Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಮುಂದಿನ ಎರಡು ವಾರಗಳಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ. ಇರಾನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳಿಗೆ ಅಮೆರಿಕ ಸೇರಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು, ಟ್ರಂಪ್ ಅವರ ಸಂದೇಶವನ್ನು ಉಲ್ಲೇಖಿಸುತ್ತಾ,“ಮುಂದಿನ ದಿನಗಳಲ್ಲಿ ಇರಾನ್‌ನೊಂದಿಗೆ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ ಎಂಬುದರ ಗಣನೀಯ ಅವಕಾಶವಿದೆ ಎಂಬ ಅಂಶದ ಆಧಾರದ ಮೇಲೆ, ಮುಂದಿನ ಎರಡು ವಾರಗಳಲ್ಲಿ ಈ ಸಂಘರ್ಷದಲ್ಲಿ ತೊಡಗಿಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ನಾನು ನಿರ್ಧರಿಸುತ್ತೇನೆ.” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಅಧ್ಯಕ್ಷ ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಲೀವಿಟ್ ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವ ಹಂತಕ್ಕೆ “ಎಂದಿಗೂ ಬಂದಿಲ್ಲ” ಎಂದು ಅಮೆರಿಕದ ಆಡಳಿತ ಹೇಳಿದೆ ಎಂದು ಬಿಬಿಸಿ ವರದಿ ಮಾಡಿದೆ.

ಬುಧವಾರವಷ್ಟೆ ಇಸ್ರೇಲ್ – ಇರಾನ್‌ ಸಂಘರ್ಷದಲ್ಲಿ ಪಾಲ್ಗೊಳ್ಳುವಿಕೆಯ ಯೋಜನೆಗಳನ್ನು ದೃಢೀಕರಿಸಲು ಟ್ರಂಪ್ ನಿರಾಕರಿಸಿದ್ದರು. “ನಾನು ಅದನ್ನು ಮಾಡಬಹುದು, ಅದನ್ನು ಮಾಡದೆಯು ಇರಬಹುದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

“ನಾನು ಏನು ಮಾಡಲಿದ್ದೇನೆಂದು ಯಾರಿಗೂ ತಿಳಿದಿಲ್ಲ. ನಾನು ನಿಮಗೆ ಒಂದು ಮಾತ್ರ ಹೇಳಬಲ್ಲೆ, ಇರಾನ್ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿದ್ದು, ಅವರು ಮಾತುಕತೆ ನಡೆಸಲು ಬಯಸುತ್ತಾರೆ.” ಎಂದು ಟ್ರಂಪ್ ಹೇಳಿದ್ದರು. ಅಮೆರಿಕವು ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ಇಸ್ರೇಲ್‌ನ ಭದ್ರತೆಗಾಗಿ ಅಮೆರಿಕ ಕಾರ್ಯನಿರ್ವಹಿಸುತ್ತದೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಹೇಳಿಕೆ ನೀಡಿದ ಗಂಟೆಗಳ ನಂತರ, ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇರಾನ್‌ನ ಉಪ ವಿದೇಶಾಂಗ ಸಚಿವ ಸಯೀದ್ ಖತೀಬ್ಜಾದೆಹ್, ಅಮೆರಿಕ ಈ ಯುದ್ಧದಲ್ಲಿ ಭಾಗಿಯಾಗಿದರೆ ಪಶ್ಚಿಮ ಏಷ್ಯಾದಲ್ಲಿ “ನರಕ” ಉಂಟಾಗುತ್ತದೆ ಎಂದು ಬಿಬಿಸಿಗೆ ತಿಳಿಸಿದ್ದಾರೆ. “ಇದು ಅಮೆರಿಕದ ಯುದ್ಧವಲ್ಲ” ಎಂದು ಖತೀಬ್ಜಾದೆಹ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ವಾಯು ದಾಳಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿವೆ.

ಗುರುವಾರ, ಇಸ್ರೇಲ್ ಸೇನೆಯು ಇರಾನ್‌ನಲ್ಲಿರುವ ಅರಾಕ್ ಪರಮಾಣು ರಿಯಾಕ್ಟರ್ ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದು, ನಟಂಜ್ ಪ್ರದೇಶದಲ್ಲಿ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿ ತಾಣ ಎಂದು ಹೇಳಿಕೊಂಡಿದ್ದನ್ನು ಹೊಡೆದುರುಳಿಸಿದ್ದಾಗಿ ಎಂದು ಘೋಷಿಸಿದೆ. ಅದಾಗ್ಯೂ, ಅರಾಕ್ ಕೇಂದ್ರವು ಭಾಗಶಃ ನಿರ್ಮಿಸಲಾದ ಭಾರ-ನೀರಿನ ಸಂಶೋಧನಾ ರಿಯಾಕ್ಟರ್ ಆಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಅಲ್ಲಿನ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಈ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಕ್ಕೆ ಕಾರಣವಾಗಿವೆ.

ಜೂನ್ 15 ರಂದು, ಸಂಘರ್ಷದಲ್ಲಿ 224 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿತ್ತು. ಆದಾಗ್ಯೂ, ಅಮೆರಿಕ ಮೂಲದ ಮಾನವ ಹಕ್ಕುಗಳ ಹೋರಾಟಗಾರರು ಇಸ್ರೇಲಿ ದಾಳಿಗಳು ಇರಾನ್‌ನಲ್ಲಿ ಕನಿಷ್ಠ 657 ಜನರನ್ನು ಕೊಂದಿವೆ ಮತ್ತು ಇಲ್ಲಿಯವರೆಗೆ 2,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಇರಾನ್‌ನ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಇಲ್ಲಿಯವರೆಗೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್-ಇರಾನ್ ಯುದ್ಧಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...