Homeಅಂತರಾಷ್ಟ್ರೀಯಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದ ಅಮೆರಿಕಾ

- Advertisement -
- Advertisement -

ಕೋವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿಗಾಗಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಲ್ಲಿಸಿದ ಪ್ರಸ್ತಾಪವನ್ನು ಅಮೆರಿಕಾದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್​ಡಿಎ) ತಿರಸ್ಕರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕಾದಲ್ಲಿ ಭಾರತ್ ಬಯೋಟೆಕ್ ಪಾಲುದಾರ ಒಕುಜೆನ್ (Ocugen) ಕಂಪನಿಯು ಕೋವಾಕ್ಸಿನ್‌ ಬಳಕೆಗೆ ಸಂಪೂರ್ಣ ಅನುಮೋದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿತ್ತು.

ತುರ್ತು ಬಳಕೆ ಪ್ರಸ್ತಾವನೆಗೆ ಅನುಮತಿ ದೊರೆಯದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಒಕುಜೆನ್‌ನ ಸಹ ಸಂಸ್ಥಾಪಕ ಶಂಕರ್ ಮುಸುನೂರಿ, “ಇದು ನಮ್ಮ ಸಮಯವನ್ನು ವಿಸ್ತರಿಸುತ್ತದೆ, ಆದರೆ ಕೋವಾಕ್ಸಿನ್ ಅನ್ನು ಅಮೆರಿಕಾಕ್ಕೆ ತರಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.

ಪ್ರಸ್ತುತ, ಅನೇಕ ದೇಶಗಳಲ್ಲಿ ಕೋವಾಕ್ಸಿನ್ ಬಳಕೆಗೆ ಅನುಮತಿ ನೀಡಲಾಗಿಲ್ಲ. ಇರಾನ್, ಫಿಲಿಪೈನ್ಸ್, ಮಾರಿಷಸ್, ಮೆಕ್ಸಿಕೊ, ನೇಪಾಳ, ಗಯಾನಾ, ಪರಾಗ್ವೆ ಮತ್ತು ಜಿಂಬಾಬ್ವೆ ಕೋವಾಕ್ಸಿನ್ ಲಸಿಕೆ ಅನ್ನು ಅನುಮೋದಿಸಿದ ಕೆಲವು ದೇಶಗಳಾಗಿವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಭಾರತದಲ್ಲಿ ಲಸಿಕೆಯ ತುರ್ತು ಬಳಕೆಯ ಅನುಮತಿಯನ್ನು ನೀಡಿದ ಆರು ತಿಂಗಳ ನಂತರವೂ ಭಾರತ್ ಬಯೋಟೆಕ್ ತನ್ನ ಮೂರನೇ ಹಂತದ ಪ್ರಯೋಗ ದತ್ತಾಂಶವನ್ನು ಹಂಚಿಕೊಳ್ಳದಿರುವ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ. ಈ ಸಮಯದಲ್ಲಿ ಅಮೆರಿಕಾ ಕೂಡ ಲಸಿಕೆಯ ಪ್ರಸ್ತಾಪ ತಿರಸ್ಕರಿಸಿದೆ. ಮಾರ್ಚ್ ವೇಳೆಗೆ ಪರಿಣಾಮಕಾರಿತ್ವದ ಫಲಿತಾಂಶಗಳನ್ನು ಸಲ್ಲಿಸುವುದಾಗಿ ಕಂಪನಿ ಜನವರಿಯಲ್ಲಿ ಹೇಳಿತ್ತು. ಆದರೆ, ಕೋವಾಕ್ಸಿನ್‌ನ 3 ನೇ ಹಂತದ ಪ್ರಯೋಗ ದತ್ತಾಂಶವನ್ನು ಜುಲೈನಲ್ಲಿ ಮಾತ್ರ ಸಾರ್ವಜನಿಕಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

“ಹಂತ 3 ಅಧ್ಯಯನಗಳ ಅಂತಿಮ ವಿಶ್ಲೇಷಣೆಯ ಮಾಹಿತಿಯು ಲಭ್ಯವಾದ ನಂತರ, ಭಾರತ್ ಬಯೋಟೆಕ್ ಕೋವಾಕ್ಸಿನ್‌ಗೆ ಸಂಪೂರ್ಣ ಪರವಾನಗಿಗಾಗಿ ಅರ್ಜಿ ಸಲ್ಲಿಸುತ್ತದೆ” ಎಂದು ಕಂಪನಿ ತಿಳಿಸಿದೆ.

ಕೋವಾಕ್ಸಿನ್ ಮತ್ತು ಕೋವಿಶೀಲ್ಡ್‌ಗಳ ಬಗ್ಗೆ ನಡೆದ ಅಧ್ಯಯನದಲ್ಲಿ, ಜೂನ್ 6 ರಂದು ವರದಿಯಾದ ಅಧ್ಯಯನವು ಕೋವಿಶೀಲ್ಡ್‌ನ ಒಂದು ಡೋಸ್ ಕೋವಾಕ್ಸಿನ್ ಗಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ತಿಳಿಸಿದೆ. ಲಸಿಕೆಗಳ ಎರಡನೇ ಡೋಸ್ ಪಡೆದ ನಂತರ, ಕೋವಿಶೀಲ್ಡ್‌ನ ಎರಡು ಡೋಸ್‌ಗಳು ಕೋವಾಕ್ಸಿನ್‌ಗಿಂತ ಆರು ಪಟ್ಟು ಹೆಚ್ಚು ಪರಿಣಾಮಕಾರಿಯಾಗಿವೆ ಎಂದು ಅಧ್ಯಯನ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಕೊರೊನಾ ಲಸಿಕೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಯತ್ನಿಸುತ್ತಿರುವ ಭಾರತ್ ಬಯೋಟೆಕ್, ಏಪ್ರಿಲ್ 18 ರಂದು ಭಾರತ್ ಬಯೋಟೆಕ್ ಸಂಸ್ಥೆ Expression of Interest ವ್ಯಾಕ್ಸಿನ್ ತುರ್ತು ಬಳಕೆಯ ಅನುಮತಿ ಕೋರಿ ವಿಶ್ವ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು. ಆದರೆ, ಮೇ 18ರಂದು ವಿಶ್ವ ಆರೋಗ್ಯ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆಯ ಕುರಿತು ಹೆಚ್ಚುವರಿ ಮಾಹಿತಿ ನೀಡುವಂತೆ ಕೇಳಿತ್ತು. ಸದ್ಯ ಅಮೆರಿಕಾ ಕೂಡ ಕೋವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನಿರಾಕರಿಸಿದೆ.


ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...