Homeಮುಖಪುಟ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಆರಂಭವಾಗಿದೆ.

- Advertisement -
- Advertisement -

ಯುಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೂ ನಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿ ನಡೆಸುತ್ತಿರುವ ಟ್ವಿಟರ್‌ ಅಭಿಯಾನ ಈಗ ಟ್ರೆಂಡ್ ಆಗಿದೆ. ಯುಪಿಎಸ್‌ಸಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

#ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 10.10 ಗಂಟೆಯಿಂದ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಅಭಿಯಾನವನ್ನು ಇನ್ನು ಹೆಚ್ಚಿನ ಮಟ್ಟಕ್ಕೆ ಜೈಜೋಡಿಸಿ ಎಂದು ಕನ್ನಡ ಮನಸ್ಸುಗಳು ಮನವಿ ಮಾಡಿವೆ. #ಕನ್ನಡದಲ್ಲಿUPSC #UPSCInKannada ಹ್ಯಾಶ್ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲು ಕರವೇ ತಿಳಿಸಿದೆ.

“ಯುಪಿಎಸ್ ಸಿ ಪರೀಕ್ಷೆಗಳ ಎಲ್ಲ ಹಂತಗಳಲ್ಲೂ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು, ಕನ್ನಡದಲ್ಲೂ ಉತ್ತರ ಬರೆಯುವ ಅವಕಾಶ ಇರಬೇಕು. ಇದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯ. ಭಾರತ ಒಕ್ಕೂಟ ಸರ್ಕಾರ ಈ ಕೂಡಲೇ ಪರೀಕ್ಷಾ‌ ವಿಧಾನ ಬದಲಿಸಿ,‌ ಕನ್ನಡ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಬ್ರಿಟಿಷರ ಕಾಲದ ಸಾಮ್ರಾಜ್ಯಶಾಹಿ ನೀತಿಗಳನ್ನೇ ಭಾರತ ಒಕ್ಕೂಟ ಸರ್ಕಾರ ಈಗಲೂ ಮುಂದುವರೆಸುತ್ತಿದೆ. ಇದರಿಂದಾಗಿ ಭಾರತದ ಹಿಂದಿಯೇತರ ಭಾಷಾ ಸಮುದಾಯಗಳು ಎರಡನೇ ದರ್ಜೆ ಪ್ರಜೆಗಳಂತೆ ಬದುಕುವಂತಾಗಿದೆ. ಹಿಂದೆ ನಾವು ಬ್ರಿಟಿಷರ ಗುಲಾಮರಾಗಿದ್ದೆವು. ಈಗ ಬ್ರಿಟಿಷರ ಜಾಗದಲ್ಲಿ ಹಿಂದಿ ಸಾಮ್ರಾಜ್ಯಶಾಹಿಗಳು ಕುಳಿತಿದ್ದಾರೆ” ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಹಿಂದಿ ಭಾಷಿಕರಿಗೆ ಎಷ್ಟು ಹಕ್ಕಿದೆಯೋ ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಂ, ಪಂಜಾಬಿ, ಒರಿಯಾ, ಮರಾಠಿ, ಕಾಶ್ಮೀರಿ, ಅಸ್ಸಾಮಿ ಇತ್ಯಾದಿ ಭಾಷಿಕರಿಗೂ ಅಷ್ಟೇ ಹಕ್ಕಿದೆ. ಹೀಗಿರುವಾಗ ಹಿಂದಿಯನ್ನರಿಗೆ ಮಾತ್ರ ಅವರ ನುಡಿಯಲ್ಲಿ ಪರೀಕ್ಷೆ ಬರೆಸುವ ಮೋಸ ಯಾಕೆ? ಸಂವಿಧಾನದ ಹದಿನಾಲ್ಕನೇ ಪರಿಚ್ಛೇದದ ಪ್ರಕಾರ ಭಾರತದ ಎಲ್ಲ ನಾಗರಿಕರೂ ಸಮಾನರು. ಆದರೆ ಹಿಂದಿ ಭಾಷಿಕ ಸಮುದಾಯಕ್ಕೆ ಎಲ್ಲ‌ ಅವಕಾಶಗಳನ್ನು ನೀಡಿ, ಇತರ ಭಾಷಿಕರ ಹಕ್ಕುಗಳನ್ನು ಕಿತ್ತುಕೊಂಡರೆ ಸಮಾನತೆ ಇರಲು ಸಾಧ್ಯವೇ? ಇದು ಯಾವ ರೀತಿಯ ಸಮಾನತೆ? ಇದನ್ನು ಹಿಂದಿಯೇತರ ಜನಸಮುದಾಯಗಳು ಕೇಳುತ್ತಿದ್ದೇವೆ ಎಂದು ಕನ್ನಡಿಗರ ಪರ ಅವರು ಧ್ವನಿ ಎತ್ತಿದ್ದಾರೆ.

ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಯೂ ಇಲ್ಲ, ಕನ್ನಡದಲ್ಲಿ ಬರೆಯುವ ಅವಕಾಶವೂ ಇಲ್ಲ. ಪ್ರಿಲಿಮ್ಸ್ ಆದರಷ್ಟೇ ಮುಖ್ಯ ಪರೀಕ್ಷೆ ಬರೆಯುವ ಅವಕಾಶ. ಅಲ್ಲೂ ಸಹ ಪ್ರಶ್ನೆ ಪತ್ರಿಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿರುತ್ತದೆ. ಇದು ಕನ್ನಡಿಗರ ಹಕ್ಕುಗಳನ್ನು ಮೊಟಕುಗೊಳಿಸಿದಂತಲ್ಲವೇ? ಪ್ರತಿ ವರ್ಷ ಸಾವಿರಾರು ಮಂದಿ ಕನ್ನಡದ ಮಕ್ಕಳು ಕೆಪಿಎಸ್‌ಸಿ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುತ್ತಾರೆ. ಇವರಿಗೆ ಯುಪಿಎಸ್‌ಸಿ ಪರೀಕ್ಷೆ ಕನ್ನಡದಲ್ಲೇ ಬರೆಯಲು ಅವಕಾಶ ಇಲ್ಲ. ಇದರ ಅರ್ಥ ಕನ್ನಡಿಗರನ್ನು ಒಕ್ಕೂಟ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡುತ್ತಿದೆ ಎಂದಾಗುವುದಿಲ್ಲವೇ? ಈ ಅನ್ಯಾಯ ಇನ್ನೆಷ್ಟು ದಿನ ಸಹಿಸುವುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರ ಚಳವಳಿಯ ಹಿನ್ನೆಲೆಯಲ್ಲಿ ಐಬಿಪಿಎಸ್ ಪರೀಕ್ಷೆಗಳಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ದೊರೆತಿದೆ. ಆದರೆ ವ್ಯವಸ್ಥಾಪಕರ ಹುದ್ದೆಗಳಿಗೆ ಈಗಲೂ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಆದರೆ ಹಿಂದಿ ಭಾಷಿಕರು ಎಲ್ಲ ಪರೀಕ್ಷೆಗಳನ್ನು ಹಿಂದಿಯಲ್ಲೇ ಬರೆಯುತ್ತಾರೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಸೇನಾ ನೇಮಕಾತಿಗಳ ಎಲ್ಲ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಸ್ಥಾನವೇ ಇಲ್ಲ. ಎಲ್ಲ ಪರೀಕ್ಷೆಗಳೂ ಹಿಂದಿ, ಇಂಗ್ಲಿಷ್ ಗಳಲ್ಲೇ ನಡೆಯುತ್ತವೆ. ಇದರ ಉದ್ದೇಶವದರೂ ಏನು? ಕನ್ನಡಿಗರಿಗೆ ಉದ್ಯೋಗ ನಿರಾಕರಣೆಯ ಹಿಂದಿನ ಕುತಂತ್ರವಾದರೂ ಯಾಕೆ? ಎಂದು ಕೇಳಿದ್ದಾರೆ.

ರೈಲ್ವೆಯಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ನಡೆಸಲಾಗುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಕಾರಿ ಹೋರಾಟದಿಂದಾಗಿ ಈಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆದರೆ ಅಲ್ಲೂ ಸಹ ಮೇಲಿನ ಹಂತದ ಹುದ್ದೆಗಳ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುಪಿಎಸ್‌‌ಸಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶವಿಲ್ಲದಂತಾಗಿರುವಾಗ ಯುಪಿಎಸ್ ಸಿ ಪರೀಕ್ಷೆಗಳೇ ಯಾಕೆ ಬೇಕು ಎಂದು ನಾವು ಕೇಳಬೇಕಾಗುತ್ತೆ. ನಮ್ಮ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕೆಪಿಎಸ್ ಸಿ ಮೂಲಕವೇ ನೇಮಕ ಮಾಡಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಕಾಲ ಬಂದಿದೆ. ಭಾರತ ಒಕ್ಕೂಟದಲ್ಲಿ ಗೌರವದ ಸ್ಥಾನ ಪಡೆಯಬೇಕಿದ್ದ ಕನ್ನಡಿಗರನ್ನು ತಮ್ಮ ಹಕ್ಕುಗಳಿಗಾಗಿ ಅಂಗಲಾಚುವ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಒಕ್ಕೂಟದ ರಾಜ್ಯಗಳ ಪೈಕಿ ಅತಿಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕ. ಆದರೂ ನಮ್ಮ ಮೇಲೆ ಈ ದೌರ್ಜನ್ಯಗಳು ನಡೆಯುತ್ತಲೇ ಇವೆ. ಯುಪಿಎಸ್‌ಸಿ ಮಾತ್ರವಲ್ಲ, ಒಕ್ಕೂಟ ಸರ್ಕಾರದ ಅಡಿಯಲ್ಲಿ ನಡೆಯುವ ಎಲ್ಲ ಉದ್ಯೋಗಗಳ ಎಲ್ಲ ಹಂತದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ಇದು ನಮ್ಮ ಸಂವಿಧಾನಬದ್ಧ ಹಕ್ಕು. ಇದನ್ನು ನಿರಾಕರಿಸುವ ಯಾವುದೇ ಶಕ್ತಿಗಳ ವಿರುದ್ಧ ಕರ್ನಾಟಕ ರಕ್ಷಣಾ‌ ವೇದಿಕೆ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನ್ನಡದಲ್ಲಿ ಯು.ಪಿ.ಎಸ್‌. ಸಿ. ಬರೆಯುವ ವ್ಯವಸ್ಥೆ ಬೇಕೇಬೇಕು. ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...