Homeಮುಖಪುಟಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

- Advertisement -
- Advertisement -

ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ ವಿಚಾರವನ್ನು ಉಲ್ಲೇಖಿಸಿದೆ.

ಮೇ 2023ರಲ್ಲಿ ಜನಾಂಗೀಯ ಸಂಘರ್ಷದ ಪ್ರಾರಂಭದ ನಂತರ ಮಣಿಪುರದಲ್ಲಿ ನಡೆದ ಹಿಂಸಾಚಾರ, UK-ಮೂಲದ BBC ಮೇಲೆ ಭಾರತದಲ್ಲಿ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತ ಭಾರತದ ಕೈವಾಡದ ಆರೋಪದ ಬಗ್ಗೆ ಅಮೆರಿಕದ 2023ರ ಮಾನವ ಹಕ್ಕುಗಳ ವರದಿಯಲ್ಲಿ ಉಲ್ಲೇಖಿತವಾಗಿದೆ. ಈ ಬಗ್ಗೆ ಭಾರತವು ಇನ್ನೂ ಪ್ರತಿಕ್ರಿಯಿಸದಿದ್ದರೂ, ವಿದೇಶಾಂಗ ಸಚಿವಾಲಯವು ಈ ಹಿಂದೆ ಯುಎಸ್‌ನ ಇಂತಹ ವರದಿಗಳು ತಪ್ಪು ಮಾಹಿತಿಯನ್ನು ಹೊಂದಿರುವಂತದ್ದು ಮತ್ತು ದೋಷಪೂರಿತವಾಗಿರುವಂತದ್ದು ಎಂದು ಹೇಳಿದೆ. ಕೆಲವು US ಅಧಿಕಾರಿಗಳ ಹಸ್ತಕ್ಷೇಪದಿಂದ ಇಂತಹ ವರದಿಯನ್ನು ಸಿದ್ದಪಡಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ಹೇಳಿತ್ತು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಕನಿಷ್ಠ 175 ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 2023ರ ಮೇ ತಿಂಗಳಿನಿಂದ ಮಣಿಪುರವು ಇಂಫಾಲ್ ಕಣಿವೆಯಲ್ಲಿ ವಾಸಿಸುವ ಬಹುಸಂಖ್ಯಾತ ಮೈತೈ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿದೆ.

ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು, ಸಶಸ್ತ್ರ ಸಂಘರ್ಷ, ಅತ್ಯಾಚಾರ ಮತ್ತು ದಾಳಿಗಳ ಬಗ್ಗೆ ವರದಿ ಮಾಡಿದ್ದಾರೆ, ಜೊತೆಗೆ ಮನೆಗಳು, ವ್ಯಾಪಾರಗಳು ಮತ್ತು ಪೂಜಾ ಸ್ಥಳಗಳ ನಾಶದ ಜೊತೆಗೆ ಸರ್ಕಾರವು ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಣಿಪುರದಲ್ಲಿ ದೈನಂದಿನ ಕರ್ಫ್ಯೂಗಳನ್ನು ಜಾರಿಗೊಳಿಸಲಾಗಿತ್ತು ಮತ್ತು  ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖವಿದೆ. ಇದಲ್ಲದೆ ಹಿಂಸೆಯನ್ನು ತಡೆಯುವಲ್ಲಿ ಸರಕಾರ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್‌ ಗಮನಿಸಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...