Homeಮುಖಪುಟಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

ಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

- Advertisement -
- Advertisement -

ಅಕ್ರಮ ಬಂದೂಕು ಖರೀದಿ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತನ್ನ ಮಗ ಹಂಟರ್ ಬೈಡನ್‌ಗೆ ಕ್ಷಮಾದಾನ ನೀಡುವ ಅರ್ಜಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ (ಡಿ.1) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಾವಧಿಯ ಕೊನೆಯಲ್ಲಿ ಬೈಡನ್‌ ತೆಗೆದುಕೊಂಡ ಈ ನಿಲುವು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಬೈಡನ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಆದರೆ, ಬೈಡನ್‌ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, “ನನ್ನ ಮಗನನ್ನು ‘ರಾಜಕೀಯವಾಗಿ ಗುರಿಪಡಿಸಲಾಗಿದೆ. ಅನ್ಯಾಯವಾಗಿ ಶಿಕ್ಷೆಗೆ ಒಳಪಡಿಸಲಾಗಿದೆ” ಎಂದಿದ್ದಾರೆ.

“ಇಂದು, ನಾನು ನನ್ನ ಮಗ ಹಂಟರ್‌ ಕ್ಷಮಾದಾನಕ್ಕೆ ಸಹಿ ಹಾಕಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ದಿನದಿಂದ ಇದುವರೆಗೆ ನ್ಯಾಯಾಂಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೇನೆ. ಆದೇ ರೀತಿ ನಡೆದುಕೊಂಡಿದ್ದೇನೆ. ಮಗನನ್ನು ಅನ್ಯಾಯವಾಗಿ ವಿಚಾರಣೆಗೆ ಒಳಪಡಿಸಿದಾಗಲೂ ನನ್ನ ಮಾತನ್ನು ಉಳಿಸಿದ್ದೇನೆ. ಸದ್ಯ ಆತನ (ಹಂಟರ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬೈಡನ್ ತಿಳಿಸಿದ್ದಾರೆ.

ಬೈಡನ್ ಪುತ್ರ ಹಂಟರ್ ಒಬ್ಬ ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ಕ್ಷಮಿಸುವುದಾಗಲಿ ಅಥವಾ ಶಿಕ್ಷೆಯನ್ನು ಕಡಿಮೆ ಮಾಡುವುದಾಗಲಿ ಮಾಡುವುದಿಲ್ಲ ಎಂದು ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ ಪಕ್ಷದ ನಾಯಕರು ಪದೇ ಪದೇ ಹೇಳಿದ್ದರು.

ಇದೀಗ ಬೈಡನ್‌ ಮಗನ ಕ್ಷಮಾದಾನಕ್ಕೆ ಸಹಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಇದು ಕಾನೂನಿನ ದುರ್ಬಳಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಅಕ್ರಮವಾಗಿ ಬಂದೂಕು ಖರೀದಿಸಿದ್ದ ಪ್ರಕರಣದಲ್ಲಿ ಹಂಟರ್‌ ಬೈಡನ್‌ ವಿರುದ್ಧ 2023ರ ಸೆಪ್ಟೆಂಬರ್‌ 15ರಂದು ದೋಷಾರೋಪ ಹೊರಿಸಲಾಗಿತ್ತು.

ಡೆಲವೇರ್‌ನಲ್ಲಿ ಕೋಲ್ಟ್‌ ರಿವಾಲ್ವರ್‌ ಖರೀದಿಸಿದ್ದ ಸಮಯದಲ್ಲಿ ತಾನು ಡ್ರಗ್ಸ್‌ ಬಳಸುತ್ತಿರಲಿಲ್ಲ ಎಂದು ಹಂಟರ್ ಬೈಡನ್‌ ಸುಳ್ಳು ಹೇಳಿಕೆ ನೀಡಿದ್ದರು ಎಂದು ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸುಳ್ಳು ಹೇಳಿಕೆಗಳ ಆಧಾರದಲ್ಲಿ ಅಕ್ರಮ ಬಂದೂಕು ಹೊಂದಿದ್ದರು ಎಂಬ ಮೂರನೇ ದೊಷಾರೋಪವೂ ಹಂಟರ್‌ ಬೈಡನ್‌ ಮೇಲೆ ಇತ್ತು.

ಅಕ್ರಮವಾಗಿ ಬಂದೂಕು ಖರೀದಿಸಿದ ಪ್ರಕರಣದಲ್ಲಿ ಡಿಸೆಂಬರ್ 12 ರಂದು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಫೆಡರಲ್ ತೆರಿಗೆ ವಂಚನೆ ಆರೋಪಗಳಿಗೆ ಅವರು ತಪ್ಪೊಪ್ಪಿಕೊಂಡ ಪ್ರತ್ಯೇಕ ಕ್ರಿಮಿನಲ್ ಪ್ರಕರಣದಲ್ಲಿ, ಇದೇ ಡಿಸೆಂಬರ್ 16ರಂದು ಶಿಕ್ಷೆ ಘೋಷಣೆಯಾಗಲಿತ್ತು. ಆದರೆ, ಬೈಡನ್ ಕ್ಷಮಾದಾನ ನೀಡುವ ಮೂಲಕ ಮಗನಿಗೆ ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ : ‘ಹೆದ್ದಾರಿ ತಡೆದು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ..’; ಪ್ರತಿಭಟನಾ ನಿರತ ರೈತ ಮುಖಂಡರಿಗೆ ಸುಪ್ರೀಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...