Homeಅಂತರಾಷ್ಟ್ರೀಯಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ: ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ: ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಪ್ರತೀಕಾರದ ಘೋಷಣೆ ಮಾಡಿದ ಇರಾನ್: ವರದಿ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ (ಜೂ.22) ಹೇಳಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರತೀಕಾರದ ಘೋಷಣೆ ಮಾಡಿದ ಇರಾನ್

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಿಸಲಾಗಿದೆ ಎಂದು timesofisrael.com ವರದಿ ಮಾಡಿದೆ.

ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಶುಕ್ರವಾರ ಘೋಷಿಸಿದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಜೂನ್ 30 ರವರೆಗೆ ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ವರದಿ ಹೇಳಿದೆ.

ಈ ವಿಸ್ತರಣೆಗೆ ಲಿಕುಡ್ ಎಂಕೆ ಯುಲಿ ಎಡೆಲ್‌ಸ್ಟೈನ್ ಅಧ್ಯಕ್ಷತೆಯ ನೆಸ್ಸೆಟ್ ವಿದೇಶಾಂಗ ವ್ಯವಹಾರ ಮತ್ತು ಭದ್ರತಾ ಸಮಿತಿಯ ಮತ್ತಷ್ಟು ಅನುಮೋದನೆಯ ಅಗತ್ಯವಿದೆ. ತುರ್ತು ಪರಿಸ್ಥಿತಿಯು ಸಚಿವ ಸಂಪುಟಕ್ಕೆ ನೆಸ್ಸೆಟ್ ಶಾಸನವನ್ನು ಉಲ್ಲಂಘಿಸಿ ನಿಯಮಗಳನ್ನು ಹೊರಡಿಸಲು ಅನುವು ಮಾಡಿಕೊಡುತ್ತದೆ ಎಂದು ವರದಿ ವಿವರಿಸಿದೆ.

9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು – ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...