Homeಮುಖಪುಟಬರೇಲಿ: ಇನ್‌ಸ್ಟಾಗ್ರಾಮ್ ಕಾಮೆಂಟ್‌ನಿಂದ ಕೋಮು ಉದ್ವಿಗ್ನತೆ; ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ

ಬರೇಲಿ: ಇನ್‌ಸ್ಟಾಗ್ರಾಮ್ ಕಾಮೆಂಟ್‌ನಿಂದ ಕೋಮು ಉದ್ವಿಗ್ನತೆ; ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ

- Advertisement -
- Advertisement -

ಇನ್‌ಸ್ಟಾಗ್ರಾಮ್ ಕಾಮೆಂಟ್‌ಗಳಿಂದಾಗಿ ಯುಪಿಯ ಬರೇಲಿಯಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು,  ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

14 ವರ್ಷದ ಹರೆಯದ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬರೇಲಿ  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗುರುವಾರ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯು Instagram ಪೋಸ್ಟ್‌ ವೊಂದಕ್ಕೆ ಸಂಬಂಧಿಸಿ ಕಾಮೆಂಟ್ ಮಾಡಿದ್ದಾರೆ. ಒಂದು ದಿನದ ನಂತರ  ಆತನ ಸಹಪಾಠಿ, ಅಲ್ಪಸಂಖ್ಯಾತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಕಾಮೆಂಟ್‌ನೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಇಬ್ಬರು ಬಾಲಕರು ಭಿನ್ನ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

Instagram ಕಮೆಂಟ್  ಬೆನ್ನಲ್ಲೇ ಉದ್ವಿಗ್ನತೆ ಉಂಟಾಗಿದ್ದು, ಬಾಲಕನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಅಲ್ಪಸಂಖ್ಯಾತ ಸಮುದಾಯದ ನೂರಾರು ಜನರು ಪೊಲೀಸ್ ಠಾಣೆ ಬಳಿ ಜಮಾಯಿಸಿದ್ದರು. ಬಳಿಕ ಗುಂಪು ಬಾಲಕನ ಮನೆಯ ಬಳಿ ಜಮಾಯಿಸಿದೆ. ಈ ವೇಳೆ ಕೆಲವರು ಬಾಲಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪೊಲೀಸರು ಬಾಲಕನ ಮನೆಯ ಹೊರಗಿನಿಂದ ಗುಂಪನ್ನು ಚದುರಿಸಿದ ನಂತರ  ಪ್ರತಿಭಟನಾಕಾರರು ರಾಮಲೀಲಾ ಮೈದಾನದಲ್ಲಿ ಧರಣಿ ನಡೆಸಿದ್ದಾರೆ. ಆರೋಪಿ ಬಾಲಕನಿಗೆ  ವಶಕ್ಕೆ ಪಡೆಯುವವರೆಗೂ  ವಾಪಾಸ್ಸಾಗಲು ನಿರಾಕರಿಸಿದ್ದಾರೆ. ಜಿಲ್ಲೆಯ ಹಿರಿಯ ಪೋಲೀಸ್ ಮತ್ತು ಆಡಳಿತಾಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಲು  ಪ್ರಯತ್ನಿಸಿದ್ದರು.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಘೇರಾವ್ ಹಾಕುವ ಮೂಲಕ ಪ್ರತಿಭಟನೆ ಆರಂಭಗೊಂಡಿದ್ದು, ಮಧ್ಯರಾತ್ರಿ  ವೇಳೆ ಕಮೆಂಟ್ ಮಾಡಿದ ಅಪ್ರಾಪ್ತ ಬಾಲಕನಿಗೆ  ಬಂಧಿಸುವ ಮೂಲಕ ಕೊನೆಗೊಂಡಿದೆ. ಇದಾದ ಒಂದು ಗಂಟೆಯ ನಂತರ, ಪೊಲೀಸರು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಯನ್ನು ಕೂಡ ವಶಕ್ಕೆ ಪಡೆದಿದ್ದಾರೆ ಎಂದು  ವರದಿಯಾಗಿದೆ.

ನಾವು  ಪ್ರಕರಣಕ್ಕೆ  ಸಂಬಂಧಿಸಿ  ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಪೊಲೀಸರು ಮತ್ತು ಸಶಸ್ತ್ರ ಪಡೆಯ ಪೇದೆಗಳನ್ನು ನಿಯೋಜಿಸಲಾಗಿದೆ ಎಂದು  ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ರಾಕೇಶ್ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಗೆ ಸಂಬಂಧ ಇದೆಯಾ?ಸುಪ್ರೀಂಕೋರ್ಟ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

0
ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ....