Homeಮುಖಪುಟಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

- Advertisement -
- Advertisement -

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು ನಿಯೋಜಿಸಿರುವುದನ್ನು ಅಮೆರಿಕ ಸರ್ಕಾರ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದು, ಈ ಬೆಳವಣಿಗೆಯು ಜಾಗತಿಕ ರಕ್ಷಣಾ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

ವಾಷಿಂಗ್ಟನ್ ಸಮೀಪ ನಡೆದ ವಾಯು, ಬಾಹ್ಯಾಕಾಶ ಮತ್ತು ಸೈಬರ್ ಸಮ್ಮೇಳನದಲ್ಲಿ ಮಾತನಾಡಿದ ಅಮೆರಿಕ ವಾಯುಪಡೆಯ ಕಾರ್ಯದರ್ಶಿ ಟ್ರಾಯ್ ಮೀಂಕ್, ಅಮೆರಿಕದ ಬಳಿ ಕಕ್ಷೆಯಲ್ಲೇ ಕಾರ್ಯನಿರ್ವಹಿಸುವ ‘ಬಾಹ್ಯಾಕಾಶ ನಿಯಂತ್ರಣ ಶಸ್ತ್ರಾಸ್ತ್ರಗಳು’ ಲಭ್ಯವಿವೆ ಎಂದು ಪ್ರಕಟಿಸಿದ್ದಾರೆ. ಆದರೆ, ರಕ್ಷಣಾ ಇಲಾಖೆಯಾದ ಪೆಂಟಗನ್ ಈ ಶಸ್ತ್ರಾಸ್ತ್ರಗಳ ಸ್ವರೂಪ, ಅವುಗಳ ನಿಯೋಜನೆಯ ಕಾಲಘಟ್ಟ ಹಾಗೂ ಕಾರ್ಯಾಚರಣೆಯ ಸಾಮರ್ಥ್ಯದ ಕುರಿತು ಯಾವುದೇ ತಾಂತ್ರಿಕ ವಿವರಗಳನ್ನು ನೀಡಲು ನಿರಾಕರಿಸಿದೆ.

ಪ್ಯಾರಿಸ್‌ನಲ್ಲಿ ನಡೆದ ರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ಅಮೆರಿಕ ಸ್ಪೇಸ್ ಕಮಾಂಡ್‌ನ ಅಧಿಕಾರಿ ರಿಚರ್ಡ್ ಪಾಮರ್, “ಎದುರಾಳಿ ದೇಶಗಳನ್ನು ತಡೆಯಲು ಮತ್ತು ಅಮೆರಿಕದ ಮಿತ್ರರಾಷ್ಟ್ರಗಳ ಸುರಕ್ಷತೆಗೆ ಬಾಹ್ಯಾಕಾಶದಲ್ಲಿನ ರಕ್ಷಣಾ ಸಾಮರ್ಥ್ಯವನ್ನು ಬಹಿರಂಗಪಡಿಸುವುದು ಅಗತ್ಯವಾಗಿತ್ತು” ಎಂದು ಬಣ್ಣಿಸಿದ್ದಾರೆ.

ಆಧುನಿಕ ಯುದ್ಧತಂತ್ರದಲ್ಲಿ ಜಿಪಿಎಸ್ (GPS), ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ, ಸೈನಿಕರ ಸುರಕ್ಷಿತ ಸಂವಹನ, ಕಣ್ಗಾವಲು ಹಾಗೂ ಗುಪ್ತಚರ ಮಾಹಿತಿ ಸಂಗ್ರಹಣೆಗೆ ಉಪಗ್ರಹಗಳೇ ಬೆನ್ನೆಲುಬು. ಹೀಗಾಗಿ ಎದುರಾಳಿ ದೇಶದ ಉಪಗ್ರಹಗಳ ಕಾರ್ಯನಿರ್ವಹಣೆಯನ್ನು ನಿಷ್ಕ್ರಿಯಗೊಳಿಸಿದರೆ ಆ ದೇಶದ ಸೇನೆಯನ್ನು ಸಂಪೂರ್ಣವಾಗಿ ಕಟ್ಟಿಹಾಕಬಹುದು.

