HomeಮುಖಪುಟUPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌

UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌

ಕಾರ್ಮಿಕ ಸಚಿವ ರಾಜೀನಾಮೆ ಕೊಟ್ಟ ಬಳಿಕ ಈ ಹೇಳಿಕೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಮೂವರು ಬಿಜೆಪಿ ಶಾಸಕರು ಪಕ್ಷ ತೊರೆದಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಕ್ಯಾಬಿನೆಟ್ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ ನಂತರ ಶರದ್‌ ಪವಾರ್‌ ಅವರ ಈ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ:ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ಅವರ ಹೇಳಿಕೆಯ ಬೆನ್ನಲ್ಲೇ ಉತ್ತರ ಪ್ರದೇಶದ ಇತರ ಮೂವರು ಬಿಜೆಪಿ ಶಾಸಕರು ಮಂಗಳವಾರ ಪಕ್ಷ ತೊರೆದಿದ್ದಾರೆ.

“ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಉತ್ತರ ಪ್ರದೇಶದ ಜನರು ಬದಲಾವಣೆಗಾಗಿ ಎದುರು ನೋಡುತ್ತಿದ್ದಾರೆ, ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ, ವಿಧಾನಸಭೆ ಚುನಾವಣೆಗೂ ಮುನ್ನ ಉತ್ತರ ಪ್ರದೇಶದಲ್ಲಿ ಕೋಮು ಧ್ರುವೀಕರಣ ಮಾಡಲಾಗುತ್ತಿದೆ, ಇದಕ್ಕೆ ಉತ್ತರ ಪ್ರದೇಶದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್, ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷವು ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದ ಉತ್ತರ ಪ್ರದೇಶದ ಶಾಸಕರು

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಿಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

ಅವರ ನಂತರ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಪಕ್ಷವನ್ನು ತೊರೆದಿದ್ದಾರೆ. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ ರೋಷನ್ ಲಾಲ್ ವರ್ಮಾ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷ ಸೇರಲು ನಿರ್ಧರಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಯುಪಿ: 16 ವರ್ಷದ ದಲಿತ ಬಾಲಕಿಗೆ ಅಮಾನವೀಯವಾಗಿ ಥಳಿಸಿದ ದುಷ್ಕರ್ಮಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...