Homeಮುಖಪುಟಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ವಿಮಾನ ಭಾರತದ್ದ ಹೊರಟಿದೆ ಎಂದು ಹೇಳಲಾಗ್ತಿದೆ

- Advertisement -
- Advertisement -

ಭಾರತದ ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಯುಎಸ್‌ ಮಿಲಿಟರಿ ವಿಮಾನವು ಅಕ್ರಮ ವಲಸಿಗರನ್ನು ಹೊತ್ತು ಹೊರಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಅಕ್ರಮ ವಲಸಿಗರ ವಿರುದ್ದ ಕೈಗೊಂಡ ಮೊದಲ ಕಠಿಣ ಕ್ರಮ ಇದು. ಟ್ರಂಪ್ ಚುನಾವಣಾ ಪೂರ್ವದಲ್ಲೇ ಈ ಬಗ್ಗೆ ವಾಗ್ದಾನ ಮಾಡಿದ್ದರು.

ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ -17 ಭಾರತದತ್ತ ಹೊರಟಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅದು 24 ಗಂಟೆಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯಿಂದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಕುರಿತು ಯಾವುದೇ ಮಾಹಿತಿ ನೀಡಲು ಭಾರತದ ಅಮೆರಿಕ ರಾಯಭಾರ ಕಚೇರಿಯ ವಕ್ತಾರರು ನಿರಾಕರಿಸಿದ್ದಾರೆ. ಆದರೆ, “ಅಮೆರಿಕ ಗಡಿ ನೀತಿಯನ್ನು ಕಠಿಣವಾಗಿ ಜಾರಿಗೊಳಿಸುತ್ತಿದೆ. ವಲಸೆ ಕಾನೂನುಗಳನ್ನು ಬಿಗಿಗೊಳಿಸುತ್ತಿದೆ ಮತ್ತು ಅಕ್ರಮ ವಲಸಿಗರನ್ನು ಹೊರ ಹಾಕುತ್ತಿದೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಎಲ್ ಪಾಸೊ ಮತ್ತು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬಂಧನಕ್ಕೊಳಗಾದ 5,000ಕ್ಕೂ ಹೆಚ್ಚು ವಲಸಿಗರನ್ನು ಪೆಂಟಗನ್ (ಅಮೆರಿಕ) ಮಿಲಿಟರಿ ವಿಮಾನಗಳ ಮೂಲಕ ಗಡಿಪಾರು ಮಾಡಲು ಪ್ರಾರಂಭಿಸಿದೆ. ಇಲ್ಲಿಯವರೆಗೆ, ಮಿಲಿಟರಿ ವಿಮಾನಗಳು ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ಗೆ ವಲಸಿಗರನ್ನು ಸಾಗಿಸಿವೆ ಎಂದು ವರದಿ ಹೇಳಿದೆ.

ರಾಯಿಟರ್ಸ್ ವರದಿಯ ಪ್ರಕಾರ, ಮಿಲಿಟರಿ ವಿಮಾನಗಳ ಮೂಲಕ ವಲಸಿಗರನ್ನು ಗಡಿಪಾರು ಮಾಡಲು ಅಮೆರಿಕಕ್ಕೆ ಹೆಚ್ಚಿನ ವೆಚ್ಚ ತಗಲುತ್ತಿದೆ. ಇತ್ತೀಚೆಗೆ ಗ್ವಾಟೆಮಾಲಾಗೆ ಹಾರಾಟ ನಡೆಸಿದ ವಿಮಾನದಲ್ಲಿ ಪ್ರತಿ ವಲಸಿಗರಿಗೆ ಕನಿಷ್ಠ 4,675 ಡಾಲರ್ ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ತನ್ನ ನಾಗರಿಕರನ್ನು ಗುರುತಿಸಿ, ವಾಪಸ್ ಕಳುಹಿಸುವಲ್ಲಿ ಟ್ರಂಪ್ ಆಡಳಿತದೊಂದಿಗೆ ಸಹಕರಿಸುವ ಇಚ್ಛೆಯನ್ನು ಭಾರತ ಸರ್ಕಾರ ವ್ಯಕ್ತಪಡಿಸಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವ್ಯಾಪಾರ ಸಂಘರ್ಷವನ್ನು ತಪ್ಪಿಸಲು ಭಾರತ ಈ ನಿರ್ಧಾರ ಕೈಗೊಂಡಿದೆ.

