Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

- Advertisement -
- Advertisement -

ಯುಎಸ್‌ (ಅಮೆರಿಕ) ನ ಮುಂದಿನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ (ನ.5) ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಕಮಲಾ ಹ್ಯಾರಿಸ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ನಿರ್ಣಾಯಕ ಏಳು ರಾಜ್ಯಗಳ ಪೈಕಿ ಐದರಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದೆ. ಟ್ರಂಪ್ ಅವರು ಈಗಾಗಲೇ ಉತ್ತರ ಕೆರೊಲಿನಾವನ್ನು ಗೆದ್ದುಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಶೇಕಡಾ 50.8, ಅಂದರೆ 25,71,258 ಮತಗಳನ್ನು ಗಳಿಸಿದರೆ, ಕಮಲಾ ಹ್ಯಾರಿಸ್ 24,36,454 ( ಶೇ. 48.1) ಮತಗಳನ್ನು ಗಳಿಸಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲಲು ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಕಮಲಾ ಹ್ಯಾರಿಸ್ ಎದುರು ಟ್ರಂಪ್ 230-210 ಅಂತರದ ಮುನ್ನಡೆಯಲ್ಲಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾರಿಸ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಮಹಿಳೆ ಎಂದು ಎನಿಸಿಕೊಳ್ಳಲು ಆಶಿಸಿದ್ದಾರೆ. ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಇತಿಹಾಸ ನಿರ್ಮಿಸುವ ಪ್ರಯತ್ನದಲ್ಲಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ? ( ಬೆಳಿಗ್ಗೆ 11 ಗಂಟೆ- IST)

ಡೊನಾಲ್ಡ್‌ ಟ್ರಂಪ್‌ : ಯೊಮಿಂಗ್‌ (3), ವೆಸ್ಟ್ ವರ್ಜೀನಿಯಾ (4), ಉತಾಹ್‌ (6), ಟೆಕ್ಸಾಸ್‌ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (9), ಒಕ್ಲಾಹೊಮಾ (7), ಒಹಿಯೊ (17), ನೆಬ್ರಸ್ಕಾ (3), ಉತ್ತರ ಡಕೋಟ (3), ಮೊಂಟಾನ (4), ಮಿಸ್ಸಿಸ್ಸಿಪ್ಪಿ (6), ಮಿಸ್ಸೌರಿ (10), ಲೂಸಿಯಾನಾ (8), ಕೆಂಟುಕಿ (8), ಕಾನ್ಸಾಸ್‌ (6), ಇಂಡಿಯಾನಾ (11), ಲೋವಾ (6), ಫ್ಲೋರಿಡಾ (30), ಅರ್ಕಾನ್ಸಸ್‌ (6), ಅಲಬಾಮ (9).

ಕಮಲಾ ಹ್ಯಾರಿಸ್‌ : ಕೊಲೊರಾಡೊ (10), ಕನೆಕ್ಟಿಕಟ್ (7), ವಾಷಿಂಗ್ಟನ್‌ (3), ಡೆಲವೇರ್‌ (3), ಇಲಿನಿಯೊಸ್‌ (19), ಮಸ್ಸಾಚುಸೆಟ್ಸ್‌ (11), ಮೇರಿಲ್ಯಾಂಡ್‌ (10), ನ್ಯೂಜೆರ್ಸಿ (14), ನ್ಯೂಯಾರ್ಕ್‌ (28), ರೋಡ್ ಐಸ್‌ಲ್ಯಾಂಡ್ (4), ವೆರ್ಮಾಂಟ್‌ (3).

ನಿರೀಕ್ಷೆಯಂತೆ ಟ್ರಂಪ್ ಅವರು ‘ಕೆಂಪು ರಾಜ್ಯಗಳು’ ಎಂದು ಗುರುತಿಸಲ್ಪಡುವ ಸಾಂಪ್ರಾದಾಯಿಕ ಅಮೆರಿಕನ್ನರು ಹೆಚ್ಚಿರುವ ಕಡೆಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. ಈ ರಾಜ್ಯಗಳ ಪೈಕಿ ಇಂಡಿಯಾನಾ, ಕೆಂಟುಕಿ ಮತ್ತು ವೆಸ್ಟ್ ವರ್ಜೀನಿಯಾದಲ್ಲಿ ಗೆಲುವು ಸಾಧಿಸಿದ್ದಾರೆ.

ಟೆಕ್ಸಾಸ್‌ನಲ್ಲಿ 40 ಸ್ಥಾನಗಳನ್ನು ಟ್ರಂಪ್ ಪಡೆದಿದ್ದಾರೆ. 2016 ರಿಂದಲೂ ಪ್ರತಿ ಚುನಾವಣೆಗಳಲ್ಲಿ ಅವರು ಇಲ್ಲಿ ಇಷ್ಟು ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಓಹಿಯೋದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಟ್ರಂಪ್ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.

ಮತ್ತೊಂದೆಡೆ, ಹ್ಯಾರಿಸ್ ಅವರು ಡೆಮಾಕ್ರಟಿಕ್ ಭದ್ರಕೋಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ, ನ್ಯೂಯಾರ್ಕ್‌ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಅಲ್ಲಿ ಅವರು 28 ಸ್ಥಾನಗಳನ್ನು ಪಡೆದಿದ್ದಾರೆ. ‘ನೀಲಿ ರಾಜ್ಯಗಳು’ ಎಂದು ಗುರುತಿಸಲ್ಪಡುವ ಉದಾರವಾದಿ ಅಮೆರಿಕನ್ನರು ಹೆಚ್ಚಿರುವ ಪ್ರದೇಶಗಳಾದ ಇಲಿನಿಯೊಸ್‌ (19) ನ್ಯೂಜೆರ್ಸಿ(14) ಮತ್ತು ಕೊಲೊರಾಡೋ ಮತ್ತು ವಾಷಿಂಗ್ಟನ್ ಡಿ.ಸಿ ಸೇರಿದಂತೆ ಈಶಾನ್ಯದ ಇತರ ರಾಜ್ಯಗಳಲ್ಲಿ ಹ್ಯಾರಿಸ್ ಪ್ರಾಬಲ್ಯ ಸಾಧಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿಯಂದು ದೇವಸ್ಥಾನದ ಮೇಲೆ ದಾಳಿ; ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...