Homeಅಂತರಾಷ್ಟ್ರೀಯUS Elections 2024: ಟ್ರಂಪ್ ಜಯಭೇರಿ; ಸೋತ ಕಮಲ

US Elections 2024: ಟ್ರಂಪ್ ಜಯಭೇರಿ; ಸೋತ ಕಮಲ

- Advertisement -
- Advertisement -

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ಡೊನಾಲ್ಡ್‌ ಟ್ರಂಪ್, 2024ರ ಚುನಾವಣೆಯಲ್ಲಿ ವಿಜಯಿಯಾಗಿದ್ದು, ಶ್ವೇತಭವನಕ್ಕೆ ಮತ್ತೆ ಪುನರಾಗಮಿಸಲಿದ್ದಾರೆ. ತನ್ನ ಮೊದಲ ವಿಜಯ ಭಾಷಣದಲ್ಲಿ ಮಾತನಾಡಿದ ಟ್ರಂಪ್ “ನಾವು ತೀವ್ರ ಸುರಕ್ಷಿತ ಮತ್ತು ಸಮೃದ್ಧ ಅಮೇರಿಕಾ  ನಿರ್ಮಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ. US Elections 2024

ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಪರವಾಗಿ ಗಣನೀಯವಾಗಿ ಪ್ರಚಾರ ಮಾಡಿದ ಎಕ್ಸ್‌(ಟ್ವಿಟರ್) ಮಾಲಿಕ ಎಲೋನ್ ಮಸ್ಕ್‌ ಅವರನ್ನು ಟ್ರಂಪ್ ಭಾಷಣದಲ್ಲಿ ನೆನಪಿಸಿಕೊಂಡಿದ್ದಾರೆ. ಎಲೋನ್‌ ಮಸ್ಕ್ ಅವರು ರಿಪಬ್ಲಿಕ್ ಪಕ್ಷದ ಮುಖವಾಣಿಯಂತೆ X ಮತ್ತು ಅವರ ಖಾತೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಬೆಂಬಲಿಗರು “ಎಲೋನ್! ಎಲೋನ್!” ಎಂದು ಕೂಗಲು ಪ್ರಾರಂಭಿಸಿದಾಗ, “ಸ್ಟಾರ್ ಒಬ್ಬರು ಹುಟ್ಟಿದ್ದಾರೆ; ಎಲೋನ್ ಮಸ್ಕ್” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ ಯುಎಫ್‌ಸಿಯ ಸಿಇಒ ಡಾನಾ ವೈಟ್ ಮತ್ತು ಪಾಡ್‌ಕಾಸ್ಟರ್ ಜೋ ರೋಗನ್ ಅವರ ಬೆಂಬಲಕ್ಕಾಗಿ ಕೂಡಾ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಮೆರಿಕದ ಎಲ್ಲಾ ರಾಜ್ಯಗಳಲ್ಲಿ ಬಿರುಸಿನ ಜಟಾಪಟಿ ನಡೆದಿದ್ದರೂ, ಸ್ವಿಂಗ್ ರಾಜ್ಯಗಳ ಬಹುತೇಕ ಮತದಾರರ ಮನಸ್ಸು ಗೆಲ್ಲಲು ಕಮಲಾ ಹ್ಯಾರಿಸ್‌ಗೆ ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಸ್ವಿಂಗ್ ರಾಜ್ಯಗಳ ಮತದಾರರು ಟ್ರಂಪ್ ಅವರ ಪರವಾಗಿ ಮತ ಹಾಕಿದ್ದಾರೆ. ಕಮಲಾ ಮತ್ತು ಟ್ರಂಪ್ ನಡುವಿನ ಸ್ಪರ್ಧೆಯು ವಿಶ್ವದಾದ್ಯಂತ ತೀವ್ರ ಕುತೂಹಲ ಹುಟ್ಟುಹಾಕಿತ್ತು. US Elections 2024

ತನ್ನ ಕೊನೆಯ ಭಾಷಣಗಳಲ್ಲಿ ಕಮಲಾ ಅವರು ಭರವಸೆ, ಏಕತೆ ಮತ್ತು ಮಹಿಳಾ ಹಕ್ಕುಗಳ ವಿಷಯಗಳನ್ನು ಒತ್ತಿಹೇಳಿದ್ದರು. ಅದಾಗ್ಯೂ ಮತದಾರರು ಅವರನ್ನು ಕೈ ಹಿಡಿಯಲಿಲ್ಲ. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಟ್ರಂಪ್ ಪ್ರಸ್ತುತ ಹ್ಯಾರಿಸ್ ವಿರುದ್ಧ 267-224 ಮುನ್ನಡೆ ಸಾಧಿಸಿದ್ದಾರೆ.

78 ವರ್ಷಗಳ ಟ್ರಂಪ್ ಜುಲೈನಲ್ಲಿ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (RNC)ನಲ್ಲಿ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸಿದ ನಂತರ ಕೂಡಾ ಅಧ್ಯಕ್ಷೀಯ ಚುನಾವಣೆಗೆ ಆಯ್ಕೆಯಾದ ಮೊದಲ ಮಾಜಿ ಅಧ್ಯಕ್ಷರಾಗಿ ಅವರು ಹೊರಹೊಮ್ಮಿದ್ದಾರೆ.

ಕಮಲಾ ಹ್ಯಾರಿಸ್ ಅವರ ಔಪಚಾರಿಕ ಆಯ್ಕೆ ಆಗಸ್ಟ್ 2024 ರಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ನಡೆಯಿತು. ಒಂದು ವೇಳೆ ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರು ಗೆಲುವು ಕಂಡಿದ್ದರೆ, ಅವರು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದ ಅಧ್ಯಕ್ಷೆಯಾಗಿ ಅಧಿಕಾರ ಪಡೆದ ಮೊದಲ ಕಪ್ಪು ಮತ್ತು ಏಷ್ಯನ್ ಮೂಲದ ಮೊದಲ ಮಹಿಳೆಯಾಗುತ್ತಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...