲಿ ಸರ್ಕಾವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಬಹುದು. ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ಇಂತಹ ಮಸೂದೆಗಳನ್ನು ತರುವ ಮೂಲಕ ಬಿಜೆಪಿ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚುಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಇದೊಂದು ಕಠಿಣ ನಿಲುವಾಗಿದೆ. ಭ್ರಷ್ಟಾಚಾರ ವಿರೋಧಿ ಕ್ರಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡರೂ, ಇದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ. ಅಪರಾಧಿ ಎಂದು ಸಾಬೀತಾಗುವ ಮೊದಲೇ ಚುನಾಯಿತ ಪ್ರತಿನಿಧಿಗಳನ್ನು ಪದಚ್ಯುತಗೊಳಿಸಲು ಇದು ಅವಕಾಶ ನೀಡುತ್ತದೆ” ಎಂದು ಸಂಸತ್ ಸಂಕೀರ್ಣದಲ್ಲಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...