Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...