ಭಾರತ ಮೂಲದ ಕಾಶ್ ಪಟೇಲ್ ಅವರು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್‌ಬಿಐ) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಕಾಶ್ ಪಟೇಲ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು ಎನ್ನಲಾಗಿದೆ. ಅಮೆರಿಕ
ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿತು. ಎಫ್ಬಿಐನ 9ನೇ ನಿರ್ದೇಶಕರಾಗಿ ಕಾಶ್ ಪಟೇಲ್ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಟ್ರಂಪ್ ಅವರು ಸಹಿ ಹಾಕಿದ್ದಾರೆ ಎಂದು ಯುಎಸ್ ಸೆನೆಟ್ ಖಚಿತಪಡಿಸಿದೆ.
ಕಾಶ್ ಪಟೇಲ್ ಇನ್ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಎಫ್ಬಿಐನ 9ನೇ ನಿರ್ದೇಶಕರನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ತುಂಬಾ ಸಂತೋಷವಾಗಿದೆ. ನನ್ನ ಮೇಲಿಟ್ಟಿರುವ ನಿಮ್ಮ ನಂಬಿಕೆಗೆ ಧನ್ಯವಾದಗಳು. ಅಮೆರಿಕದ ಜನರಿಗೆ ಪಾರದರ್ಶಕ, ಜವಾಬ್ದಾರಿಯುತ ಮತ್ತು ನ್ಯಾಯಕ್ಕೆ ಬದ್ಧವಾಗಿರುವ ಎಫ್‌ಬಿಐ ಅಗತ್ಯವಿದೆ’’ ಎಂದು ಹೇಳಿದ್ದಾರೆ. ಅಮೆರಿಕ
ಕಾಶ್ ಪಟೇಲ್ ಯಾರು?
ಭಾರತ ಮೂಲದ ಅಮೇರಿಕನ್ ಪ್ರಜೆಯಾಗಿರುವ ಕಾಶ್ ಪಟೇಲ್ ಅವರು ನ್ಯೂಯಾರ್ಕ್‌ನ ಹ್ಯಾಗರ್ಡನ್ ನಗರದ ನಿವಾಸಿ. ಕಾಶ್ ಪಟೇಲ್ ಅವರ ಪೋಷಕರು ಗುಜರಾತ್‌ನವರಾಗಿದ್ದು, ಅವರ ಕುಟುಂಬ 1970 ರ ದಶಕದ ಆರಂಭದಲ್ಲಿ ವಿದೇಶಕ್ಕೆ ಸ್ಥಳಾಂತರಗೊಂಡಿತ್ತು. ಮೊದಲು ಉಗಾಂಡಾದಲ್ಲಿ ವಾಸಿಸುತ್ತಿದ್ದ ಅವರು, ನಂತರ, ಜನಾಂಗೀಯ ತಾರತಮ್ಯದಿಂದಾಗಿ, ಉಗಾಂಡಾವನ್ನು ತೊರೆದು ಕೆನಡಾದಲ್ಲಿ ನೆಲೆಸಿದ್ದರು.
ಅವರ ತಂದೆಗೆ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಸಿಕ್ಕ ನಂತರ ಅವರ ಕುಟುಂಬ ಅಮೆರಿಕಕ್ಕೆ ಸ್ಥಳಾಂತರಗೊಂಡಿತ್ತು. ಕಾಶ್ ಪಟೇಲ್ ಅವರು ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಎಂದು ಹೇಳಲಾಗುತ್ತಿದ್ದು, ಅವರು ರಿಚ್ಮಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ಅಧ್ಯಯನ ಮಾಡಿದ್ದಾರೆ.
ಕಾಶ್ ಪಟೇಲ್ ಅವರಿಗೆ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿತ್ತು. ನಂತರ ಅವರು ಐಸಿಸ್, ಅಲ್-ಬಾಗ್ದಾದಿ ಮತ್ತು ಖಾಸಿಮ್ ಅಲ್-ರಿಮಿಯಂತಹ ಅಲ್-ಖೈದಾ ನಾಯಕರನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಮೆರಿಕದ ಒತ್ತೆಯಾಳುಗಳನ್ನು ದೇಶಕ್ಕೆ ಮರಳಿ ಕರೆತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಇದಲ್ಲದೆ, ಕಾಶ್ ಪಟೇಲ್ ಗುಪ್ತಚರ ಕುರಿತ ಸದನದ ಶಾಶ್ವತ ಆಯ್ಕೆ ಸಮಿತಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಹಿರಿಯ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಅಮೆರಿಕದ ರಾಜ್ಯ ಮತ್ತು ಫೆಡರಲ್ ನ್ಯಾಯಾಲಯಗಳಲ್ಲಿ ಕೊಲೆ, ಕಳ್ಳಸಾಗಣೆ ಮುಂತಾದ ಪ್ರಕರಣಗಳನ್ನು ನಿಭಾಯಿಸಿದ್ದಾರೆ. ಟ್ರಂಪ್ ಅವರ ದೊಡ್ಡ ಅಭಿಮಾನಿಯಾಗಿರುವ ಅವರು, ಟ್ರಂಪ್‌ಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ಎಂದೇ ಪರಿಗಣಿಸಲ್ಪಟ್ಟವರು ಎಂದು ವರದಿ ಸೂಚಿಸಿವೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ
ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

