Homeಅಂತರಾಷ್ಟ್ರೀಯಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

- Advertisement -
- Advertisement -

ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಶೇಕಡ 50ಕ್ಕೆ ಹೆಚ್ಚಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (ಸಿಬಿಪಿ) ಕರಡು ಅಧಿಸೂಚನೆ ಹೊರಡಿಸಿದೆ ಎಂದು ವರದಿಯಾಗಿದೆ.

“ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆಗಳನ್ನು ಪರಿಹರಿಸುವುದು” ಎಂಬ ಶೀರ್ಷಿಕೆಯ, ಆಗಸ್ಟ್ 6, 2025ರಂದು ಟ್ರಂಪ್ ಸಹಿ ಹಾಕಿದ ಕಾರ್ಯಕಾರಿ ಆದೇಶ ಸಂಖ್ಯೆ 14329 ಅನ್ನು ಜಾರಿಗೆ ತರಲು ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧಿಸೂಚನೆಯು ಭಾರತದ ಉತ್ಪನ್ನಗಳಾದ ವಸ್ತುಗಳ ಆಮದಿನ ಮೇಲೆ ಹೊಸ ಸುಂಕ ದರವನ್ನು ನಿರ್ದಿಷ್ಟಪಡಿಸಿದೆ ಎಂದು ವರದಿಗಳು ಹೇಳಿವೆ.

ಆಗಸ್ಟ್ 27, 2025ರಂದು ಪ್ರಕಟಿಸಲು ನಿರ್ಧರಿಸಲಾದ ಕರಡು ಅಧಿಸೂಚನೆಯಲ್ಲಿ, ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅನುಗುಣವಾಗಿ ಯುನೈಟೆಡ್ ಸ್ಟೇಟ್ಸ್‌ನ ಹಾರ್ಮೋನೈಸ್ಡ್ ಟ್ಯಾರಿಫ್ ವೇಳಾಪಟ್ಟಿಯನ್ನು (HTSUS) ಮಾರ್ಪಡಿಸುವುದು ಅಗತ್ಯವೆಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಹೊಸ ಸುಂಕಗಳು ಆಗಸ್ಟ್ 27, 2025ರಿಂದ ಜಾರಿಗೆ ಬರಲಿವೆ ಎಂದು ಸಿಬಿಪಿ ಸ್ಪಷ್ಟಪಡಿಸಿದೆ. ಆಗಸ್ಟ್ 27ರ ತಡರಾತ್ರಿ 12:01ರಿಂದ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಬಳಕೆಗಾಗಿ ಆಮದು ಮಾಡಿಕೊಳ್ಳುವ ಅಥವಾ ಬಳಕೆಗಾಗಿ ಗೋದಾಮುಗಳಿಂದ ಪಡೆದುಕೊಳ್ಳುವ ಭಾರತದ ಎಲ್ಲಾ ಉತ್ಪನ್ನಗಳಿಗೆ ಹೆಚ್ಚಿನ ಸುಂಕಗಳು ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

ಜುಲೈ 30, 2025ರಂದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ಘೋಷಿಸಿದ್ದರು.

“ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ, ವಿಶ್ವದಲ್ಲೇ ಅತ್ಯಧಿಕವಾಗಿವೆ ಮತ್ತು ಅವರು ಇತರ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ”ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನ ಪೋಸ್ಟ್‌ನಲ್ಲಿ ಹೇಳಿದ್ದರು.

“ಅಲ್ಲದೆ, ಅವರು ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದಲೇ ಖರೀದಿಸಿದ್ದಾರೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರು ಹೌದು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಹತ್ಯೆಯನ್ನು ರಷ್ಯಾ ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ ಇದು ಒಳ್ಳೆಯದಲ್ಲ. ಆದ್ದರಿಂದ ಭಾರತವು ಆಗಸ್ಟ್‌ನಿಂದ ಪ್ರಾರಂಭಿಸಿ ಶೇಕಡ 25ರಷ್ಟು ಸುಂಕವನ್ನು ಮತ್ತು ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಿದರೆ ದಂಡವನ್ನೂ ಪಾವತಿಸಬೇಕು” ಎಂದು ಬರೆದುಕೊಂಡಿದ್ದರು.

