Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...