Homeಕರ್ನಾಟಕಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ - ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ.

ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ ಎಲ್ಲ ಜನರನ್ನು ಭಾರತೀಯರು ಅಂತ ತಿಳಿದುಕೊಂಡು ನರೇಂದ್ರ ಮೋದಿಯವರು ದೇಶದ ಆಡಳಿತವನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಾತ್ರ ಸೂಪರ್ ಪವರ್ ಭಾರತ ನಿರ್ಮಾಣವಾಗುತ್ತದೆ. ರಷ್ಯಾ-ಉಕ್ರೇನ್ ನಡುವೆ ಯುದ್ಧವಾದಾಗ ಅಮೆರಿಕದ ಅಧ್ಯಕ್ಷರನ್ನು ಕರೆಯಲಿಲ್ಲ. ಬದಲಾಗಿ, ಯುದ್ಧ ನಿಲ್ಲಿಸಲು ನರೇಂದ್ರ ಮೋದಿಯವರನ್ನು ಕರೆದಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿಯವರೇ, ನೀವು ಬನ್ನಿ, ಯುದ್ಧ ನಿಲ್ಲಿಸಿ ಅಂತ ಉಕ್ರೇನ್‌ನ ಅಧ್ಯಕ್ಷ ಮನವಿ ಮಾಡಿದ್ದರು. ಯಾಕೆಂದರೆ, ಭಾರತ ಅಷ್ಟೊಂದು ಸೂಪರ್ ಪವರ್” ಎಂದು ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಪ್ರತಿಪಾದಿಸಿದ್ದಾರೆ. ಅದಾಗ್ಯೂ, ವಿದೇಶಾಂಗ ಸಚಿವಾಲಯವು ಉಕ್ರೇನ್ ಮತ್ತು ರಷ್ಯಾ ಯುದ್ಧದ ವಿಚಾರವಾಗಿ ಈ ರೀತಿಯ ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿತ್ತು. ಅದರೂ ಬಿಜೆಪಿ ಅಭಿಮಾನಿಗಳು ಮತ್ತು ನಾಯಕರು ಅದನ್ನೆ ಪದೇ ಪದೇ ಹೇಳುತ್ತಾ ಸುಳ್ಳು ಹರಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧವಾದಾಗಲೂ ಕೂಡ ನರೇಂದ್ರ ಮೋದಿಯವರನ್ನು ಯುದ್ಧ ನಿಲ್ಲಿಸಲು ಕರೆದಿದ್ದರು. ಅದೇ ರೀತಿ, ಅಮೆರಿಕದ ಅಧ್ಯಕ್ಷ ಕೂಡ ಇವತ್ತು ಯಾವುದೇ ನಿರ್ಧಾರ ಮಾಡುವುದಿದ್ದರೆ ಮೊದಲು ಯೋಚನೆ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು. ಮೋದಿಯವರನ್ನು ಕೇಳಿಯೇ ನಿರ್ಧಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಇದು ನಮಗೆ ಹೆಮ್ಮೆಯ ವಿಷಯವಾಗಬೇಕು. ನಮ್ಮನ್ನು ಕೇಳಿಯೇ ಅಲ್ಲಿ ಆಡಳಿತ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶದಲ್ಲಿ ನಾವು ಬದುಕುತ್ತಿದ್ದೇವೆ ಎಂಬ ಹೆಮ್ಮೆ ನಮಗಿರಬೇಕು. ಇದಕ್ಕೆಲ್ಲ ಮೋದಿಯವರು ಕಾರಣ. 2030ರ ವೇಳೆಗೆ ಭಾರತ ಸೂಪರ್ ಪವರ್ ದೇಶವಾಗುತ್ತದೆ” ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದು, “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಈ ಹೇಳಿಕೆಯನ್ನು ಕೇಳಿ ನಗಬೇಕೊ ಆಳಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಅಮೆರಿಕ ದೇಶದಲ್ಲಿ ಯಾವುದೇ ನಿರ್ಧಾರ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯ ಮಾತು ಕೇಳಿಯಂತೆ. ಅಮೆರಿಕದ 1 ಡಾಲರ್ ಭಾರತದ 84 ರೂಪಾಯಿಗೆ ಸಮವಾಗಿದೆ. ಇದು ಕೂಡ ಮೋದಿಯ ಸಲಹೆಯಿಂದ ಆಗಿರಬಹುದು. ಮತ ನೀಡಿದ ಮತದಾರರ ಕಿವಿಗೆ ಹೂ ಇಡುವುದರಲ್ಲಿ ಬೆಳ್ತಂಗಡಿ ಶಾಸಕರು ನಿಸ್ಸೀಮರು” ಬಳಕೆದಾರರೊಬ್ಬರು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದ ಬಗ್ಗೆ ಬಿಜೆಪಿ ಹರಡಿದ ಸುಳ್ಳು!

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದಾಗ, ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿ ಉಕ್ರೇನ್‌ನಲ್ಲಿ ರಷ್ಯಾ ಕೆಲಕಾಲ ದಾಳಿಯನ್ನು ಸ್ಥಗಿತಗೊಳಿಸಿತ್ತು ಎಂದು ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಂಘಪರಿವಾರದವರು ಸುದ್ದಿ ಹರಡಿದ್ದರು.

ಬಿಜೆಪಿ ಹರಡಿದ್ದ ಸುಳ್ಳನ್ನು ನಂಬಿ ಬಿಜೆಪಿ ಪರ ಮಾಧ್ಯಮಗಳು, ವರದಿ ಪ್ರಕಟಿಸಿತ್ತು. ಬಳಿಕ ಎಲ್ಲವೂ ಸುಳ್ಳು ಎಂದು ಗೊತ್ತಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಆಗಿನ ವಿದೇಶಾಂಗ ಇಲಾಖೆಯ ಅಧಿಕಾರಿ ಅರಿಂದಮ್ ಬಾಗ್ಚಿ, ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.

“ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲು ನಮಗೆ ಸೂಕ್ತ ಮಾರ್ಗಗಳನ್ನು ರಷ್ಯಾ ಹಾಗೂ ಉಕ್ರೇನ್ ಸರ್ಕಾರಗಳು ವಿವರಿಸಿದವು. ಹೀಗಾಗಿ, ನಾವು ಉಕ್ರೇನ್‌ನಲ್ಲಿ ಇರುವ ನಮ್ಮ ಪ್ರಜೆಗಳಿಗೆ ಈ ಮಾಹಿತಿಯನ್ನು ರವಾನಿಸಿ ಅವರನ್ನು ಉಕ್ರೇನ್‌ ದೇಶದ ಗಡಿ ದಾಟಿಸಿದೆವು. ಈ ರಕ್ಷಣಾ ಕಾರ್ಯಾಚರಣೆಗೆ ಸಹಕಾರ ನೀಡಿದ ದೇಶಗಳಿಗೆ ಧನ್ಯವಾದ ಹೇಳುತ್ತೇವೆ. ಇದು ನಮಗೆ ಖುಷಿ ತಂದಿದೆ” ಎಂದು ಅವರು ಹೇಳಿದ್ದರು.

“ನಮ್ಮ ಮನವಿಗೆ ಸೇನೆ ಸ್ಪಂದಿಸಿ ಭಾರತೀಯರ ತೆರವು ಕಾರ್ಯಾಚರಣೆ ವೇಳೆ ಬಾಂಬ್ ದಾಳಿ ನಿಲ್ಲಿಸಲಾಗಿತ್ತು ಎಂಬ ವಿಚಾರ ಸತ್ಯಕ್ಕೆ ದೂರವಾದ ವಿಚಾರ” ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...