Homeಅಂತರಾಷ್ಟ್ರೀಯಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

- Advertisement -
- Advertisement -

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿದೆ. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿದೆ.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿದೆ. ತ್ಸಾರ್ ಚು ನದಿ ದಂಡೆ ಪ್ರದೇಶದಲ್ಲಿರುವ ಈ ಗ್ರಾಮ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿಗೆ ಸೇರಿದೆ. ಇದು 1962ರ ಯುದ್ಧಕ್ಕೂ ಮೊದಲಿನಿಂದಲೂ ಭಾರತ-ಚೀನಾ ನಡುವಿನ ವಿವಾದಿತ ಪ್ರದೇಶಗಳಲ್ಲೊಂದಾಗಿದೆ.

ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿದೆ.

ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಮತ್ತು ಭಾರತ ಸರ್ಕಾರದ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ನಡೆಯುತ್ತಿರುವುದನ್ನು ಲೆಕ್ಕಿಸದೆ ಚೀನಾವು ಅಲ್ಲಿ ತನ್ನ ಹಕ್ಕನ್ನು ಪ್ರತಿಪಾದಿಸುತ್ತಿದೆ ಮತ್ತು ಯುದ್ಧತಂತ್ರದ ಕ್ರಮಗಳಿಗೆ ಮುಂದಾಗಿದೆ ಎಂದು ವರದಿ ಹೇಳಿದೆ.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಸ್ಥಾನಗಳನ್ನು ನಿರ್ಮಿಸುವ ಚೀನಾದ ನೀತಿಯು ಟಿಬೆಟ್ ಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು ಬಹು-ಶತಕೋಟಿ ಡಾಲರ್ ಯೋಜನೆಯ ಒಂದು ಭಾಗವಾಗಿದೆ. ಇದು ಗಡಿ ಪಟ್ಟಣಗಳಿಗೆ ಬೃಹತ್ ರಸ್ತೆ ಮತ್ತು ರೈಲು ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಈ ಪ್ರದೇಶದಲ್ಲಿ 600 ಕ್ಕೂ ಹೆಚ್ಚು ಸಂಪೂರ್ಣ ಅಭಿವೃದ್ಧಿ ಹೊಂದಿದ ಹಳ್ಳಿಗಳನ್ನು ನಿರ್ಮಿಸುವ ಯೋಜನೆಯನ್ನು ಒಳಗೊಂಡಿದೆ ಎನ್ನಲಾಗಿದೆ.

ಇನ್ನೊಂದೆಡೆ ಲಡಾಖ್ ಲೈನ್ ಆಫ್ ಕಂಟ್ರೋಲ್‌ನಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಚೀನಾದ ಕಡೆಯಿಂದ ಎಷ್ಟು ಜನರು ಮರಣ ಹೊಂದಿದರು ಎಂಬುದನ್ನು ಚೀನಾ ದೇಶವು ಬಹಿರಂಗಪಡಿಸಿಲ್ಲ.

ಗಾಲ್ವಾನ್ ಘರ್ಷಣೆಯನ್ನು ಉಲ್ಲೇಖಿಸಿರುವ ಯುಎಸ್ ರಕ್ಷಣಾ ವರದಿಯ “ಫೆಬ್ರವರಿ 2021 ರಲ್ಲಿ, ಸೆಂಟ್ರಲ್ ಮಿಲಿಟರಿ ಕಮಿಷನ್ (CMC) ನಾಲ್ಕು ಚೀನಿ ಸೈನಿಕರಿಗೆ ಮರಣೋತ್ತರ ಪ್ರಶಸ್ತಿಗಳನ್ನು ಘೋಷಿಸಿದೆ, ಆದರೂ ಚೀನಾವು ಸಾವುನೋವುಗಳ ಒಟ್ಟು ಸಂಖ್ಯೆಯನ್ನು ತಿಳಿಸಿಲ್ಲ ಎಂದಿದೆ.

“ಈ ಘರ್ಷಣೆಗೆ ಭಾರತೀಯ ಸೈನಿಕರ ಪ್ರಚೋದನೆಯೇ ಕಾರಣ ಎಂದು ಪ್ರತಿಪಾದಿಸಿರುವ ಚೀನಾವೂ ಲೈನ್ ಆಫ್ ಕಂಟ್ರೋಲ್‌ನಿಂದ ಭಾರತೀಯ ಸೇನೆ ಹಿಂದಿರುಗುವವರೆಗೂ ಮತ್ತು ಆ ಪ್ರದೇಶದಲ್ಲಿ ತನ್ನ ಮೂಲಭೂತ ಸೌಕರ್ಯಗಳ ಯೋಜನೆ ನಿಲ್ಲಿಸುವವರೆಗೂ ಯಾವುದೇ ಪಡೆಗಳನ್ನು ಹಿಂತೆಗೆದುಕೊಳ್ಳಲು ಬೀಜಿಂಗ್ ನಿರಾಕರಿಸಿದೆ” ಎಂದು ವರದಿ ಹೇಳಿದೆ.

ಯುಎಸ್ ಡಿಪಾರ್ಟ್ಮೆಂಟ್ ಆಫ್ ಡಿಫೆನ್ಸ್ ವರದಿಯು “ಚೀನಾದ ಮಿಲಿಟರಿ ಸಾಮರ್ಥ್ಯ ಮತ್ತು ಅದರ ಜಾಗತಿಕ ಮಹತ್ವಾಕಾಂಕ್ಷೆಗಳಿಂದ ಸವಾಲನ್ನು ಎದುರಿಸುವ ಪ್ರಾಮುಖ್ಯತೆಯ ಸಭೆ ಅಗತ್ಯವಾಗಿದೆ” ಎಂದು ವಿವರಿಸಿದೆ.


ಇದನ್ನೂ ಓದಿ; ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...