Homeಅಂತರಾಷ್ಟ್ರೀಯಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

- Advertisement -
- Advertisement -

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ.

ಮಾರ್ಚ್ 31ರಂದು ಶೆಲ್ಲಿ ಕಿಟಲ್‌ಸನ್ ಅವರನ್ನು ಅಪಹರಿಸಲಾಗಿತ್ತು. ಅವರು ತಕ್ಷಣ ಇರಾಕ್ ತೊರೆಯಬೇಕೆಂಬ ಷರತ್ತಿನ ಮೇಲೆ ಬಿಡುಗಡೆ ಮಾಡುವುದಾಗಿ ಇರಾನ್ ಬೆಂಬಲಿತ ಮಿಲಿಟರಿ ಗುಂಪು ಕತೈಬ್ ಹಿಝ್ಬುಲ್ಲಾ ಮಂಗಳವಾರ (ಏ.7) ಹೇಳಿತ್ತು.

“ಅಮೆರಿಕದ ನಾಗರಿಕರು ಜಗತ್ತಿನ ಎಲ್ಲೇ ಇದ್ದರೂ ಅವರ ಸುರಕ್ಷತೆ ಮತ್ತು ಭದ್ರತೆಗೆ ಟ್ರಂಪ್ ಆಡಳಿತದ ದೃಢ ಬದ್ಧತೆಯನ್ನು ಈ ಬಿಡುಗಡೆ ಪ್ರತಿಬಿಂಬಿಸುತ್ತದೆ” ಎಂದು ರುಬಿಯೊ ಹೇಳಿದ್ದಾರೆ.

ಪತ್ರಕರ್ತೆಯ ಬಿಡುಗಡೆಗೆ ಸಹಾಯ ಮಾಡಿದ್ದಕ್ಕಾಗಿ ಅವರು ಇರಾಕ್‌ನ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ. “ಅಮೆರಿಕ ಈಗ ಇರಾಕ್‌ನಿಂದ ಆಕೆಯ ಸುರಕ್ಷಿತ ನಿರ್ಗಮನವನ್ನು ಬೆಂಬಲಿಸಲು ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

49 ವರ್ಷದ ಕಿಟಲ್‌ಸನ್ ಅವರ ಅಪಹರಣದ ಸಮಯದಲ್ಲಿ ಭದ್ರತಾ ಪಡೆಗಳು ಶಂಕಿತರನ್ನು ಬೆನ್ನಟ್ಟಿದ್ದು, ಅಪಹರಣಕಾರರ ಕಾರುಗಳಲ್ಲಿ ಒಂದು ಮಗುಚಿ ಬಿದ್ದಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಇರಾಕ್ ಸರ್ಕಾರ ತಿಳಿಸಿದೆ.

ಕಳೆದ ವಾರ, ಇರಾಕ್‌ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ವಿದೇಶಿಯರನ್ನು ಅಪಹರಿಸುವವರ ಬೆನ್ನಟ್ಟುವಂತೆ ಭದ್ರತಾ ಪಡೆಗಳಿಗೆ ಆದೇಶಿಸಿದ್ದರು.

ಈ ನಡುವೆ, ಪ್ರತ್ಯೇಕ ಪೋಸ್ಟ್‌ ಒಂದರಲ್ಲಿ ಕತೈಬ್ ಹಿಜ್ಬುಲ್ಲಾದ ಮುಖ್ಯಸ್ಥ ಅಸಾಫ್, ಕಿಟಲ್ಸನ್ ಅವರ ಇರಾಕ್‌ನಲ್ಲಿನ ಪಾತ್ರ ಮತ್ತು ಚಟುವಟಿಕೆಗಳನ್ನು ತೋರಿಸುವ ರೆಕಾರ್ಡಿಂಗ್ ಅನ್ನು ಗುಂಪು ಬಿಡುಗಡೆ ಮಾಡಲಿದೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಇರಾನ್ ಮೇಲಿನ ಅಮೇರಿಕ-ಇಸ್ರೇಲ್ ದಾಳಿ ಪ್ರಾರಂಭವಾದಾಗಿನಿಂದ, ಇರಾನ್ ಮತ್ತು ಅದರ ಮಿತ್ರಪಕ್ಷಗಳಾದ ಇರಾಕಿ ಶಿಯಾ ಬಂಡುಕೋರ ಗುಂಪುಗಳು ಇರಾಕ್ ಸೇರಿದಂತೆ ಈ ವಲಯದಾದ್ಯಂತ ಇರುವ ಅಮೆರಿಕದ ಗುರಿಗಳ ಮೇಲೆ ನಡೆಸುತ್ತಿರುವ ಸರಣಿ ದಾಳಿಗಳ ನಡುವೆಯೇ ಈ ಅಪಹರಣ ನಡೆದಿತ್ತು.

ಕಿಟಲ್‌ಸನ್ ಅವರ ಗೆಳೆಯ ಮತ್ತು ಸಿಎನ್ಎನ್ ಭದ್ರತಾ ವಿಶ್ಲೇಷಕ ಅಲೆಕ್ಸ್ ಪ್ಲಿಟ್ಸಾಸ್ ಅವರು, “ಆಕೆಯ ಬಿಡುಗಡೆಯ ಬಗ್ಗೆ ಬಂದಿರುವ ಸುದ್ದಿಯನ್ನು ನಾನು ನೋಡಿದ್ದೇನೆ. ಆದರೆ ಇದು ನಿಜವೇ ಎಂದು ಅಮೆರಿಕ ಸರ್ಕಾರ ನಮಗೆ ಇನ್ನೂ ಅಧಿಕೃತವಾಗಿ ತಿಳಿಸಿಲ್ಲ” ಎಂದಿದ್ದಾರೆ.

ಕಿಟಲ್‌ಸನ್ ಅಪಹರಣಕ್ಕೊಳಗಾಗುವ ಮೊದಲು, ಅಮೆರಿಕದ ಅಧಿಕಾರಿಗಳು ಆಕೆಯನ್ನು ಹಲವು ಬಾರಿ ಸಂಪರ್ಕಿಸಿದ್ದರು. ಆಕೆಯ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಅವರು ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯಾಗಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...