Homeಅಂತರಾಷ್ಟ್ರೀಯಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

- Advertisement -
- Advertisement -

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ.

ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘೋಷಿಸಿದ್ದಾರೆ.

ಮಾತುಕತೆಗೆ ಮುನ್ನ ಉಭಯ ರಾಷ್ಟ್ರಗಳು ಎರಡು ವಾರಗಳ ಕಾಲ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇದು ಲೆಬನಾನ್ ಸೇರಿದಂತೆ ಸಂಘರ್ಷದ ಇತರ ಪ್ರದೇಶಗಳಿಗೂ ಅನ್ವಯಿಸುತ್ತದೆ ಎಂದು ವರದಿಯಾಗಿದೆ. ಆದರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕದನ ವಿರಾಮ ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವುದು ಮತ್ತು ದೀರ್ಘಕಾಲದ ವಿವಾದಗಳನ್ನು ಇತ್ಯರ್ಥಪಡಿಸಿ ಶಾಶ್ವತ ಒಪ್ಪಂದಕ್ಕೆ ಬರುವುದು ಶಾಂತಿ ಮಾತುಕತೆಯ ಮುಖ್ಯ ಗುರಿಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಿದ ನಂತರ ಕದನ ವಿರಾಮಕ್ಕೆ ಅಸ್ತು ಎಂದಿದ್ದಾರೆ. ಮೊದಲು ಮಾತುಕತೆಗೆ ನಿರಾಕರಿಸಿದ್ದ ಇರಾನ್, ನಂತರ ತನ್ನದೇ ಆದ ಕೆಲವು ಷರತ್ತುಗಳೊಂದಿಗೆ (10 ಅಂಶಗಳ ಪ್ಲಾನ್) ಭಾಗವಹಿಸಲು ಒಪ್ಪಿಕೊಂಡಿದೆ.

ಪಾಕಿಸ್ತಾನವು ಎರಡೂ ದೇಶಗಳ ನಿಯೋಗಗಳಿಗೆ ಅಧಿಕೃತ ಆಹ್ವಾನ ನೀಡಿದ್ದು, ಜಾಗತಿಕ ಮಟ್ಟದಲ್ಲಿ ಈ “ಇಸ್ಲಾಮಾಬಾದ್ ಟಾಕ್ಸ್” ಹೆಚ್ಚಿನ ಕುತೂಹಲ ಮೂಡಿಸಿದೆ.

ಇರಾನ್ ಶಾಂತಿ ಮಾತುಕತೆಗೆ ಮುನ್ನ ಮುಂದಿಟ್ಟಿರುವ 10 ಷರತ್ತುಗಳು ಹೀಗಿವೆ..

1. ಇರಾನ್ ಮೇಲೆ ಯಾವುದೇ ರೀತಿಯ ಮಿಲಿಟರಿ ದಾಳಿ ನಡೆಸುವುದಿಲ್ಲ ಎಂದು ಖಚಿತಪಡಿಸಬೇಕು.

2. ಅಮೆರಿಕ ಇರಾನ್ ಮೇಲೆ ವಿಧಿಸಿರುವ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಆರ್ಥಿಕ ನಿರ್ಬಂಧಗಳನ್ನು ತಕ್ಷಣವೇ ರದ್ದುಗೊಳಿಸಬೇಕು.

3. ಹಾರ್ಮುಝ್ ಜಲಸಂಧಿಯ ಮೇಲೆ ಇರಾನ್ ತನ್ನ ಸಂಪೂರ್ಣ ಸಾರ್ವಭೌಮತ್ವ ಮತ್ತು ನಿಯಂತ್ರಣವನ್ನು ಮುಂದುವರಿಸುವುದು.

4. ಇರಾನ್‌ನ ಯುರೇನಿಯಂ ಸಂವರ್ಧನೆ ಹಕ್ಕನ್ನು ಅಮೆರಿಕ ಅಧಿಕೃತವಾಗಿ ಅಂಗೀಕರಿಸಬೇಕು.

5. ಪಶ್ಚಿಮ ಏಷ್ಯಾದ ಎಲ್ಲಾ ನೆಲೆಗಳಿಂದ ಅಮೆರಿಕ ತನ್ನ ಯುದ್ಧ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು.

6. ಯುದ್ಧದಿಂದ ಇರಾನ್‌ಗೆ ಉಂಟಾದ ಹಾನಿಗೆ ಅಮೆರಿಕ ಸಂಪೂರ್ಣ ಪರಿಹಾರ ನೀಡಬೇಕು.

7. ವಿದೇಶಗಳಲ್ಲಿ ಸ್ಥಗಿತಗೊಳಿಸಲಾದ ಇರಾನ್‌ನ ಎಲ್ಲಾ ಹಣಕಾಸು ಮತ್ತು ಆಸ್ತಿಗಳನ್ನು ಮುಕ್ತಗೊಳಿಸಬೇಕು.

8. ಇರಾನ್ ವಿರುದ್ಧ ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಹೊರಡಿಸಿರುವ ಎಲ್ಲಾ ನಿರ್ಣಯಗಳನ್ನು ಕೈಬಿಡಬೇಕು.

9. ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಸೇರಿದಂತೆ ಇರಾನ್ ಬೆಂಬಲಿತ ಗುಂಪುಗಳ ಮೇಲಿನ ದಾಳಿಗಳನ್ನು ನಿಲ್ಲಿಸಬೇಕು.

10.  ಈ ಒಪ್ಪಂದವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೂಲಕ ಕಾನೂನುಬದ್ಧವಾಗಿ ಜಾರಿಗೆ ಬರಬೇಕು. 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...