Homeಅಂತರಾಷ್ಟ್ರೀಯಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

- Advertisement -
- Advertisement -

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯ ಆಡಳಿತದ ಭವಿಷ್ಯವನ್ನು ನಿರ್ಧರಿಸಲಿರುವ ಈ ಚುನಾವಣೆಯಲ್ಲಿ, ಪ್ರತಿಪಕ್ಷ ಡೆಮಾಕ್ರಟಿಕ್ ಮತ್ತು ಆಡಳಿತರೂಢ ರಿಪಬ್ಲಿಕನ್ ಪಕ್ಷಗಳ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ.

ಕಾಂಗ್ರೆಸ್ (ಸಂಸತ್ತು) ನಿಯಂತ್ರಣಕ್ಕೆ ತೀವ್ರ ಪೈಪೋಟಿ:

ಅಮೆರಿಕ ಸಂಸತ್ತಿನ (ಕಾಂಗ್ರೆಸ್) ಉಭಯ ಸದನಗಳಾದ ಸೆನೆಟ್ ಮತ್ತು ಪ್ರತಿನಿಧಿ ಸಭೆಯ (ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್) ಅಧಿಕಾರ ಹಿಡಿಯಲು ಎರಡೂ ಪಕ್ಷಗಳು ಸೆಣಸಾಡುತ್ತಿವೆ. ಸದ್ಯದ ಆರಂಭಿಕ ಟ್ರೆಂಡ್‌ಗಳ ಪ್ರಕಾರ, ವಿರೋಧ ಪಕ್ಷವಾದ ಡೆಮಾಕ್ರಟಿಕ್ ಮಹತ್ವದ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಆಡಳಿತರೂಢ ರಿಪಬ್ಲಿಕನ್ ಪಕ್ಷಕ್ಕೆ ತೀವ್ರ ಪೈಪೋಟಿ ನೀಡುತ್ತಿದೆ.

ಸೆನೆಟ್‌ನ ಒಟ್ಟು 100 ಸ್ಥಾನಗಳ ಪೈಕಿ 35 ಸ್ಥಾನಗಳಿಗೆ ಮಧ್ಯಂತರ ಚುನಾವಣೆ ನಡೆದಿದ್ದು, ಪ್ರಸ್ತುತ ಡೆಮಾಕ್ರಟಿಕ್ ಪಕ್ಷವು ಮ್ಯಾಜಿಕ್ ನಂಬರ್ ದಾಟಿ 51 ಸ್ಥಾನಗಳಲ್ಲಿ (ಕ್ಯಾರಿ ಓವರ್ ಸ್ಥಾನಗಳು ಸೇರಿದಂತೆ) ಮುನ್ನಡೆ ಸಾಧಿಸುವ ಮೂಲಕ ಸದನದ ಮೇಲಿನ ಹಿಡಿತವನ್ನು ಬಲಪಡಿಸಿಕೊಳ್ಳುವ ಮುನ್ಸೂಚನೆ ನೀಡಿದೆ. ರಿಪಬ್ಲಿಕನ್ ಪಕ್ಷವು ಪ್ರಸ್ತುತ 40 ಸ್ಥಾನಗಳಲ್ಲಿ ಮುನ್ನಡಿಯಲ್ಲಿದೆ.

ಪ್ರತಿನಿಧಿ ಸಭೆಯ ಅಥವಾ ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್‌ನ ಒಟ್ಟು 435 ಸ್ಥಾನಗಳಿಗೆ ಮತದಾನ ನಡೆದಿದ್ದು, ಬಹುಮತಕ್ಕೆ 218 ಸ್ಥಾನಗಳ ಅಗತ್ಯವಿದೆ. ಸದ್ಯದ ಎಣಿಕೆಯ ಪ್ರಕಾರ ಡೆಮಾಕ್ರಟಿಕ್ ಪಕ್ಷವು 188 ಸ್ಥಾನಗಳಲ್ಲಿ ಜಯ ಹಾಗೂ ಮುನ್ನಡೆ ಗಳಿಸಿದ್ದರೆ, ರಿಪಬ್ಲಿಕನ್ ಪಕ್ಷವು 110 ಸ್ಥಾನಗಳೊಂದಿಗೆ ಹಿನ್ನಡೆ ಅನುಭವಿಸುತ್ತಿದೆ.

