Homeಅಂತರಾಷ್ಟ್ರೀಯಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

- Advertisement -
- Advertisement -

ಭಾರತ ಮೂಲದ ಕಾಶ್ ಪಟೇಲ್ ಅವರು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು ಎನ್ನಲಾಗಿದೆ. ಅಮೆರಿಕ

ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿತು. ಎಫ್​ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಟ್ರಂಪ್‌ ಅವರು ಸಹಿ ಹಾಕಿದ್ದಾರೆ ಎಂದು ಯುಎಸ್‌ ಸೆನೆಟ್‌ ಖಚಿತಪಡಿಸಿದೆ.

ಕಾಶ್ ಪಟೇಲ್ ಇನ್ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಎಫ್​ಬಿಐನ 9ನೇ ನಿರ್ದೇಶಕರನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ತುಂಬಾ ಸಂತೋಷವಾಗಿದೆ. ನನ್ನ ಮೇಲಿಟ್ಟಿರುವ ನಿಮ್ಮ ನಂಬಿಕೆಗೆ ಧನ್ಯವಾದಗಳು. ಅಮೆರಿಕದ ಜನರಿಗೆ ಪಾರದರ್ಶಕ, ಜವಾಬ್ದಾರಿಯುತ ಮತ್ತು ನ್ಯಾಯಕ್ಕೆ ಬದ್ಧವಾಗಿರುವ ಎಫ್‌ಬಿಐ ಅಗತ್ಯವಿದೆ’’ ಎಂದು ಹೇಳಿದ್ದಾರೆ. ಅಮೆರಿಕ

ಕಾಶ್ ಪಟೇಲ್ ಯಾರು?

ಭಾರತ ಮೂಲದ ಅಮೇರಿಕನ್ ಪ್ರಜೆಯಾಗಿರುವ ಕಾಶ್ ಪಟೇಲ್ ಅವರು ನ್ಯೂಯಾರ್ಕ್‌ನ ಹ್ಯಾಗರ್ಡನ್ ನಗರದ ನಿವಾಸಿ. ಕಾಶ್ ಪಟೇಲ್ ಅವರ ಪೋಷಕರು ಗುಜರಾತ್‌ನವರಾಗಿದ್ದು, ಅವರ ಕುಟುಂಬ 1970 ರ ದಶಕದ ಆರಂಭದಲ್ಲಿ ವಿದೇಶಕ್ಕೆ ಸ್ಥಳಾಂತರಗೊಂಡಿತ್ತು. ಮೊದಲು ಉಗಾಂಡಾದಲ್ಲಿ ವಾಸಿಸುತ್ತಿದ್ದ ಅವರು, ನಂತರ, ಜನಾಂಗೀಯ ತಾರತಮ್ಯದಿಂದಾಗಿ, ಉಗಾಂಡಾವನ್ನು ತೊರೆದು ಕೆನಡಾದಲ್ಲಿ ನೆಲೆಸಿದ್ದರು.

ಅವರ ತಂದೆಗೆ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಸಿಕ್ಕ ನಂತರ ಅವರ ಕುಟುಂಬ ಅಮೆರಿಕಕ್ಕೆ ಸ್ಥಳಾಂತರಗೊಂಡಿತ್ತು. ಕಾಶ್ ಪಟೇಲ್‌ ಅವರು ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಎಂದು ಹೇಳಲಾಗುತ್ತಿದ್ದು, ಅವರು ರಿಚ್ಮಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ಅಧ್ಯಯನ ಮಾಡಿದ್ದಾರೆ.

ಕಾಶ್ ಪಟೇಲ್ ಅವರಿಗೆ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿತ್ತು. ನಂತರ ಅವರು ಐಸಿಸ್, ಅಲ್-ಬಾಗ್ದಾದಿ ಮತ್ತು ಖಾಸಿಮ್ ಅಲ್-ರಿಮಿಯಂತಹ ಅಲ್-ಖೈದಾ ನಾಯಕರನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಮೆರಿಕದ ಒತ್ತೆಯಾಳುಗಳನ್ನು ದೇಶಕ್ಕೆ ಮರಳಿ ಕರೆತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಇದಲ್ಲದೆ, ಕಾಶ್ ಪಟೇಲ್ ಗುಪ್ತಚರ ಕುರಿತ ಸದನದ ಶಾಶ್ವತ ಆಯ್ಕೆ ಸಮಿತಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಹಿರಿಯ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಅಮೆರಿಕದ ರಾಜ್ಯ ಮತ್ತು ಫೆಡರಲ್ ನ್ಯಾಯಾಲಯಗಳಲ್ಲಿ ಕೊಲೆ, ಕಳ್ಳಸಾಗಣೆ ಮುಂತಾದ ಪ್ರಕರಣಗಳನ್ನು ನಿಭಾಯಿಸಿದ್ದಾರೆ. ಟ್ರಂಪ್ ಅವರ ದೊಡ್ಡ ಅಭಿಮಾನಿಯಾಗಿರುವ ಅವರು, ಟ್ರಂಪ್‌ಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ಎಂದೇ ಪರಿಗಣಿಸಲ್ಪಟ್ಟವರು ಎಂದು ವರದಿ ಸೂಚಿಸಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...