ಈ ಕಾರಣಕ್ಕಾಗಿ ಪ್ರಮುಖ ಜಾಗತಿಕ ಶಕ್ತಿಗಳು ಉಪಗ್ರಹಗಳ ಸಂಕೇತ ತಡೆಯುವುದು (Jamming), ಲೇಸರ್ ಮೂಲಕ ಸೆನ್ಸಾರ್‌ಗಳನ್ನು ಬಂದ್ ಮಾಡುವುದು ಮತ್ತು ನಿಯಂತ್ರಣ ಕೇಂದ್ರಗಳ ಮೇಲೆ ದಾಳಿ ನಡೆಸುವ ತಂತ್ರಜ್ಞಾನಗಳನ್ನು ವೃದ್ಧಿಸಿಕೊಳ್ಳುತ್ತಿವೆ. ಚೀನಾ ಮತ್ತು ರಷ್ಯಾ ದೇಶಗಳು ಅಮೆರಿಕದ ಬಾಹ್ಯಾಕಾಶ ಸಂಪನ್ಮೂಲಗಳನ್ನು ಗುರಿಯಾಗಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸುತ್ತಿವೆ ಎಂಬ ಆತಂಕದ ನಡುವೆ, 2019ರಲ್ಲಿ ಸ್ಥಾಪನೆಯಾದ ಅಮೆರಿಕದ ‘ಸ್ಪೇಸ್ ಫೋರ್ಸ್’ ಈಗ ಹೆಜ್ಜೆಯಿಟ್ಟು ತನ್ನ ಕಕ್ಷೀಯ ಶಸ್ತ್ರಾಸ್ತ್ರಗಳನ್ನು ರಕ್ಷಣೆಗೆ ಸಜ್ಜುಗೊಳಿಸಿದೆ.

1967ರ ಬಾಹ್ಯಾಕಾಶ ಒಪ್ಪಂದವು (Outer Space Treaty) ಕಕ್ಷೆಯಲ್ಲಿ ಸಾಮೂಹಿಕ ವಿನಾಶದ ಅಣ್ವಸ್ತ್ರಗಳನ್ನು ಇರಿಸುವುದನ್ನು ನಿಷೇಧಿಸುತ್ತದೆಯಾದರೂ, ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳನ್ನು ನಿಯೋಜಿಸುವುದಕ್ಕೆ ಸಂಪೂರ್ಣ ನಿಷೇಧ ಹೇರಿಲ್ಲ. ಈ ಕಾನೂನಿನ ಸೂಕ್ಷ್ಮತೆಯನ್ನು ಬಳಸಿಕೊಂಡು ಅಮೆರಿಕ ಮಾತ್ರವಲ್ಲದೆ ಜರ್ಮನಿಯಂತಹ ದೇಶಗಳೂ ಸಹ 40 ಬಿಲಿಯನ್ ಡಾಲರ್ ವೆಚ್ಚದ ಮಿಲಿಟರಿ ಬಾಹ್ಯಾಕಾಶ ಯೋಜನೆಗಳನ್ನು ಸಿದ್ಧಪಡಿಸುತ್ತಿವೆ.

ಇತ್ತೀಚೆಗೆ ಅಮೆರಿಕ ಕೈಗೊಂಡ ‘ಅಪೊಲೊ ಮ್ಯಾನುವರ್ಸ್’ ಕಕ್ಷೀಯ ಅಭ್ಯಾಸವು ಬಾಹ್ಯಾಕಾಶ ಸನ್ನದ್ಧತೆಗೆ ಸಾಕ್ಷಿಯಾಗಿದೆ. ಒಟ್ಟಿನಲ್ಲಿ, ಅಮೆರಿಕದ ಈ ಒಪ್ಪಿಗೆಯಿಂದಾಗಿ ಬಾಹ್ಯಾಕಾಶವು ಕೇವಲ ಸಂಶೋಧನೆಯ ತಾಣವಾಗುಳಿಯದೆ, ಜಾಗತಿಕ ಸೂಪರ್ ಪವರ್‌ಗಳ ಸಂಭಾವ್ಯ ಯುದ್ಧಭೂಮಿಯಾಗಿ ಬದಲಾಗುತ್ತಿರುವುದು ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...