ಟ್ರಂಪ್ ಆಡಳಿತಕ್ಕೆ ಕುತ್ತು?:

ರಾಜಕೀಯ ವಿಶ್ಲೇಷಕರ ಪ್ರಕಾರ, ಈ ಚುನಾವಣೆಯು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆ ಮತ್ತು ಅವರ ಆಡಳಿತ ನೀತಿಗಳಿಗೆ ದಿಕ್ಸೂಚಿಯಾಗಿದೆ. ಈ ಚುನಾವಣೆಯಿಂದ ಅವರ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ನೇರ ಕುತ್ತು ಬರದಿದ್ದರೂ, ಸಂಸತ್ತಿನಲ್ಲಿ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಬಹುಮತ ಸಾಧಿಸಿದರೆ ಟ್ರಂಪ್ ಅವರ ಮುಂಬರುವ ಯೋಜನೆಗಳಿಗೆ ದೊಡ್ಡ ಹಿನ್ನಡೆಯಾಗಲಿದೆ. ಬಜೆಟ್ ಮಂಜೂರಾತಿ, ಹೊಸ ಕಾನೂನುಗಳ ಜಾರಿ ಮತ್ತು ಪ್ರಮುಖ ಆಡಳಿತಾತ್ಮಕ ನೇಮಕಾತಿಗಳಿಗೆ ವಿರೋಧ ಪಕ್ಷಗಳು ತಡೆಯೊಡ್ಡುವ ಸಾಧ್ಯತೆ ದಟ್ಟವಾಗಿದೆ.

ಚುನಾವಣೆಯ ಸಂಪೂರ್ಣ ಫಲಿತಾಂಶಗಳು ಹೊರಬರಲು ಇನ್ನೂ ಕೆಲವು ಗಂಟೆಗಳು ಅಥವಾ ದಿನಗಳು ಬೇಕಾಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಶ್ವೇತಭವನದ ಮೇಲಿನ ಹಿಡಿತವನ್ನು ಉಳಿಸಿಕೊಳ್ಳಲು ಟ್ರಂಪ್ ಸರ್ಕಾರಕ್ಕೆ ಸಂಸತ್ತಿನ ಬಹುಮತ ಅತ್ಯಂತ ನಿರ್ಣಾಯಕವಾಗಿದೆ.

ಏನಿದು ಮಧ್ಯಂತರ ಚುನಾವಣೆ :

ಅಮೆರಿಕದ ರಾಜಕೀಯದಲ್ಲಿ ಅಧ್ಯಕ್ಷೀಯ ಚುನಾವಣೆ ಮತ್ತು ಮಧ್ಯಂತರ ಚುನಾವಣೆ ಎಂಬ ಎರಡು ಮಹತ್ವದ ಚುನಾವಣೆಗಳು ನಡೆಯುತ್ತವೆ. ಅಧ್ಯಕ್ಷೀಯ ಚುನಾವಣೆಯಲ್ಲಿ ದೇಶದ ಜನರು ನೇರವಾಗಿ ಮತಚಲಾಯಿಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ.

ಇದೇ ಸಂದರ್ಭದಲ್ಲಿ ಸಂಸತ್ತಿನ ಕೆಳಮನೆಯಾದ (ಭಾರತದ ಲೋಕಸಭೆಯಂತೆ) ಪ್ರತಿನಿಧಿ ಸಭೆಯ ಅಥವಾ ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್‌ನ ಎಲ್ಲಾ 435 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿ 4 ವರ್ಷಗಳಾದರೆ, 435 ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್‌ ಸದಸ್ಯರ ಅಧಿಕಾರವಧಿ ಕೇವಲ 2 ವರ್ಷಗಳಾಗಿದೆ.

ಹಾಗಾಗಿ, ಅಧ್ಯಕ್ಷರ ಎರಡು ವರ್ಷದ ಆಡಳಿತದ ನಡುವೆ ಮಧ್ಯಂತರ ಚುನಾವಣೆ ನಡೆಯುತ್ತದೆ. ಈ ವೇಳೆ ಮತ್ತೊಮ್ಮೆ ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್‌ನ ಎಲ್ಲಾ 435 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ.

ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್‌ನಲ್ಲಿ 50 ರಾಜ್ಯಗಳಿಗೆ ತಲಾ ಎರಡು ಸ್ಥಾನಗಳಂತೆ 100 ಸ್ಥಾನಗಳಿವೆ. ಸೆನೆಟ್ ಸದಸ್ಯರ ಅಧಿಕಾರವಧಿ 6 ವರ್ಷಗಳು. ಹಾಗಾಗಿ, ಮಧ್ಯಂತರ ಚುನಾವಣೆಯಲ್ಲಿ ಸೆನೆಟ್‌ನ ಎಲ್ಲಾ ಸ್ಥಾನಗಳಿಗೆ ಚುನಾವಣೆ ನಡೆಯುವುದಿಲ್ಲ. ಸುಮಾರು 35 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತದೆ.

ಸೆನೆಟ್‌ನಲ್ಲಿ ಬಹುಮತ ಪಡೆಯಲು 100 ಸ್ಥಾನಗಳ ಪೈಕಿ 50 ಸ್ಥಾನಗಳನ್ನು ಗೆಲ್ಲಬೇಕು. ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್‌ನಲ್ಲಿ ಬಹುಮತ ಪಡೆಯಲು 218 ಸ್ಥಾನಗಳ ಅಗತ್ಯವಿದೆ.











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...