Homeಮುಖಪುಟಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

ಆದಿವಾಸಿ ಯುವಕನ ಮೇಲೆ ಮೂತ್ರ ಪ್ರಕರಣ ಬಿಜೆಪಿಯ ದ್ವೇಷದ ಅಸಹ್ಯಕರ ಮುಖವಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾರವರ ಬೆಂಬಲಿಗ ಎನ್ನಲಾದ ಪ್ರವೇಶ್ ಶುಕ್ಲಾ ಎಂಬಾತ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಬಿಎಸ್‌ಪಿ ವರಿಷ್ಠೆ ಮಾಯಾವತಿಯವರು ಟ್ವೀಟ್ ಮಾಡಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಏಕೆ ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ಮುಖಂಡನ ಮೇಲೆ NSA ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...