Homeಮುಖಪುಟಪ್ರೊ.ಸಾಯಿಬಾಬಾ ಖುಲಾಸೆ ವಿರೋಧಿಸಿ ಮಹಾರಾಷ್ಟ್ರ ಸರ್ಕಾರದಿಂದ ಸುಪ್ರೀಂನಲ್ಲಿ ತುರ್ತು ಮೇಲ್ಮನವಿ

ಪ್ರೊ.ಸಾಯಿಬಾಬಾ ಖುಲಾಸೆ ವಿರೋಧಿಸಿ ಮಹಾರಾಷ್ಟ್ರ ಸರ್ಕಾರದಿಂದ ಸುಪ್ರೀಂನಲ್ಲಿ ತುರ್ತು ಮೇಲ್ಮನವಿ

- Advertisement -
- Advertisement -

ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್‌‌ನ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತುರ್ತು ಮನವಿಯನ್ನು ಸಲ್ಲಿಸಿದೆ. ಸರ್ಕಾರದ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್ ಶನಿವಾರ (ಇಂದು) ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬೇಲಾ ತ್ರಿವೇದಿ ಅವರ ಪೀಠದ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿದೆ.

ಪೀಠವು ಈ ಪ್ರಕರಣವನ್ನು ಬೆಳಿಗ್ಗೆ 11 ಗಂಟೆಗೆ ಆಲಿಸುವ ಸಾಧ್ಯತೆಯಿದೆ. ಹೈಕೋರ್ಟ್‌ ನೀಡಿದ್ದ ತೀರ್ಪಗೆ ತಡೆ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸುವಂತೆ ತೀರ್ಪು ನೀಡಿದ ನಂತರ ಮಹಾರಾಷ್ಟ್ರ ಸರ್ಕಾರವು ಆದೇಶಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ತ್ವರಿತವಾಗಿ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ, ಸರ್ವೋಚ್ಚ ನ್ಯಾಯಾಲಯವು ಈ ವಿಷಯದ ತುರ್ತು ಪಟ್ಟಿಯನ್ನು ಕೋರುವ ಅರ್ಜಿಯನ್ನು ನೋಂದಾವಣೆ ಮುಂದೆ ಸಲ್ಲಿಸಲು ಮಹಾರಾಷ್ಟ್ರಕ್ಕೆ ಅನುಮತಿ ನೀಡಿದೆ.

ಇದನ್ನೂ ಓದಿ: ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ತುರ್ತು ಪಟ್ಟಿಗಾಗಿ ವಿಷಯವನ್ನು ಪ್ರಸ್ತಾಪಿಸಿ ತೀರ್ಪಿಗೆ ತಡೆಯಾಜ್ಞೆ ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಮನವಿಯನ್ನು ನಿರಾಕರಿಸಿತ್ತು.

ಬಂಧನಕ್ಕೊಳಗಾದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಶುಕ್ರವಾರ ಆದೇಶಿಸಿತ್ತು. 2017 ರಲ್ಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಪ್ರಕರಣದಲ್ಲಿ ಅವರ ಜೊತೆಗೆ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...