“ನಾವು ಅಕ್ರಮ ವಲಸೆಯನ್ನು ವಿರೋಧಿಸುತ್ತೇವೆ. ವಿಶೇಷವಾಗಿ, ಇದು ಹಲವಾರು ರೀತಿಯ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಕಳೆದ ತಿಂಗಳು ಹೇಳಿದ್ದರು.

“ಅಮೆರಿಕದಲ್ಲಿ ಮಾತ್ರವಲ್ಲದೆ, ಜಗತ್ತಿನ ಎಲ್ಲಿಯಾದರೂ ಭಾರತೀಯರು ಅವಧಿ ಮೀರಿ ಉಳಿದಿದ್ದರೆ ಅಥವಾ ಅವರು ಸರಿಯಾದ ದಾಖಲೆಗಳಿಲ್ಲದೆ ನಿರ್ದಿಷ್ಟ ದೇಶದಲ್ಲಿದ್ದರೆ, ನಾವು ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಂಡರೆ ಅವರ ರಾಷ್ಟ್ರೀಯತೆ ಮತ್ತು ಅವರು ನಿಜವಾಗಿಯೂ ಭಾರತೀಯರೇ ಎಂದು ನಾವು ಪರಿಶೀಲಿಸಬಹುದು. ಹಾಗಿದ್ದಲ್ಲಿ, ನಾವು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ದು ಅವರು ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುತ್ತೇವೆ” ಎಂದು ಜೈಸ್ವಾಲ್ ತಿಳಿಸಿದ್ದರು.

ವರದಿಗಳ ಪ್ರಕಾರ, ಅಮೆರಿಕ- ಭಾರತ ಎರಡೂ ದೇಶಗಳು ಸರಿಸುಮಾರು 18,000 ಅಕ್ರಮ ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಗುರುತಿಸಿವೆ. ಆದರೆ, ಅಕ್ರಮ ವಲಸಿಗರ ಒಟ್ಟು ಪ್ರಮಾಣದಲ್ಲಿ ಗೊಂದಲ ಇರುವುದರಿಂದ, ನಿಜವಾದ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿರಬಬಹುದು ಎಂದು ಬ್ಲೂಮ್‌ಬರ್ಗ್ ಕಳೆದ ತಿಂಗಳು ವರದಿ ಮಾಡಿತ್ತು.

ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣಾ ದತ್ತಾಂಶದ ಪ್ರಕಾರ, 2024ರ ಆರ್ಥಿಕ ವರ್ಷದಲ್ಲಿ ಭಾರತದಿಂದ ಅಮೆರಿಕಕ್ಕೆ ಅಕ್ರಮ ವಲಸೆಯ ಪ್ರಮಾಣ ಕಡಿಮೆಯಾಗಿದ್ದು, ಅಮೆರಿಕದ ಎಲ್ಲಾ ಅಕ್ರಮ ಕ್ರಾಸಿಂಗ್‌ಗಳಲ್ಲಿ ಗಡಿ ದಾಟಿದವರ ಒಟ್ಟು ಪ್ರಮಾಣ ಸುಮಾರು ಶೇ. 3ರಷ್ಟಿದೆ. ಇದಕ್ಕೆ ವ್ಯತಿರಿಕ್ತವಾಗಿ, ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಾದ ಮೆಕ್ಸಿಕೊ, ವೆನೆಜುವೆಲಾ ಮತ್ತು ಗ್ವಾಟೆಮಾಲಾಗಳಿಂದ ಅಕ್ರಮ ವಲಸೆ ಹೆಚ್ಚಾಗಿದೆ.

ನಿಖರವಾದ ಒಟ್ಟು ಸಂಖ್ಯೆಯಲ್ಲಿ ಗೊಂದಲವಿದ್ದರೂ, 2022ರ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ವರದಿಯ ಪ್ರಕಾರ, ಸುಮಾರು 2,20,000 ಅನಧಿಕೃತ ಭಾರತೀಯ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.

ಅಕ್ರಮ ವಲಸಿಗರ ಗಡಿಪಾರು ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 12 ರಿಂದ ಎರಡು ದಿನಗಳ ಕಾಲ ಅಮೆರಿಕ ಭೇಟಿಗೆ ತೆರಳಲಿದ್ದು, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

ಬಾಂಗ್ಲಾದೇಶಿ ವಲಸಿಗರ ಗಡೀಪಾರು ಮಾಡುವ ಬದಲು, ಬಂಧನ ಶಿಬಿರಗಳಲ್ಲಿ ಏಕೆ ಇರಿಸಿದ್ದೀರಿ? – ಕೇಂದ್ರಕ್ಕೆ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...