ಆಗಸ್ಟ್ 27ರಿಂದ ಜಾರಿಗೆ ಬರುವಂತೆ ಭಾರತೀಯ ಸರಕುಗಳ ಮೇಲೆ ಅಮೆರಿಕ ಶೇ. 50ರಷ್ಟು ಸುಂಕ ಹೇರುವ ಬಗ್ಗೆ ಸೋಮವಾರ (ಆಗಸ್ಟ್ 25, 2025) ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, “ಅಮೆರಿಕದ ಆರ್ಥಿಕ ಒತ್ತಡವನ್ನು ಲೆಕ್ಕಿಸದೆ ತಮ್ಮ ಸರ್ಕಾರವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

“ಎಷ್ಟೇ ಒತ್ತಡ ಬಂದರೂ, ಅದನ್ನು ತಡೆದುಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳುತ್ತಲೇ ಇರುತ್ತೇವೆ. ಇಂದು, ಆತ್ಮನಿರ್ಭರ ಭಾರತ ಅಭಿಯಾನವು ಗುಜರಾತ್‌ನಿಂದ ಸಾಕಷ್ಟು ಶಕ್ತಿಯನ್ನು ಪಡೆಯುತ್ತಿದೆ ಮತ್ತು ಇದರ ಹಿಂದೆ ಎರಡು ದಶಕಗಳ ಕಠಿಣ ಪರಿಶ್ರಮವಿದೆ” ಎಂದು ಸೋಮವಾರ ಅಹಮದಾಬಾದ್‌ನಲ್ಲಿ ಮಾಡಿದ ಸಾರ್ವಜನಿಕ ಭಾಷಣದಲ್ಲಿ ಮೋದಿ ಹೇಳಿಕೆ ನೀಡಿದ್ದಾರೆ.

ಹೆಚ್ಚುವರಿ ಸುಂಕದ ಪರಿಣಾಮವೇನು? 

2024ರಲ್ಲಿ ಅಮೆರಿಕವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿದ್ದು, 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಕಳಿಸಿಕೊಟ್ಟಿದೆ.

ಶೇ. 50ರಷ್ಟು ಸುಂಕ ‘ವ್ಯಾಪಾರ ನಿರ್ಬಂಧಕ್ಕೆ ಸಮಾನವಾದುದು’ ಎಂದು ಆರ್ಥಿಕ ಸೇವೆಗಳ ಸಂಸ್ಥೆ ನೋಮುರಾದ ವಿಶ್ಲೇಷಕರು ಎಚ್ಚರಿಸಿದ್ದಾರೆ. ಇದು ‘ಕಡಿಮೆ ಮೌಲ್ಯವರ್ಧನೆ ಮತ್ತು ಲಾಭ’ ಹೊಂದಿರುವ ಸಣ್ಣ ಸಂಸ್ಥೆಗಳನ್ನು ನಾಶಪಡಿಸುತ್ತದೆ ಎಂಬುವುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

“ಇಷ್ಟೊಂದು ಭಾರವಾದ ಆಮದು ತೆರಿಗೆಳ ಅಡಿಯಲ್ಲಿ ಯಾವುದೇ ಭಾರತೀಯ ಉತ್ಪನ್ನವು ಯಾವುದೇ ಸ್ಪರ್ಧಾತ್ಮಕ ಅಂಚನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಮತ್ತೊಂದು ಆರ್ಥಿಕ ಸೇವೆಗಳ ಸಂಸ್ಥೆ ಎಲಾರಾ ಸೆಕ್ಯುರಿಟೀಸ್‌ನ ಗರಿಮಾ ಕಪೂರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಗಾಜಾದಲ್ಲಿ ಇಸ್ರೇಲ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 15 ಜನರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...